ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜ್‌ನ ಘಟಿಕೋತ್ಸವ
Team Udayavani, Mar 10, 2017, 7:24 AM IST
ಮಂಗಳೂರು: ಸಮಗ್ರತೆ, ಸಹಾನುಭೂತಿ ಹಾಗೂ ನಿಷ್ಠೆ ಪಾಲನೆಯನ್ನು ನರ್ಸಿಂಗ್ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಬೆಂಗಳೂರಿನ ಸಂತ ಜಾನ್ಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ| ಸೆಲ್ಸಿ ಮೇರಿ ಅಭಿಪ್ರಾಯಪಟ್ಟರು.
ನಗರದ ಕುಂಟಿಕಾನದಲ್ಲಿರುವ ಎ.ಜೆ. ಅಡಿಟೋರಿಯಂನಲ್ಲಿ ಗುರುವಾರ ಏರ್ಪಡಿಸಲಾದ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್‌ನ ಘಟಿಕೋತ್ಸವ ಹಾಗೂ ವಾರ್ಷಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನರ್ಸಿಂಗ್ ಕಲೆ ಹಾಗೂ ವಿಜ್ಞಾನ ಒಳಗೊಂಡಿದೆ. ತಮಗೆ ಏನೇ ಸಮಸ್ಯೆಗಳಿದ್ದರೂ ಅದನ್ನು ಎದುರಿಸಿ ನರ್ಸ್‌ಗಳು ಸೇವೆ ನೀಡಬೇಕಾಗಿದೆ. ರೋಗಿಗಳೊಂದಿಗೆ ಬೆರೆತು ಅವರ ನೋವು ಮರೆಸಬೇಕು. ಅಲ್ಲದೇ, ತಾವು ಕಾರ್ಯನಿರ್ವಹಿಸುವ ಸಂಸ್ಥೆ, ಒಡಹುಟ್ಟಿದವರು ಹಾಗೂ ಸಮಾಜಕ್ಕೆ ನಿಷ್ಠರಾಗಿರಬೇಕು. ನರ್ಸಿಂಗ್ ಶ್ರೇಷ್ಠ ವೃತ್ತಿಯಾಗಿದ್ದು, ನರ್ಸ್‌ಗಳಿಗೆ ಯಾರೂ ಪರ್ಯಾಯವಾಗಲು ಸಾಧ್ಯವಿಲ್ಲ. ಸೇವೆಯಲ್ಲಿ ತಮ್ಮ ಜ್ಞಾನ, ಮನಸ್ಸು ಬಳಕೆಯಾಗಬೇಕು. ಪ್ರತಿದಿನ ಹೊಸತು ಅರಿಯುವಂತಾಗಬೇಕಲ್ಲದೇ, ಜ್ಞಾನ ಬೆಳೆಸಿಕೊಂಡು ಸಕ್ರಿಯರಾಗಿ ಕಾರ್ಯನಿರ್ವಹಿಸಬೇಕು ಎಂದರು.
ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಭಾಗ್ಯವಂತರು ಎಂದವರು ಹೇಳಿದರು.
ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್‌ನ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಮಾತನಾಡಿ, ಕಠಿನ ಅಭ್ಯಾಸ, ನಿಷ್ಠೆ ಹಾಗೂ ಸೇವಾ ಮನೋಭಾವ ಅಳವಡಿಸಿಕೊಂಡು ಸಮಾಜಕ್ಕೆ ಪೂರಕ ಸೇವೆ ನೀಡುವಲ್ಲಿ ನರ್ಸ್‌ಗಳು ತೊಡಗಿಸಿಕೊಳ್ಳಬೇಕು. ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಸಿಬಂದಿ ಕಾರ್ಯ ಶ್ಲಾಘನೀಯ ಎಂದರು.
ಪ್ರತಿಭಾನ್ವಿತರಿಗೆ ಬಹುಮಾನ ವಿತರಿಸಲಾಯಿತು. ಎಂಎಸ್‌ಸಿ ನರ್ಸಿಂಗ್, ಬಿಎಸ್‌ಸಿ ನರ್ಸಿಂಗ್, ಪಿಸಿಬಿಎಸ್‌ಸಿ ನರ್ಸಿಂಗ್ ಹಾಗೂ ಜಿಎನ್‌ಎಂ ನರ್ಸಿಂಗ್ ಸೇರಿದಂತೆ ಒಟ್ಟು 118 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಕಾಲೇಜು ಪ್ರಾಂಶುಪಾಲೆ ಡಾ| ಲಾರಿಸ್ಸಾ ಮಾರ್ಥ ಸ್ಯಾಮ್ಸ್, ಉಪಪ್ರಾಂಶುಪಾಲೆ ಡಾ| ಥೆರೆಸಾ ಮೆಂಡೋನ್ಸಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್ ಹೊಂಡಗಳು!
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.