ಗೋದಾಮು ಕಟ್ಟಡಕ್ಕೆ ಶಿಲಾನ್ಯಾಸ
Team Udayavani, Jan 5, 2018, 10:49 AM IST
ಪಡುಪಣಂಬೂರು: ಮೂಲಸೌಕರ್ಯಕ್ಕೆ ಅಗತ್ಯವಿದ್ದಂತೆ ಪಂಚಾಯತ್ಗಳು ತನ್ನ ಆರ್ಥಿಕ ಕ್ರೋಢೀಕರಣಕ್ಕೆ ವಿಶೇಷ ಯೋಜನೆ ರೂಪಿಸಿದರೆ, ಗ್ರಾಮ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮೂಲ್ಕಿ ಸೀಮೆಯ ಅರಸರಾದ ಎಂ. ದುಗ್ಗಣ್ಣ
ಸಾವಂತರು ಹೇಳಿದರು.
ಪಡುಪಣಂಬೂರು ಗ್ರಾ.ಪಂ. ಆವರಣದಲ್ಲಿ ಬುಧವಾರ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ 14 ಲಕ್ಷ ರೂ. ವೆಚ್ಚದ ಗೋದಾಮು ಕಟ್ಟಡಕ್ಕೆ ಅವರು ಶಿಲಾನ್ಯಾಸ ನೆರವೇರಿಸಿದರು. ಪಡುಪಣಂಬೂರು ಗ್ರಾ.ಪಂ.ಅಧ್ಯಕ್ಷ ಮೋಹನ್ದಾಸ್ ಅಧ್ಯಕ್ಷತೆ ವಹಿಸಿದ್ದರು.
ಜಿ.ಪಂ. ಸದಸ್ಯ ವಿನೋದ್ ಕುಮಾರ್ ಬೊಳ್ಳೂರು ಮಾತನಾಡಿ, ನರೇಗಾ ಯೋಜನೆಯು ಗ್ರಾಮದ ಸಂಜೀವಿನಿ
ಇದ್ದಂತೆ. ಇದರಲ್ಲಿ ಮುಕ್ತವಾಗಿ ಯೋಜನೆಗಳನ್ನು ರೂಪಿಸಿದಲ್ಲಿ ಗ್ರಾಮೀಣ ಭಾಗದ ಜನರು ಸಹ ಇದರ ಫಲಾನುಭವಿಗಳಾಗಬಹುದು ಇದಕ್ಕೆ ಗ್ರಾ.ಪಂ. ಸದಸ್ಯರು ಹೆಚ್ಚಿನ ಮುತುವರ್ಜಿವಹಿಸಬೇಕು ಎಂದರು.
ತಾ.ಪಂ. ಸದಸ್ಯರಾದ ದಿವಾಕರ ಕರ್ಕೇರಾ ಕಿನ್ನಿಗೋಳಿ, ಜೀವನ್ ಪ್ರಕಾಶ್ ಕಾಮೆರೊಟ್ಟು, ಮೂಲ್ಕಿ ಅರಮನೆಯ
ಗೌತಮ್ ಜೈನ್ ಶುಭ ಹಾರೈಸಿದರು. ಹೊಗೆಗುಡ್ಡೆ ಉಮಾಮಹೇಶ್ವರೀ ದೇಗುಲದ ಅರ್ಚಕ ರಂಗನಾಥ ಭಟ್ ಮತ್ತು ರಾಜು ಭಟ್ ಅವರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು.ಪಡುಪಣಂಬೂರು ಗ್ರಾ.ಪಂ. ಉಪಾಧ್ಯಕ್ಷೆ ಸುರೇಖಾ ಕರುಣಾಕರ್, ಸದಸ್ಯರಾದ ವನಜಾ, ಪುಷ್ಪಾವತಿ, ಹೇಮನಾಥ ಅಮೀನ್ ತೋಕೂರು, ಸಂಪಾವತಿ, ಮಂಜುಳಾ, ನರೇಗಾ ಯೋಜನೆಯ ಎಂಜಿನಿಯರ್ ಅಜಿತ್, ಗ್ರಾಮಸ್ಥರು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪಿಡಿಒ ಅರುಣ್ ಪ್ರದೀಪ್ ಡಿ’ಸೋಜಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.