Legislative Assembly: ಸುಳ್ಯ, ಕಡಬದ ಬಸ್ ಸಮಸ್ಯೆ: ಗಮನ ಸೆಳೆದ ಶಾಸಕಿ ಭಾಗೀರಥಿ
ಹೈನುಗಾರರಿಗೆ ಪಾವತಿಸಬೇಕಾದ ಪ್ರೋತ್ಸಾಹಧನ ಮೊತ್ತ ಬಾಕಿ
Team Udayavani, Jul 19, 2024, 7:45 AM IST
ಬೆಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಬಸ್ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದಿದ್ದಾರೆ.
ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗಕ್ಕೆ ಮಂಜೂರಾದ, ಭಡ್ತಿ ಹೊಂದಿದ ಮತ್ತು ಖಾಲಿ ಇರುವ ಚಾಲಕ, ನಿರ್ವಾಹಕ ಮತ್ತು ಇತರ ಸಿಬಂದಿ ಸಂಖ್ಯೆ ಎಷ್ಟು ಎಂದು ಪ್ರಶ್ನಿಸಿದ ಶಾಸಕಿ, ಸುಳ್ಯ, ಕಡಬ ತಾಲೂಕುಗಳ ಗ್ರಾಮೀಣ ಪ್ರದೇಶಗಳಿಗೆ ಅಗತ್ಯವಿರುವಷ್ಟು ಬಸ್‌ಗಳು ಸಂಚರಿಸದೆ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಯನ್ನು ಸರಕಾರದ ಗಮನಕ್ಕೆ ತಂದರು.
ಉತ್ತರಿಸಿದ ಸಾರಿಗೆ ಸಚಿವರು, ಹಾಲಿ ಇರುವ ಸಾರಿಗೆ ಸೌಲಭ್ಯದ ಮಾಹಿತಿ ನೀಡಿದರು. ಹೆಚ್ಚಿನ ಸೌಲಭ್ಯಕ್ಕೆ ಬೇಡಿಕೆ ಬಂದಿದ್ದು, ಸಿಬಂದಿ ಕೊರತೆಯಿಂದ ಒದಗಿಸಲು ಸಾಧ್ಯವಾಗಿಲ್ಲ. 2023-24ನೇ ಸಾಲಿನ ಹಿಂದಿನ 7 ವರ್ಷಗಳಲ್ಲಿ ಸಿಬಂದಿ ನೇಮಕಾತಿ ಆಗಿಲ್ಲ. ಚಾಲನಾ ಸಿಬಂದಿಯ ನೇರ ನೇಮಕಾತಿ ಪ್ರಗತಿಯಲ್ಲಿದ್ದು, ಸಾರಿಗೆ ಸೌಲಭ್ಯ ಕಲ್ಪಿಸಲು ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಾಕಿ
ಸರಕಾರದಿಂದ ಹೈನುಗಾರಿಕೆ ಪ್ರತೀ ಲೀಟರ್ ಹಾಲಿಗೆ ನೀಡಲಾಗುವ ಪ್ರೋತ್ಸಾಹಧನದ ಬಗೆಗಿನ ಪ್ರಶ್ನೆಗೆ ಪ್ರತೀ ಲೀಟರ್ ಗುಣಮಟ್ಟದ ಹಾಲಿಗೆ 5 ರೂ. ಪ್ರೋತ್ಸಾಹಧನ ನೀಡಲಾಗಿದೆ ಎಂದು ಉತ್ತರ ನೀಡಲಾಗಿದೆ. ಹೈನುಗಾರರಿಗೆ ಪಾವತಿಸಬೇಕಾದ ಪ್ರೋತ್ಸಾಹಧನ ಮೊತ್ತದಲ್ಲಿ ಸುಳ್ಯ ಮತ್ತು ಕಡಬ ತಾಲೂಕಿಗೆ ಪಾವತಿಸಬೇಕಾದ ಬಾಕಿಯ ಕುರಿತು ಶಾಸಕರು ವಿವರ ಕೇಳಿದಾಗ ಉಭಯ ತಾಲೂಕುಗಳಲ್ಲಿ 4.33 ಕೋಟಿ ರೂ. ಪ್ರೋತ್ಸಾಹಧನ ವಿತರಣೆಗೆ ಬಾಕಿ ಇದೆ; ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ ಸಚಿವರು ಉತ್ತರಿಸಿದರು.
ಕಡಬ ತಾಲೂಕು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಚೇರಿಯನ್ನು ಪ್ರಾರಂಭಿಸುವಂತೆ ಸಲ್ಲಿಸಲಾಗಿರುವ ಪ್ರಸ್ತಾವನೆ ಗಮದಲ್ಲಿದ್ದು ಪರಿಶೀಲಿಸುತ್ತೇವೆ ಎಂದು ಲೋಕೋಪಯೋಗಿ ಸಚಿವರು ಉತ್ತರಿಸಿದರು.
ಸುಳ್ಯ ತಾಲೂಕಿನಲ್ಲಿ 10 ಮತ್ತು ಕಡಬ ತಾಲೂಕಿನಲ್ಲಿ 8 ಮಂದಿ ಪರವಾನಿಯುಳ್ಳ ಭೂಮಾಪಕರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.