Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ
Team Udayavani, Oct 10, 2024, 1:58 AM IST
ಮಂಗಳೂರು: ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯ ಮತದಾನ ಅ.21ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಅ.19ರ ಸಂಜೆ 4 ರಿಂದ ಅ.21 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.
ಮತಗಟ್ಟೆ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿ ಸಿದೆ. ಚುನಾವಣಾ ಅಭ್ಯರ್ಥಿ/ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂ ಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿ ಸಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇ ಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.