ತೇಲಾಡುವ ಕಾಂಕ್ರೀಟ್ ಜೆಟ್ಟಿ ನಿರ್ಮಾಣದ ಯೋಜನೆಯಿದೆ: ವೇದವ್ಯಾಸ ಕಾಮತ್
ಮೀನುಗಾರಿಕಾ ಬಂದರು ಪ್ರದೇಶಕ್ಕೆ ಶಾಸಕರ ಭೇಟಿ
Team Udayavani, Oct 7, 2019, 5:41 AM IST
ಮಹಾನಗರ: ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಮಂಗಳೂರು ಬಂದರಿನಲ್ಲಿ ಆಧುನಿಕ ತಾಂತ್ರಿಕತೆಯಲ್ಲಿ ತೇಲಾಡುವ ಕಾಂಕ್ರೀಟ್ ಜೆಟ್ಟಿ ನಿರ್ಮಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಶಾಸಕ ಡಿ. ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಮಂಗಳೂರು ಮೀನುಗಾರಿಕಾ ಬಂದರು ಪ್ರದೇಶಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ಇಂದಿನ ಆಧುನಿಕತೆಗೆ ಹೊಂದಿಕೊಳ್ಳುವಂತೆ ಸುಮಾರು 6.25 ಕೋಟಿ ರೂ. ವೆಚ್ಚದಲ್ಲಿ ತೇಲಾಡುವ ಕಾಂಕ್ರೀಟ್ ಜೆಟ್ಟಿ ನಿರ್ಮಿಸುವ ಯೋಜನೆ ಇದೆ. ಮೀನುಗಾರರ ಹಿತದೃಷ್ಟಿಗೆ ಪೂರಕವಾಗಿರುವ ಈ ಜೆಟ್ಟಿಯು 60 ಮೀಟರ್ ಉದ್ದ , 6 ಮೀಟರ್ ಅಗಲ 1 ಮೀಟರ್ ದಪ್ಪವಾಗಿದ್ದು, ಸುಮಾರು 180 ಟನ್ ತೂಕವಿರುತ್ತದೆ. ಮಾತ್ರವಲ್ಲ, 360 ಟನ್ ಭಾರವನ್ನು ಸುಲಭವಾಗಿ ಹೊರುವ ಸಾಮರ್ಥ್ಯ ಇದಕ್ಕಿರುತ್ತದೆ ಎಂದರು.
ಟೆಂಪೋಗಳು ಜೆಟ್ಟಿಯ ಮೂಲಕವೇ ಹಾದು ಮೀನುಗಾರಿಕಾ ಬೋಟ್‌ಗಳಲ್ಲಿರುವ ಮೀನುಗಳನ್ನು ತುಂಬಿಸಿಕೊಂಡು ಹೋಗಬಹುದಾದಷ್ಟು ಶಕ್ತಿಯು ತವಾ ಗಿರುತ್ತದೆ. ಮೀನುಗಾರಿಕಾ ಬೋಟುಗಳು ಜೆಟ್ಟಿಯನ್ನು ಸೇರುವ ಸಂಪರ್ಕ ಪ್ರದೇಶದ ಜೆಟ್ಟಿಯ ಸುತ್ತಲೂ ರಬ್ಬರಿನ ಪದರವನ್ನು ಅಳವಡಿಸಲಾಗುತ್ತಿದ್ದು ಬೋಟಿನ ಆವರಣಕ್ಕೆ ಹಾನಿಯಾಗದಂತೆ ತಡೆಗಟ್ಟಲು ಇದು ಸಹಕಾರಿಯಾಗಲಿದೆ ಎಂದರು.
ಈಗಾಗಲೇ ಯೋಜನೆಯ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದ್ದು ಸರಕಾರದಿಂದ ಅನುಮೋದನೆ ದೊರೆತ ತತ್‌ಕ್ಷಣವೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.
ಜೆಟ್ಟಿಯ ವಿನ್ಯಾಸಕಾರ ಮಿಲಿಂದರ್ ಪ್ರಭು, ಅಮುಲ್, ಮೀನುಗಾರರ ಮುಖಂಡರಾದ ನಿತಿನ್ ಕುಮಾರ್, ರಾಜೇಶ್ ಉಳ್ಳಾಲ್, ಮೋಹನ್ ಬೆಂಗ್ರೆ, ನಿತಿನ್ ಬಂಗೇರ, ಇಬ್ರಾಹಿಂ ಬೆಂಗ್ರೆ, ಸಂದೀಪ್ ಉಳ್ಳಾಲ್, ನವೀನ್, ಬಿಜೆಪಿ ಮುಖಂಡರಾದ ಸಂಜಯ್ ಪ್ರಭು, ಪ್ರೇಮಾನಂದ ಶೆಟ್ಟಿ, ದಿವಾಕರ್ ಪಾಂಡೇಶ್ವರ, ವಸಂತ್ ಜೆ. ಪೂಜಾರಿ, ವಿನೋದ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.
ಮೀನುಗಾರರಿಗೆ ಸಮಸ್ಯೆಯಿಲ್ಲ
ಜೆಟ್ಟಿಯ ಒಳಗಡೆ ನೀರು, ವಿದ್ಯುತ್ ಸಂಪರ್ಕಗಳೂ ಕೂಡ ದೊರೆಯಲಿದೆ. ನೀರಿನ ಮಟ್ಟಕ್ಕೆ ಅನುಗುಣವಾಗಿ ಜೆಟ್ಟಿಯು ತೇಲುತ್ತಿ ರುತ್ತದೆ. ಜೆಟ್ಟಿಯನ್ನು ಬೇರೆಡೆ ಸಿದ್ಧಪಡಿಸಿ ಸಮುದ್ರದ ಮೂಲಕವೇ ತಂದು ಜೋಡಿಸುವುದರಿಂದ ಕಾಮಗಾರಿಯ ಸಂದರ್ಭ ಮೀನುಗಾರರಿಗೆ ಯಾವುದೇ ರೀತಿಯ ಸಮಸ್ಯೆಯೂ ಉದ್ಭವಿಸುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.