ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸವಾಗಲಿ

Team Udayavani, Nov 15, 2017, 3:37 PM IST

15-Nov-12.jpg

ಕುಕ್ಕೇಡಿ: ಮಕ್ಕಳ ಬಗೆಗೆ ಅಪಾರ ಪ್ರೀತಿ ಹೊಂದಿದ್ದ ಸ್ವಾತಂತ್ರ್ಯ ಹೋರಾಟಗಾರ, ದೇಶದ ಪ್ರಥಮ ಪ್ರಧಾನಿ ಪಂಡಿತ್‌ ಜವರ್‌ ಲಾಲ್‌ ನೆಹರೂ ಅವರ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ದೇಶದೆಲ್ಲೆಡೆ ಆಚರಿಸಲಾಗುತ್ತಿದೆ. ಮಕ್ಕಳಿಗೆ ಧೈರ್ಯ ಹಾಗೂ ಆತ್ಮವಿಶ್ವಾಸ ಮೂಡಿಸುವ ಕೆಲಸ ಸಮಾಜದೆಲ್ಲೆಡೆ ಈ ದಿನ ಆಗಬೇಕು ಎಂದು ಲಯನ್ಸ್‌ ಕ್ಲಬ್‌ ವಲಯಾಧ್ಯಕ್ಷ ವೆಂಕಟೇಶ್‌ ಎಂ.ಬಿ. ಹೇಳಿದರು.

ಗ್ರಾಮ ಪಂಚಾಯತ್‌ ಕುಕ್ಕೇಡಿ, ಲಯನ್ಸ್‌ ಕ್ಲಬ್‌, ಕುಕ್ಕೇಡಿ-ನಿಟ್ಟಡೆ ಅಂಗನ ವಾಡಿ ಕೇಂದ್ರಗಳು ಹಾಗೂ ಊರವರ ಸಹಕಾರದೊಂದಿಗೆ ಇಲ್ಲಿನ ಡಾ| ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ಜರಗಿದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕುಕ್ಕೇಡಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ತೇಜಾಕ್ಷಿ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಪ್ರಿಯಾ ರಾಜೇಶ್‌ ಮಾತನಾಡಿ, ಸಮಾಜದಲ್ಲಿ ಮಕ್ಕಳಿಗೆ ತಮ್ಮದೇ ಆದ ಹಕ್ಕು ಇದೆ. ಬದುಕುವ ಹಕ್ಕು, ರಕ್ಷಣೆಯ ಹಕ್ಕು, ಜೀವಿಸುವ ಹಕ್ಕು, ಬೆಳವಣಿಗೆ ಹಾಗೂ ಅಭಿಪ್ರಾಯದ ಹಕ್ಕನ್ನು ಮಕ್ಕಳಿಂದ ಕಸಿಯುವ ಕೆಲಸ ನಡೆಯಬಾರದು ಎಂದರು.

ಕುಂಡದಬೆಟ್ಟು ಅಂಗನವಾಡಿಯಲ್ಲಿ ನಿರ್ಮಾಣ ಮಾಡಲಾದ ಮಕ್ಕಳ ಪಾರ್ಕನ್ನು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯೆ ವಿಮಲಾ ಉದ್ಘಾಟಿಸಿದರು.

ವೇಣೂರು ಲಯನ್ಸ್‌ ಕ್ಲಬ್‌ ಅಧ್ಯಕ್ಷ ನಿತೇಶ್‌ ಎಚ್‌., ಕುಕ್ಕೇಡಿ ಗ್ರಾ.ಪಂ. ಉಪಾಧ್ಯಕ್ಷ ಅಶೋಕ್‌ ಪಾಣೂರು, ಕುಕ್ಕೇಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ.ಪಿ., ನಿವೃತ್ತ ಶಿಕ್ಷಕಿ ಲುಸಿಯಾ ರೋಡ್ರಿಗಸ್‌, ಸುನಂದ ಡಿ., ಪೃಥ್ವಿಕಾ, ಕುಕ್ಕೇಡಿ ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು. ಅಳದಂಗಡಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ ಪ್ರಸ್ತಾವಿಸಿದರು. ಕುಕ್ಕೇಡಿ-ನಿಟ್ಟಡೆ ಗ್ರಾಮದ ಅಂಗನವಾಡಿ ಶಿಕ್ಷಕಿಯರು, ಸಹಾಯಕರು ಉಪಸ್ಥಿತರಿದ್ದರು.

ಸಮ್ಮಾನ
ಕುಂಡದಬೆಟ್ಟು ಅಂಗನವಾಡಿ ಕೇಂದ್ರ ಕಟ್ಟಡದ ಅಭಿವೃದ್ಧಿಗೆ ಸಹಕಾರ ನೀಡಿದ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ, ಗುತ್ತಿಗೆದಾರ ರಫೀಕ್‌ ಬೆಳ್ತಂಗಡಿ ಹಾಗೂ ರಾಮಕೃಷ್ಣ ದೇವಾಡಿಗ ಅವರನ್ನು ಸಮ್ಮಾನಿಸಲಾಯಿತು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಅಂಗನವಾಡಿ ಶಿಕ್ಷಕಿ ಜಾನಕಿ ಸ್ವಾಗತಿಸಿ, ಜಯಂತ್‌ ಕೋಟ್ಯಾನ್‌ ವಂದಿಸಿದರು. ಜಗನ್ನಾಥ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

ಮಕ್ಕಳು ಹೂವಿನ ಮೊಗ್ಗಿನಂತೆ. ಅದನ್ನು ಅರಳಿಸುವ ಕೆಲಸ ನಮ್ಮದಾಗಬೇಕು. ಮಕ್ಕಳ ಪಠ್ಯ ಹಾಗೂ ಪಠ್ಯೇತರ
ಬೆಳವಣಿಗೆಗೆ ಸ್ಫೂರ್ತಿ ನೀಡುವ ಕೆಲಸ ಮಕ್ಕಳ ದಿನಾಚರಣೆ ದಿನ ಆಗಲಿ. 
ಪ್ರಿಯಾ ರಾಜೇಶ್‌,
 ಸಿಡಿಪಿಒ ಬೆಳ್ತಂಗಡಿ

ಟಾಪ್ ನ್ಯೂಸ್

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.