Mangaluru: ಲಾಟರಿ, ಬೆಟ್ಟಿಂಗ್, ಮಟ್ಕಾ ನಿಯಂತ್ರಿಸಲು ಫ್ಲೈಯಿಂಗ್ ಸ್ಕ್ವಾಡ್ ಸಕ್ರಿಯವಾಗಲಿ
Team Udayavani, Nov 8, 2024, 10:19 AM IST
ಮಂಗಳೂರು: ಲಾಟರಿ, ಬೆಟ್ಟಿಂಗ್, ಮಟ್ಕಾ ಮುಂತಾದ ಅನಧಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ರಚಿಸಲಾಗಿರುವ ಫ್ಲೈಯಿಂಗ್ ಸ್ಕ್ವಾಡ್ ತಂಡವು ನಿರಂತರವಾಗಿ ಕಾರ್ಯಾಚರಣೆ ನಡೆಸಿ ಅಕ್ರಮವನ್ನು ತಡೆಗಟ್ಟಬೇಕು ಅಪರ ಜಿಲ್ಲಾಧಿಕಾರಿ ಡಾ| ಜಿ. ಸಂತೋಷ್ ಕುಮಾರ್ ಸೂಚಿಸಿದ್ದಾರೆ.
ಲಾಟರಿ ಹಾವಳಿ ನಿಯಂತ್ರಣ ಸಂಬಂಧ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರಗಿದ ಫ್ಲೈಯಿಂಗ್ ಸ್ಕ್ವಾಡ್ ತ್ರೈಮಾಸಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಪಾಸಣೆ ತಂಡಗಳು ಮುತುವರ್ಜಿಯಿಂದ ಕೆಲಸ ಮಾಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಫ್ಲೈಯಿಂಗ್ ಸ್ಕ್ವಾಡ್ ಸಭೆ ನಡೆಯಬೇಕು. ಇಲ್ಲಿಯವರೆಗೆ ನಡೆದ ಪ್ರಕರಣಗಳ ಬಗ್ಗೆ ಜರಗಿಸಿದ ಕ್ರಮಗಳ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ತಿಳಿಸಿದರು.
ಆನ್‌ಲೈನ್ ಆ್ಯಪ್‌ಗ್ಳನ್ನು ನಂಬಿ ಸಾರ್ವಜನಿಕರು ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾಗುವ ಪ್ರಕರಣಗಳು ಹೆಚ್ಚುತ್ತಿದ್ದು, ಇಂತಹ ವಂಚನೆಗಳಿಗೆ ಸಾರ್ವಜನಿಕರು ಬಲಿಪಶುಗಳಾಗಬಾರದು. ಸೈಬರ್ ವಂಚನೆ ಸಹಿತ ಪ್ರಕರಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಯಾವುದೇ ಹಿಂಜರಿಕೆ ಇಲ್ಲದೆ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಬೇಕು. ಸಾರ್ವಜನಿಕರು ಯಾವುದೇ ನಕಲಿ ಜಾಲತಾಣಗಳನ್ನು ನಂಬಿ ಹಣ ಹೂಡಿಕೆ ಮಾಡಬಾರದು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಹಣ ಹೂಡಿಕೆ ಮಾಡುವಂತೆ ಜಾಗೃತಿ ಮೂಡಿಸಬೇಕು ಎಂದರು.
ಕರ್ನಾಟಕ ಸರಕಾರವು ಈಗಾಗಲೇ ಲಾಟರಿಗಳನ್ನು ರಾಜ್ಯದಲ್ಲಿ ನಿಷೇ ಧಿಸಿದ್ದರೂ ಜಿಲ್ಲೆಯ ಕೇರಳ ಗಡಿ ಭಾಗಗಳಲ್ಲಿ ಲಾಟರಿ ಹಾವಳಿಗಳು ಹೆಚ್ಚುತ್ತಿವೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಲಾಟರಿ ಹಾವಳಿ ನಡೆಯುವಂತ ಪ್ರದೇಶಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸಿ ಲಾಟರಿ ದಂಧೆ ನಡೆಸುತ್ತಿರುವವರ ವಿರುದ್ಧ ಕ್ರಮ ಜರಗಿಸುವಂತೆ ತಿಳಿಸಿದರು.
ಸಭೆಯಲ್ಲಿ ಎಸಿಪಿ ಮನೋಜ್ ಕುಮಾರ್ ನಾಯ್ಕ, ಡಿವೈಎಸ್‌ಪಿ ಮಂಜುನಾಥ ಆರ್.ಜಿ., ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತ (ಪಶ್ಚಿಮ ವಲಯ) ಡಿ.ರಂಗರಾಜು, ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಸಹಾಯಕ ನಿರ್ದೇಶಕ ಎಂ.ಪಿ ಪ್ರಸನ್ನ, ಪಿಂಚಣಿ , ಸಣ್ಣ ಉಳಿತಾಯ ಅಭಿವೃದ್ಧಿ ಅ ಧಿಕಾರಿ ಆನಂದ್ ಎಂ.ಪಿ., ಪ್ರಥಮ ದರ್ಜೆ ಸಹಾಯಕಿ ಅನಿತಾ ಲಕ್ಷ್ಮೀ ಎಂ. ಎಚ್. ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ: Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.