ಹೆಣ್ಣಿಗೆ  ಹಕ್ಕುಚಲಾಯಿಸಲು ಅವಕಾಶ ಕೊಡಿ: ಡಾ| ಅನುರಾಧಾ


Team Udayavani, Mar 19, 2017, 2:25 PM IST

sanmana.jpg

ಪುತ್ತೂರು: ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಇಂದು ಹೆಣ್ಣಿಗೆ ಮೀಸಲಾತಿ ಅಗತ್ಯವಿಲ್ಲ. ಹೆಚ್ಚಿನ ಸ್ಥಾನಮಾನ ಬೇಕು. ಹೆಣ್ಣಿಗೆ ಹಕ್ಕು ಚಲಾಯಿಸುವ ಸ್ವಾತಂತ್ರ್ಯ ಇರಬೇಕು ಎಂದು ಎನ್‌.ಎಂ.ಸಿ. ಸುಳ್ಯ ಇದರ ಉಪನ್ಯಾಸಕಿ ಡಾ| ಅನುರಾಧಾ ಕುರುಂಜಿ ಹೇಳಿದರು.

ಭಾರತ ಸರಕಾರ, ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಮಂಗಳೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು, ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಕಾಣಿಯೂರು ಮತ್ತು ಕಣ್ವರ್ಷಿ ಮಹಿಳಾ ಮಂಡಲ ಕಾಣಿಯೂರು ಇದರ ಆಶ್ರಯದಲ್ಲಿ  ಇಲ್ಲಿನ ಹಿ.ಪ್ರಾ.ಶಾಲೆಯಲ್ಲಿ ನಡೆದ ಮಹಿಳಾ ದಿನಾಚರಣೆ ಮತ್ತು ಕ್ರೀಡಾಕೂಟ ಕಾರ್ಯಕ್ರಮದಲ್ಲಿ  ಸಂಪನ್ಮೂಲ ವ್ಯಕ್ತಿ ಯಾಗಿ ಅವರು ಮಾತನಾಡಿದರು.

ಕೀಳುಮಟ್ಟ ಸರಿಯಲ್ಲ
ಮಹಿಳೆ ಏನನ್ನೂ ಸಾಧಿಸಬಲ್ಲಳು. ಶಿವಾಜಿ, ವಿವೇಕಾನಂದರು ಮೊದಲಾದ ಪುರುಷ ಸಾಧಕರಿಗೆ ಪ್ರೇರಣೆ ತಾಯಿ ಆಗಿದ್ದಾಳೆ. ಹೀಗಾಗಿ ಹೆಣ್ಣನ್ನು ಕೀಳು ಮಟ್ಟದಲ್ಲಿ ನೋಡುವುದು ಸರಿಯಲ್ಲ. ಮೀಸಲಾತಿ ಕೊಟ್ಟು ಹೆಣ್ಣಿನ ಶೋಷಣೆ ನಡೆಸಲಾಗುತ್ತಿದೆ ಎಂದರು. ಮಹಿಳೆಯರು ಅತ್ಯಾಚಾರ, ಶೋಷಣೆ, ದೌರ್ಜನ್ಯದ ವಿರುದ್ಧ ಹೋರಾಡಬೇಕು. ಇಂದಿನ ಸಮಾಜದಲ್ಲಿ ಮಹಿಳೆಯರು ಹಗಲಿನಲ್ಲೂ ನಿರ್ಭಯವಾಗಿ ನಡೆದಾಡುವುದು ಕಷ್ಟವಾಗಿದೆ. ಆದ್ದರಿಂದ ತಾಯಂದಿರು  ಮಕ್ಕಳನ್ನು ಐಎಎಸ್‌, ಐಪಿಎಸ್‌, ಎಂಜಿನಿಯರ್‌ ಕನಸು ಮಾತ್ರ ಕಾಣದೇ ಒಬ್ಬ ಆದರ್ಶ ಮಗ, ಮಗಳನ್ನು ರೂಪಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಈಗಿನ ಪರಿಸ್ಥಿತಿಯಲ್ಲಿ ಹೆಣ್ಣಿಗೆ ಹೆಣ್ಣೇ ಶತ್ರು ಆಗಿದ್ದಾಳೆ. ಮಹಿಳೆಯರು ಒಗ್ಗಟ್ಟಾಗಿರಬೇಕು ಎಂದರು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಣಿಯೂರು ಗ್ರಾ.ಪಂ. ಅಧ್ಯಕ್ಷೆ ಸೀತಮ್ಮ  ಖಂಡಿಗ ವಹಿಸಿದ್ದರು.

ಮುಖ್ಯ ಅತಿಥಿಗಳಾದ ಜಿ.ಪಂ. ಸದಸ್ಯೆ ಪ್ರಮೀಳಾ ಜನಾರ್ದನ್‌, ತಾ.ಪಂ. ಸದಸ್ಯೆ ಲಲಿತಾ ಈಶ್ವರ್‌, ಬೆಳಂದೂರು  ಗ್ರಾ.ಪಂ. ಅಧ್ಯಕ್ಷೆ ಉಮೇಶ್ವರಿ ಅಗಳಿ,  ಕಾಣಿ  ಯೂರು  ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಯೋಗಿನಿ ಶೆಟ್ಟಿ, ನೆಹರೂ ಯುವ ಕೇಂದ್ರದ ಗುರುಪ್ರಿಯಾ ನಾಯಕ್‌, ಜಿಲ್ಲಾ ಯುವಜನ ಒಕ್ಕೂಟದ ನೂತನ ಅಧ್ಯಕ್ಷ ಸುರೇಶ್‌ ರೈ ಸೂಡಿಮುಳ್ಳು  ಮಾತನಾಡಿದರು. ವೇದಿಕೆಯಲ್ಲಿ ಚಾರ್ವಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು, ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಗಣೇಶ್‌ ಪೆರ್ಲೋಡಿ, ಕಣ್ವರ್ಷಿ ಮಹಿಳಾ ಮಂಡಲದ ಗೌರವಾಧ್ಯಕ್ಷೆ ರೋಹಿಣಿ ಅಬೀರ, ಅಧ್ಯಕ್ಷೆ ಮಮತಾ ಲೋಕೇಶ್‌ ಅಗಳಿ ಉಪಸ್ಥಿತರಿದ್ದರು. ಧನ್ಯಾ, ಮಮತಾ ಗುಂಡಿಗ¨ªೆ, ವೀಣಾ ಮುಗರಂಜ, ಸುಚಿತ್ರಾ ಕಟ್ಟತ್ತಾರು, ಅಮಿತಾ ಅನಿಲ, ಪೂರ್ಣಿಮಾ ಬೆದ್ರಾಜೆ, ಸುಲೋಚನಾ ಅನಿಲ, ಜಯಾ ಮಾದೋಡಿ, ಸುಲೋಚನಾ ಮುಗರಂಜ ಅತಿಥಿಗಳಿಗೆ ಹೂಗುಚ್ಚ ನೀಡಿದರು. 

ಈ ಸಂದರ್ಭದಲ್ಲಿ  ರಾಜ್ಯಮಟ್ಟದ ಯುವಜನ ಮೇಳದಲ್ಲಿ ಪ್ರಶಸ್ತಿ ಪಡೆದ ನರಿಮೊಗರು ಪ್ರಖ್ಯಾತಿ ಯುವತಿ ಮಂಡಲದ ಅಧ್ಯಕ್ಷೆ ಗುರುಪ್ರಿಯಾ ನಾಯಕ್‌ ಇವರನ್ನು ಸನ್ಮಾನಿಸಲಾಯಿತು. ಕ್ರೀಡಾ ಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಿಸ ಲಾಯಿತು. ಮಹಿಳಾ ಮಂಡಲದ ಕಾರ್ಯದರ್ಶಿ ನಾಗವೇಣಿ ಬೆದ್ರಾಜೆ ಸ್ವಾಗತಿಸಿ, ಶ್ವೇತಾ ಮುಗರಂಜ ವಂದಿಸಿದರು. ಪರಮೇಶ್ವರ ಗೌಡ ಅನಿಲ ಕಾರ್ಯಕ್ರಮ ನಿರೂಪಿಸಿದರು.                        

ಟಾಪ್ ನ್ಯೂಸ್

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Uppinangady: ಮಕ್ಕಳಿಗೆ ಚರಂಡಿ ಕೊಳಚೆಯಿಂದ ಮುಕ್ತಿ ಎಂದು?

1(1)

Puttur: ಸಜ್ಜಾಗುತ್ತಿದೆ ಆನೆಮಜಲು ಕೋರ್ಟ್‌ ಸಂಕೀರ್ಣ

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

10

Puttur: ರಸ್ತೆಯಲ್ಲಿ ಕಾರ್ಮಿಕನ ಮೃತದೇಹ; ಮೂವರ ಮೇಲೆ ಪ್ರಕರಣ ದಾಖಲು; ಓರ್ವ ವಶಕ್ಕೆ

SUBHODH

Bantwala: ಕೆದಿಲ: ಸಿಡಿಲಿಗೆ ಮೃತಪಟ್ಟ ಬಾಲಕನಿಗೆ ಕಣ್ಣೀರ ವಿದಾಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

11-sagara

Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ

5

Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ

10-hosanagara

Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ

4

Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್‌; ಪ್ರವಾಸಿಗರಿಗೆ ಹೊಸ ಆಕರ್ಷಣೆ

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.