ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಬೇಕು: ಅನಂತ ಹೆಗಡೆ

Team Udayavani, Oct 7, 2020, 11:57 AM IST

ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಬೇಕು: ಅನಂತ ಹೆಗಡೆ

ಮಂಗಳಗಂಗೋತ್ರಿ, ಅ. 6: ಪರಿ ಸರದಲ್ಲಿ ಅದೆಷ್ಟೋ ಜೀವಸಂಕುಲಗಳು ನಾಶವಾಗಿವೆ. ಇನ್ನೆಷ್ಟೋ ವನ್ಯಜೀವಿಗಳು ಅಳಿವಿನಂಚಿನಲ್ಲಿವೆ. ಪರಿಸರಕ್ಕೆ ಪೂರಕ ವಾಗಿರುವ ವನ್ಯಜೀವಿಗಳನ್ನು ಸಂರಕ್ಷಿಸಲು ನಾವು ತಳಮಟ್ಟದಲ್ಲಿ ಕೆಲಸ ಮಾಡಬೇಕು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು.

ಮಂಗಳೂರು ವಿವಿ ಸಿಂಡಿಕೇಟ್‌ ಸಭಾಂಗಣದಲ್ಲಿ ಪರಿಸರ ಮತ್ತು ವನ್ಯ ಜೀವಿ ಸಂರಕ್ಷಣೆಯ ಕುರಿತು ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಅನೇಕ ಸರಕಾರಿ ಯೋಜನೆಗಳು ಅದರ ಮುಖ್ಯ ಫಲಾನುಭವಿಗಳಿಗೆ ತಲುಪುವುದೇ ಇಲ್ಲ. ಗೋಬರ್‌ ಅನಿಲ ಉತ್ಪಾದನೆ, ಸೌರಶಕ್ತಿ, ಮಳೆನೀರು ಕೊಯ್ಲು ಮುಂತಾದ ಪರಿಸರ ಸ್ನೇಹಿ ಚಟುವಟಿಕೆಗಳ ಅನುಷ್ಠಾನಕ್ಕೆ ಸರಕಾರದ ಧನಸಹಾಯ ಮತ್ತು ಸೌಲಭ್ಯಗಳಿವೆ, ಅವುಗಳನ್ನು ಬಳಸಿಕೊಳ್ಳಲು ಸಾಮಾನ್ಯ ಜನರನ್ನು ಪ್ರೇರೇಪಿಸಬೇಕಾಗಿದೆ ಎಂದರು.

ಅಭಿವೃದ್ಧಿ ಪರಿಸರಕ್ಕೆ ಪೂರಕವಾಗಿರಲಿ :

ಹಲವೆಡೆ ಕೆರೆ ಕಟ್ಟೆಗಳು, ನದಿಗಳು ಹೂಳು ತುಂಬಿ ಮರೆಯಾಗುತ್ತಿವೆ, ಮಾತ್ರವಲ್ಲ ಅಭಿವೃದ್ಧಿಯ ಹೆಸರಿನಲ್ಲಿ ಅತಿಕ್ರಮಣವಾಗುತ್ತಿವೆ. ಸಾಂಪ್ರದಾಯಿಕ ಸಂರಕ್ಷಣ ವಿಧಾನವಾಗಿರುವ ದೇವರ ಕಾಡು, ನಾಗಬನಗಳು ಕಣ್ಮರೆಯಾಗುತ್ತಿವೆ. ಅಭಿವೃದ್ದಿ ಕಾರ್ಯಗಳು ಪರಿಸರಕ್ಕೆ ಮಾರಕವಾಗಿರದೆ ಪರಿಸರಕ್ಕೆ ಪೂರಕ ವಾಗಿರಬೇಕು ಎಂದರು. ಮಂಗ ಳೂರು ವಿವಿ ಪ್ರಾಧ್ಯಾಪಕ ಪ್ರೊ| ಎಚ್‌. ಗಂಗಾಧರ ಭಟ್‌ ಮತ್ತು ಪ್ರೊ|ಪ್ರಶಾಂತ ನಾಯ್ಕ ವಿಶ್ವವಿದ್ಯಾನಿಲಯದ ಪರಿಸರ ಕೆಲಸ ಕಾರ್ಯ, ಸಂಶೋಧನೆಗಳ ಬಗ್ಗೆ ಕಿರು ವರದಿ ಮಂಡಿಸಿದರು. ಸಂವಾದದಲ್ಲಿ ಪ್ರೊ| ಶ್ರೀಪಾದ ಕೆ.ಎಸ್‌., ಪ್ರೊ| ಕೆ.ಎಸ್‌. ಜಯಪ್ಪ, ಪ್ರೊ| ವೈ. ಮುನಿರಾಜು, ನರಸಿಂಹಯ್ಯ ಎನ್‌., ಡಾ| ಎ . ರಮೇಶ್‌ ಹಾಗೂ ವಿವಿಧ ವಿಭಾಗಗಳ ಪ್ರಾಧ್ಯಾಪಕರು ಮತ್ತು ಸಂಶೋಧನ ವಿದ್ಯಾರ್ಥಿಗಳು ಸಂವಾದದಲ್ಲಿ ಭಾಗವಹಿಸಿದರು.

ಸಮಾರಂಭದಲ್ಲಿ ಮಂಗಳೂರು ವಿವಿ ಕುಲಸಚಿವ ಕೆ. ರಾಜು ಮೊಗವೀರ ಸ್ವಾಗತಿಸಿದರು, ಪರೀûಾಂಗ ಕುಲಸಚಿವ ಪ್ರೊ| ಪಿ.ಎಲ್‌ .ಧರ್ಮ ವಂದಿಸಿದರು. ಡಾ| ಚಂದ್ರು ಹೆಗಡೆ ನಿರ್ವಹಿಸಿದರು.

ಪರಿಸರ ಸ್ನೇಹಿ ಕ್ಯಾಂಪಸ್‌ : ಮಂಗಳೂರು ವಿ.ವಿ. ಕುಲಪತಿ ಪ್ರೊ| ಪಿ.ಎಸ್‌. ಯಡಪಡಿತ್ತಾಯ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಮಂಗಳೂರು ವಿವಿ ಕ್ಯಾಂಪಸ್‌ನ್ನು ಪರಿಸರ ಸ್ನೇಹಿ ಕ್ಯಾಂಪಸನ್ನಾಗಿ ರೂಪಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಹಲವು ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಜ್ಞಾನವನ್ನು ಹಳ್ಳಿ ಹಳ್ಳಿಗೆ ಮುಟ್ಟಿಸುವ ಕಾರ್ಯವನ್ನು ಇನ್ನಷ್ಟು ಹೆಚ್ಚು ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.