ಸೌಹಾರ್ದ ವಾತಾವರಣ ನಿರ್ಮಾಣವಾಗಲಿ: ಸುಕುಮಾರ್‌


Team Udayavani, Jul 9, 2017, 3:45 AM IST

sukumar.jpg

ಕೊಣಾಜೆ: ಪ್ರತಿಯೊಂದು ಗ್ರಾಮಕ್ಕೂ ಪೊಲೀಸರನ್ನು ನಿಯೋಜಿ ಸುವ ಮೂಲಕ ಹಳ್ಳಿಗೊಬ್ಬ  ಪೊಲೀಸ್‌ ಯೋಜನೆಯಿಂದ  ಪ್ರತಿ ಗ್ರಾಮದಲ್ಲೂ ಶಾಂತಿ, ಸುವ್ಯವಸ್ಥೆ, ಸೌಹಾರ್ದ ವಾತವಾರಣ ನಿರ್ಮಿಸುವಲ್ಲಿ ಸಹಕಾರಿ ಯಾಗಿದ್ದು, ಈ ನಿಟ್ಟಿನಲ್ಲಿ  ಪೊಲೀಸ್‌ ಇಲಾಖೆ ನಿರ್ವಹಿಸಲಿದೆ ಎಂದು ಕೊಣಾಜೆ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಸುಕುಮಾರ್‌ ಅಭಿಪ್ರಾಯಪಟ್ಟರು.

ಅವರು ಪಾವೂರು ಗ್ರಾ.ಪಂ. ಸಭಾಂಗಣದಲ್ಲಿ “ಜನಸ್ನೇಹಿ ಪೊಲೀಸ್‌ ಬೀಟ್ಸ್‌’ ಯೋಜನೆಯಡಿ ಶನಿವಾರ ನಡೆದ ಸಭೆಯಲ್ಲಿ ಭಾಗವಹಿಸಿ  ಮಾತನಾಡಿದರು.

ಪೊಲೀಸ್‌ ಮತ್ತು ಗ್ರಾಮಸ್ಥರ ನಡುವೆ ಸಂಪರ್ಕ ಉದ್ದೇಶದಿಂದ ಜನಸ್ನೇಹಿ ಪೊಲೀಸ್‌ ಬೀಟ್ಸ್‌ ಯೋಜನೆಯಡಿ ಆರಂಭದಲ್ಲಿ ಗ್ರಾಮಕ್ಕೆ 50 ಹಳ್ಳಿ ಪೊಲೀಸರನ್ನು ನಿಯೋಜಿಸಲು ನಿರ್ಧರಿಸಲಾಗಿತ್ತು, ಆದರೆ ಜನಸಂಖ್ಯೆ, ವಾರ್ಡ್‌ಗಳ ಆಧಾರದಲ್ಲಿ 150 ಮಂದಿಯನ್ನು ನಿಯೋಜಿಸಲು ನಿರ್ಧರಿ ಸಲಾಗಿದೆ. ಗ್ರಾಮಸ್ಥರು ಸಹಕಾರ ನೀಡಿದಾಗ ಸೌಹಾರ್ದ ವಾತಾವರಣ ನಿರ್ಮಾಣ ಸಾಧ್ಯ ಎಂದರು.

ಪ್ರದೇಶದಲ್ಲಿ ಯಾವುದೇ ಸಮಸ್ಯೆ ಎದುರಾದರೆ ಸಂಬಂಧಪಟ್ಟ ನಿಯೋಜಿತ ಪೊಲೀಸರಿಗೆ ಕರೆ ಮಾಡಿದರೆ ಅವರು 15 ನಿಮಿಷದಲ್ಲೇ ಸ್ಥಳಕ್ಕೆ ಆಗಮಿತ್ತಾರೆ. ಇದು ಅಸಾಧ್ಯವಾದಲ್ಲಿ ಮೇಲಧಿಕಾರಿಗಳೇ ಸ್ಥಳಕ್ಕೆ ಆಗಮಿಸಿ ಪರಿಹಾರ ಕಲ್ಪಿಸುತ್ತಾರೆ ಎಂದು ತಿಳಿಸಿದರು.

ಗ್ರಾಮ ಪಂಚಾಯತ್‌ ಅಧ್ಯಕ್ಷ ಮಹಮ್ಮದ್‌ ಫಿರೋಜ್‌ ಮಾತನಾಡಿ, ಹಳ್ಳಿ ಪೊಲೀಸ್‌ ವ್ಯವಸ್ಥೆಯಡಿ ನಿಯೋಜನೆ ಗೊಂಡವರಿಗೆ ಇಲಾಖೆಯಿಂದ ಸಮವಸ್ತ್ರ ಹಾಗೂ ವೇತನ ನೀಡದಿದ್ದರೂ ಪೊಲೀಸರಿಗೆ ಸಿಗುವ ಗೌರವ ಸಿಗಲಿದೆ. ನಮ್ಮ ಜವಾಬ್ದಾರಿ ನಿಭಾಯಿಸಿದಲ್ಲಿ ಪೊಲೀಸರ ಅಗತ್ಯವೇ ಇರದು. ಈ ನಿಟ್ಟಿನಲ್ಲಿ ಸಮರ್ಥರನ್ನೇ ಗುರುತಿಸಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರು ಮಾತನಾಡಿ, ತಡರಾತ್ರಿ ಹೊರಗಿನವರ ವಾಹನ ತಿರುಗಾಡುತ್ತಿದ್ದು ಅದನ್ನು ಪ್ರಶ್ನಿಸುವ ಹಕ್ಕು ನಮಗಿಲ್ಲದಿದ್ದರೆ ಇಲಾಖೆ ಕ್ರಮ ಕೈಗೊಳ್ಳಬೇಕು. ಹಿಂದೊಮ್ಮೆ ಇದೇ ರೀತಿ ಸಭೆ ನಡೆಸಲಾಗಿದ್ದರೂ ಒಂದು ಸಭೆ ಬಳಿಕ ಯೋಜನೆ ಸ್ಥಗಿತಗೊಂಡಿದ್ದು ಈ ಬಾರಿ ಹಾಗಾಗಬಾರದು. ಪೊಲೀಸರಿಗೆ ನೀಡುವ ಮಾಹಿತಿ ಆರೋಪಿಗಳಿಗೆ ಬಿಟ್ಟು ಕೊಡಬಾರದು. ನಿಗಡಿತ ಸ್ಥಳಗಳಲ್ಲಿ ಸಿಸಿ ಕೆಮರಾ ಅಳವಡಿಸಬೇಕು. ಬಸ್‌ ತಂಗುದಾಣದಲ್ಲಿ ಯುವಕರು ತಂಗದಂತೆ ನೋಡಿಕೊಳ್ಳಬೇಕು. ಬಸ್ಸುಗಳ ಗಾಜು ಒಡೆದು ಪ್ರಯಾಣಿಕರಿಗೆ ತೊಂದರೆ ಕೊಟ್ಟ ಆರೋಪಿಗಳನ್ನು ತತ್‌ಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.

ಪಂಚಾಯತ್‌ ಸದಸ್ಯ ಎಂ.ಪಿ.ಹಸನ್‌, ಮಾಜಿ ಸದಸ್ಯ ನಾರ್ಬಟ್‌ ಡಿಸೋಜ, ಗ್ರಾಮಸ್ಥರಾದ ಅಲ್ತಾಫ್‌ ಮಲಾರ್‌, ಅಬ್ದುಲ್‌ ಕಬೀರ್‌ ಮಾತನಾಡಿದರು. ಉಪಾಧ್ಯಕ್ಷೆ ಲೀಲಾವತಿ, ಎಎಸ್‌ಐ ಸಂಜೀವ ಹರೇಕಳ, ಪೊಲೀಸ್‌ ಸಿಬಂದಿಗಳಾದ ಶಿವಕುಮಾರ್‌ ರಾಥೋಡ್‌,  ಶಿವಪ್ರಸಾದ್‌, ಮಂಜುನಾಥ ಮೊದಲಾದವರು ಉಪಸ್ಥಿತರಿದ್ದರು. ಪಂಚಾಯತ್‌ ಸದಸ್ಯ ವಿವೇಕ್‌ ರೈ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.