‘ಮೋದಿಯವರ ಅಭಿವೃದ್ಧಿಶೀಲ ಆಡಳಿತಕ್ಕೆ  ಬಲ ನೀಡೋಣ’

Team Udayavani, Oct 26, 2017, 3:25 PM IST

26-Mng–14.jpg

ಕಡಬ: ಪ್ರಧಾನಿ ನರೇಂದ್ರ ಮೋದಿಯವರಿಂದ ದೇಶ ಹೊಸ ಚೈತನ್ಯವನ್ನು ಪಡೆದುಕೊಂಡಿದೆ. ಅವರ ಅಭಿವೃದ್ಧಿಶೀಲ ಆಡಳಿತಕ್ಕೆ ಬಲ ತುಂಬುವ ಸಲುವಾಗಿ ರಾಜ್ಯದಲ್ಲಿಯೂ ಬಿಜೆಪಿ ನೇತೃತ್ವದ ಸರಕಾರವನ್ನು ಆಡಳಿತಕ್ಕೆ ತರುವುದು ನಮ್ಮ ಗುರಿಯಾಗಿರಲಿ ಎಂದು ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ವೆಂಕಟ್‌ ವಳಲಂಬೆ ಅವರು ನುಡಿದರು.

ಬಿಳಿನೆಲೆ ಸಿ.ಎ. ಬ್ಯಾಂಕ್‌ ಸಭಾಂಗಣದಲ್ಲಿ ಬಿಳಿನೆಲೆ ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಜರಗಿದ ಯುವ ಮೋರ್ಚಾ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರುಮಾತನಾಡಿದರು. ದೇಶ ಅಭಿವೃದ್ಧಿಯಾಗಬೇಕಾದರೆ ಇಚ್ಛಾ ಶಕ್ತಿಯ ನಾಯಕರು ಬೇಕು. ಇಂದು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿ ಇಡೀ ವಿಶ್ವವನ್ನೇ ಸೆಳೆದಿದೆ. ಅವರ ಕೈಗಳನ್ನು ಬಲಿಪಡಿಸುವುದು ಯುವ ಸಮೂಹದ  ಕರ್ತವ್ಯ ಎಂದರು.

ಗೆಲುವಿನ ಅಂತರ ಹೆಚ್ಚಿಸಿ
ಕಾಂಗ್ರೆಸ್‌ ಮುಕ್ತ ಭಾರತದ ಕಡೆ ಬಿಜೆಪಿಯ ನಾಗಾಲೋಟ ಮುಂದುವರಿಯುತ್ತಿದೆ. ಮುಂದಿನ ದಿನ ಗಳಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆ ನಿರ್ಣಾಯಕವಾಗಲಿದೆ. ಆದುದರಿಂದ ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಪಕ್ಷದ ಗೆಲುವಿನ ಅಂತರವನ್ನು ಇನ್ನಷ್ಟು ಹೆಚ್ಚಿಸಬೇಕು ಎಂದು ಅವರು ಕರೆ ನೀಡಿದರು.

ಜನಪರ ಯೋಜನೆ ಬಗ್ಗೆ ತಿಳಿಸಿ
ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರಕಾರದ ಆಡಳಿತದಲ್ಲಿ ತನ್ನ ಸ್ವಂತ ವರ್ಚಸ್ಸಿನ ಮೂಲಕ ಅನುದಾನಗಳನ್ನು ತರಿಸಿಕೊಂಡು ಕ್ಷೇತ್ರದ ಅಭಿವೃದ್ಧಿ ಮಾಡಿಸುತ್ತಿರುವ ನಮ್ಮ ಕ್ಷೇತ್ರದ ಶಾಸಕರ ಕೆಲಸ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರ ಜನಪರ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ದು ಅರ್ಹ ಫಲಾನುಭವಿಗಳಿಗೆ ಸರಕಾರದ ಸವಲತ್ತುಗಳನ್ನು ತೆಗೆಸಿಕೊಡುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಪ್ರಾಮಾಣಿಕವಾಗಿ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಕಡಬ ಶಕ್ತಿಕೇಂದ್ರದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್‌ ಅವರು ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಯುವ ಮೋರ್ಚಾ ದ.ಕ. ಜಿಲ್ಲಾ ಉಪಾಧ್ಯಕ್ಷ ಯಶವಂತ ಗೌಡ ಬೆಳಾಲು, ಯುವ ಮೋರ್ಚಾ ಸುಳ್ಯ ಮಂಡಲ ಉಪಾಧ್ಯಕ್ಷ ಸುರೇಶ್‌ ಗೌಡ ದೇಂತಾರು, ಬಿಳಿನೆಲೆ ಸಿ.ಎ. ಬ್ಯಾಂಕ್‌ ಅಧ್ಯಕ್ಷ ಬಾಲಕೃಷ್ಣ ಗೌಡ ವಾಲ್ತಾಜೆ, ಪಕ್ಷದ ಬಿಳಿನೆಲೆ ಪ್ರಭಾರಿ ಸತೀಶ್‌ ಪೂಜಾರಿ ಐತ್ತೂರು, ಯುವ ಮೋರ್ಚಾಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ಮಾಧವ ಚಾಂತಲ ಅವರು ಅತಿಥಿಗಳಾಗಿ ಆಗಮಿಸಿದ್ದರು. ಯುವ ಮೋರ್ಚಾ ಕಡಬ ಶಕ್ತಿಕೇಂದ್ರದ ಅಧ್ಯಕ್ಷ ಮಧುಸೂದನ ಓಡೋಳಿ, ಕಾರ್ಯದರ್ಶಿ ರಮೇಶ್‌ ವಾಲ್ತಾಜೆ, ಯುವ ಮೋರ್ಚಾ ಬಿಳಿನೆಲೆ ಗ್ರಾಮದ ಅಧ್ಯಕ್ಷ ಪ್ರಕಾಶ್‌ ಪೊಂಬೊಳಿ, ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ದಯಾನಂದ, ಕಾರ್ಯದರ್ಶಿ ಪಾರ್ವತಿ ಶಶಿ, ಬಿಜೆಪಿ ಬಿಳಿನೆಲೆ ಗ್ರಾಮ ಸಮಿತಿಯ ಕಾರ್ಯದರ್ಶಿ ಮೋಹನ ಪಳ್ಳಿಗದ್ದೆ ಮೊದಲಾದವರು ಉಪಸ್ಥಿತರಿದ್ದರು.

ಯುವ ಮೋರ್ಚಾ ಸದಸ್ಯ ರಾಜೇಶ್‌ ಸೂಡ್ಲು ಸ್ವಾಗತಿಸಿ, ಬಿಜೆಪಿ ಬಿಳಿನೆಲೆ ಗ್ರಾಮಸಮಿತಿಯ ಅಧ್ಯಕ್ಷ ವಿಜಯಕುಮಾರ್‌ ಎರ್ಕ ಪ್ರಸ್ತಾವನೆಗೈದರು. ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷೆ ಸರೋಜಿನಿ ಜಯಪ್ರಕಾಶ್‌ ನಿರೂಪಿಸಿ, ಹರ್ಷಿತ್‌ ಸೂಡ್ಲು ವಂದಿಸಿದರು.

ಕಾರ್ಯಕರ್ತರು ಬಿಜೆಪಿಯ ಆಸ್ತಿ
 ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷ ಪದ್ಮನಾಭ ಶೆಟ್ಟಿ ಅವರು ಮಾತನಾಡಿ, ಬಿಜೆಪಿ ಇಂದು ಇಷ್ಟೊಂದು ಎತ್ತರಕ್ಕೆ ಏರಿದ್ದರೆ ಅದು ಕಾರ್ಯಕರ್ತರ ಶ್ರಮದ ಫಲ. ಪಕ್ಷಕ್ಕಾಗಿ ಪ್ರಾಮಾಣಿಕತೆಯಿಂದ ದುಡಿಯುವ ಸಕ್ರಿಯ ಕಾರ್ಯಕರ್ತರು ಬಿಜೆಪಿಯ ಆಸ್ತಿ. ಅದರಲ್ಲಿಯೂ ಬಿಜೆಪಿಯ ಗೆಲವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಯುವ ಕಾರ್ಯಕರ್ತರು ಪಕ್ಷದ ಬಲವರ್ಧನೆಗೆ ಮತ್ತಷ್ಟು ದುಡಿಯಬೇಕು ಎಂದರು.

ಟಾಪ್ ನ್ಯೂಸ್

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.