ಲ್ಯುಕೇಮಿಯಾ: ಎಸೆಸೆಲ್ಸಿ ವಿದ್ಯಾರ್ಥಿನಿ ಸಾವು

Team Udayavani, Apr 6, 2018, 2:13 PM IST

Sweety-6-4.jpg

ಉಳ್ಳಾಲ: ವರ್ಷವಿಡೀ SSLCಗೆ ಸಿದ್ಧತೆ ನಡೆಸಿ ಪರೀಕ್ಷೆ ಮುಗಿಸುವ ತವಕದಲ್ಲಿದ್ದ, ಇದರ ನಡುವೆ ಕಳೆದೊಂದು ತಿಂಗಳಿಂದ ಅನಾರೋಗ್ಯ ಕಾಡಿದರೂ ಪರೀಕ್ಷೆ ಬರೆದ ಬಾಲೆಯೊಬ್ಬಳು ಕೊನೆಯ ಪರೀಕ್ಷೆಗೆ ಮುನ್ನವೇ ಬದುಕಿಗೆ ವಿದಾಯ ಹೇಳಿದ್ದಾಳೆ. ಅಸೈಗೋಳಿಯ ಸೈಟ್‌ ನಿವಾಸಿ ಸ್ಟೀಫನ್‌ ಡಿ’ಸೋಜಾ ಮತ್ತು ಗ್ರೇಸಿ ಡಿ’ಸೋಜಾ ಅವರ ಪುತ್ರಿ ಸ್ವೀಡಲ್‌ ಸ್ವೀಟಿ ಡಿ’ಸೋಜಾ (16) ಮೃತ ಬಾಲಕಿ. ಅನಾರೋಗ್ಯದ ನಡುವೆಯೇ ಬುಧವಾರ SSLC ಹಿಂದಿ ಪರೀಕ್ಷೆಗೆ ಉತ್ತರಿಸಿದ್ದ ಸ್ವೀಟಿ ಬಳಿಕ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಳು. ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಹೊಟ್ಟೆ ನೋವು ಕಾಡಿತ್ತು
ನಗರದ ಸೈಂಟ್‌ ಆ್ಯನ್ಸ್‌ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸ್ವೀಟಿ ಸದಾ ಚಟುವಟಿಕೆಯ ಹುಡುಗಿ, ಓದುವುದರಲ್ಲೂ ಮುಂದಿದ್ದಳು. ಎಸ್‌ಎಸ್‌ ಎಲ್‌ಸಿಯಲ್ಲಿ ಉತ್ತಮ ಅಂಕ ಗಳಿಸಿ ಉನ್ನತ ಶಿಕ್ಷಣದ ಕನಸು ಕಾಣುತ್ತಿದ್ದ ಸ್ವೀಟಿಗೆ ಕಳೆದ ಒಂದು ತಿಂಗಳಿನಿಂದ ಜ್ವರ, ಹೊಟ್ಟೆನೋವು ಆಗಾಗ ಕಾಡುತ್ತಿತ್ತು. ಸ್ಥಳೀಯ ವೈದ್ಯರು ನೀಡಿದ ಔಷಧದಿಂದ ಉಪಶಮನ ಹೊಂದುತ್ತಿದ್ದಳು. ಪರೀಕ್ಷೆಯ ಒತ್ತಡದಿಂದ ಉಂಟಾದ ಅನಾರೋಗ್ಯ ಇದಾಗಿರಬಹುದು ಎಂದು ಮನೆಯವರು ಭಾವಿಸಿದ್ದರು.

ಪತ್ತೆಯಾದ ರಕ್ತ ಕ್ಯಾನ್ಸರ್‌ 

ಪರೀಕ್ಷೆ ಪ್ರಾರಂಭಗೊಂಡ ಬಳಿಕವೂ ಅನಾರೋಗ್ಯ ಕಾಡಿದ್ದು, ಬುಧವಾರ ಬೆಳಗ್ಗೆ ಹೊಟ್ಟೆ ನೋವು ಉಲ್ಬಣಿಸಿತ್ತು. ಬೆಳಗ್ಗೆ ಆರರ ವೇಳೆಗೆ ಸ್ವೀಟಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ರಕ್ತ ಪರೀಕ್ಷೆ ಸೇರಿದಂತೆ ವಿವಿಧ ತಪಾಸಣೆಗಳಿಗೆ ಒಳಪಡಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಗಳ ಫ‌ಲಿತಾಂಶ ಸಂಜೆಯ ವೇಳೆಗೆ ಸಿಗಲಿದ್ದುದರಿಂದ ಮಂಗಳೂರಿನ ರೊಸಾರಿಯೋ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಹಿಂದಿ ಪರೀಕ್ಷೆಗೆ ಹಾಜರಾಗಿ ಉತ್ತರಿಸಿ ಆಸ್ಪತ್ರೆಗೆ ವಾಪಸಾಗಿದ್ದಳು. ಸಂಜೆ ವೇಳೆಗೆ ಆಕೆಗೆ ಆರೋಗ್ಯ ಸ್ಥಿತಿ ವಿಷಮಿಸಿ ತುರ್ತು ನಿಗಾ ಘಟಕಕ್ಕೆ ವರ್ಗಾಯಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ತಡರಾತ್ರಿ ಮೃತಪಟ್ಟಿದ್ದಾಳೆ.

ಸ್ವೀಟಿಯ ವೈದ್ಯಕೀಯ ಪರೀಕ್ಷೆಯ ವರದಿ ಹೆತ್ತವರಿಗೆ ಗುರುವಾರ ಸಂಜೆ ವೇಳೆಗೆ ಸಿಕ್ಕಾಗ ಆಕೆ ರಕ್ತ ಕ್ಯಾನ್ಸರ್‌ (ಲ್ಯುಕೇಮಿಯಾ)ನಿಂದ ಬಳಲುತ್ತಿದ್ದ ಮಾಹಿತಿ ಸಿಕ್ಕಿದೆ. ಶುಕ್ರವಾರ ಕೊನೆಯ ಸಮಾಜ ವಿಜ್ಞಾನ ಪರೀಕ್ಷೆ ಮುಗಿಸಿ ಸಂತೋಷದಿಂದ ಕುಣಿಯಬೇಕಾಗಿದ್ದ ಎಳೆ ಜೀವವನ್ನು ಲ್ಯುಕೇಮಿಯಾ ಬಲಿ ತೆಗೆದುಕೊಂಡಿದೆ. ಅಂಗಡಿ ವ್ಯಾಪಾರ ನಡೆಸುವ ತಂದೆ ಸ್ಟೀಫನ್‌ ಡಿ’ಸೋಜಾ, ಖಾಸಗಿ ಆಸ್ಪತ್ರೆ ಉದ್ಯೋಗಿಯಾಗಿರುವ ತಾಯಿ ಗ್ರೇಸಿ ಡಿ’ಸೋಜಾ ಮತ್ತು ಹತ್ತು ವರ್ಷ ವಯಸ್ಸಿನ ಸಹೋದರ ಶಾನ್‌ನನ್ನು ಸ್ವೀಟಿ ಆಗಲಿದ್ದಾಳೆ.

ಟಾಪ್ ನ್ಯೂಸ್

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.