ಬಾಲಿವುಡ್ ಇಷ್ಟ, ಆದರೆ ಮಿಸ್ ವರ್ಲ್ಡ್ ಒಂದೇ ಗುರಿ: ಸಿನಿ ಶೆಟ್ಟಿ ಮನದಾಳದ ಮಾತು
Team Udayavani, Jul 19, 2022, 7:25 AM IST
ಮಂಗಳೂರು: ಫೆಮಿನಾ ಮಿಸ್ ಇಂಡಿಯಾ ಪ್ರಶಸ್ತಿ ಗೆದ್ದಿರುವುದಕ್ಕೆ ಖುಷಿ ಇದೆ, ಮುಂದೆ ಮಿಸ್ ವರ್ಲ್ಡ್ಆಗುವ ಗುರಿ ಹೊಂದಿದ್ದೇನೆ. ಇದಕ್ಕೆ ತಯಾರಿ ನಡೆಸು ತ್ತಿದ್ದೇನೆ ಎಂದು ಫೆಮಿನಾ ಮಿಸ್ ಇಂಡಿಯಾ ಸಿನಿ ಶೆಟ್ಟಿ ಹೇಳಿದ್ದಾರೆ.
ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿದ ಬಳಿಕ ಮೊದಲ ಬಾರಿಗೆ ತಮ್ಮೂರಿಗೆ ಆಗಮಿಸಿದ ಅವರನ್ನು ವಿಮಾನ ನಿಲ್ದಾಣದಲ್ಲಿ ಅವರ ಕುಟುಂಬ ವರ್ಗದವರು ಆರತಿ ಎತ್ತಿ ಸ್ವಾಗತಿಸಿ ಸಂಭ್ರಮಿಸಿದರು. ಆ ಬಳಿಕ ಇತರ ಪ್ರಯಾಣಿಕರು, ಸ್ಥಳೀಯರು ಅವರೊಂದಿಗೆ ಫೋಟೋ, ಸೆಲ್ಫಿ ತೆಗೆದುಕೊಂಡು ಸಂತಸಪಟ್ಟರು.
ಬಾಲಿವುಡ್‌ನಲ್ಲಿ ನಟಿಸುವುದೂ ಇಷ್ಟ, ಉತ್ತಮ ಕಥೆ, ಸ್ಕ್ರಿಪ್ಟ್ ಇದ್ದರೆ ಅಭಿನಯಿಸುವ ಇರಾದೆ ಇದೆ, ಆದರೆ ಸದ್ಯಕ್ಕೆ ಮಿಸ್ ವರ್ಲ್ಡ್ ಬಗ್ಗೆ ಮಾತ್ರ ಆದ್ಯತೆ ಎಂದು ಇದೇ ವೇಳೆ ಸಿನಿ ಶೆಟ್ಟಿ ಸುದ್ದಿಗಾರರಿಗೆ ತಿಳಿಸಿದರು.
ನಾನು ಬದುಕಿನ ವಿದ್ಯಾರ್ಥಿನಿ. ಕಾಮರ್ಸ್ ಕಲಿಯುತ್ತಿದ್ದೆ, ಆ ಬಳಿಕ ನೃತ್ಯ ಕಲಿಯುವಾಗ ಸೃಜನ ಶೀಲತೆಯ ಬಗ್ಗೆ ಅರಿತುಕೊಂಡೆ, ಫೆಮಿನಾ ಮಿಸ್ ಇಂಡಿಯಾ ಒಂದು ಬಹುದೊಡ್ಡ ಪ್ರಯಾಣ. ಇದು ನನಗೆ ಜೀವನದಲ್ಲಿ ಭರವಸೆ ಹಾಗೂ ವಿಶ್ವಾಸವನ್ನು ದೊರಕಿಸಿಕೊಟ್ಟಿತು ಎಂದರು.
ನನ್ನ ಹೆತ್ತವರ ಊರು ಉಡುಪಿ. ನನ್ನ ರಜಾದಿನ ಗಳನ್ನು ಉಡುಪಿಯ ಅಜ್ಜಿ ಮನೆಯಲ್ಲಿ ಕಳೆದಿದ್ದೆ, ಅಲ್ಲಿ ನನ್ನ ಕಸಿನ್ಸ್ ಜತೆ ವಾರಗಟ್ಟಲೆ ಇದ್ದು ಆಟವಾಡಿ ಕೊಂಡಿದ್ದ ನೆನಪು ಅವಿಸ್ಮರಣೀಯ. ಈಗ ಮತ್ತೆ ಅಲ್ಲಿಗೆ ಬರುತ್ತಿರುವುದರಿಂದ ಸಂತಸಗೊಂಡಿದ್ದೇನೆ ಎಂದರು.
ಐಶ್ವರ್ಯಾ ರೈ ಇಷ್ಟ, ಹೆತ್ತವರೇ ಆದರ್ಶ
ಚಿಕ್ಕವಳಿದ್ದಾಗಲೇ ಐಶ್ವರ್ಯಾ ರೈ ಅವರ ರ್‍ಯಾಂಪ್ ವಾಕ್ ನೋಡಿ ಬೆಳೆದವಳು, ಅವರಿಂದ ಸ್ಫೂರ್ತಿ ಪಡೆದಿದ್ದೇನೆ ಎನ್ನುವ ಸಿನಿ ಅವರಿಗೆ ಅವರ ಹೆತ್ತವರೇ ಆದರ್ಶವಂತೆ. ಅವರಿಂದಲೇ ಜೀವನ ಮೌಲ್ಯಗಳನ್ನು ಕಲಿತಿದ್ದೇನೆ ಎಂದೂ ಹೇಳಿಕೊಂಡರು.
ಉಡುಪಿ ತುಳುವಿನಲ್ಲಿ ಮಾತನಾಡಿ, ನನ್ನನ್ನು ಈ ರೀತಿಯಲ್ಲಿ ಎಲ್ಲರೂ ಸ್ವಾಗತಿಸಿರುವುದು ಬಹಳ ಖುಷಿ ತಂದಿದೆ. ನಾನು ಮಿಸ್ ಮಿಸ್ ವರ್ಲ್ಡ್ ಗೆ ತಯಾರಿ ನಡೆಸುತ್ತಿದ್ದೇನೆ. ಹಾಗಾಗಿ ನನಗೆ ಎಲ್ಲರ ಆಶೀರ್ವಾದ ಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.