ಓದುವ ಹವ್ಯಾಸದಿಂದ ಸಾಹಿತ್ಯ ಲೋಕ ಸಮೃದ್ಧ
Team Udayavani, Nov 2, 2017, 12:25 PM IST
ಕೊಡಿಯಾಲ್‌ಬೈಲ್: ರಾಜ್ಯೋತ್ಸವದ ಆಚರಣೆ ಒಂದು ದಿನಕ್ಕೆ ಸೀಮಿತಗೊಳ್ಳದೆ ನಿತ್ಯ ನಿರಂತರವಾಗಿರಬೇಕು. ನಮ್ಮಲ್ಲಿ ಓದುವ ಹವ್ಯಾಸ ಬೆಳೆದಾಗ ಸಾಹಿತ್ಯಲೋಕ ಸಮೃದ್ಧವಾಗುತ್ತದೆ. ಈ ನಿಟ್ಟಿನಲ್ಲಿ ಮಕ್ಕಳು ಕನಿಷ್ಠ
ತಿಂಗಳಿಗೊಂದು ಕನ್ನಡ ಪುಸ್ತಕವನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಹಾಸ್ಯ ಸಾಹಿತಿ ಕುಗೋ
ಹೇಳಿದರು.
ಅವರು ಬುಧವಾರ ಇಲ್ಲಿನ ಕರ್ಣಾಟಕ ಬ್ಯಾಂಕಿನ ಸಭಾಂಗಣದಲ್ಲಿ ಮಂಗಳೂರು ಡಿವಿಜಿ ಬಳಗದ ವತಿಯಿಂದ ಜರಗಿದ ಕರ್ನಾ ಟಕ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಆಯೋಜಿಸಿದ್ದ ಕಲಾವಿದ ಮೋಹನ್ ವೆರ್ಣೇಕರ್ ಅವರ 108 ಕನ್ನಡ ಸಾಹಿತಿಗಳ ಚುಕ್ಕಿ ಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದರು.
ಮೋಹನ್ ವೆರ್ಣೇಕರ್ ಅವರ ‘ಚುಕ್ಕಿಚಿತ್ರಗಳಲ್ಲಿ ಸಾಹಿತ್ಯ ಚೇತನಗಳು’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿದ
ಕರ್ಣಾಟಕ ಬ್ಯಾಂಕಿನ ಮಹಾಪ್ರಬಂಧಕ ಬಿ.ನಾಗರಾಜ ರಾವ್ ಅವರು, ಸಾಹಿತ್ಯ ಕಾರ್ಯಕ್ರಮಗಳಿಗೆ ಕರ್ಣಾಟಕ ಬ್ಯಾಂಕ್ ನಿರಂತರ ಸಹಕಾರ ನೀಡುತ್ತದೆ ಎಂದರು. ವಿದ್ವಾನ್ ಜಿ.ಎಸ್.ನಟೇಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಕಾಶಕ ಸಂಸ್ಕೃತಿ ಸುಬ್ರಹ್ಮಣ್ಯ ಅವರು ಪುಸ್ತಕ ಪರಿಚಯ ಮಾಡಿದರು. ವೇದಿಕೆಯಲ್ಲಿ ಕಲಾವಿದ ಮೋಹನ್ ವರ್ಣೇಕರ್ ಉಪಸ್ಥಿತರಿದ್ದರು. ಡಿವಿಜಿ ಬಳಗದ ಅಧ್ಯಕ್ಷ ಕನಕ ರಾಜು ಸ್ವಾಗತಿಸಿ, ವಸಂತ ಕಜೆ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.