ಲೋಕಸಭಾ ಚುನಾವಣೆ: ಉಭಯ ತಾಲೂಕುಗಳಲ್ಲಿ ಸಿದ್ಧತೆ

ಇಂದು ಮಸ್ಟರಿಂಗ್‌; ಸುಸೂತ್ರ ಚುನಾವಣೆಗೆ ಆಯೋಗ ಸಜ್ಜು

Team Udayavani, Apr 17, 2019, 6:00 AM IST

r-2

ಬಂಟ್ವಾಳ: ಲೋಕಸಭಾ ಚುನಾವಣೆಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮವಾಗಿ 2,22,166 ಮತದಾರರಿದ್ದು, ಮತ ಚಲಾಯಿಸಲು ಅನುಕೂಲ ಕಲ್ಪಿಸಿದೆ ಎಂದು ಬಂಟ್ವಾಳ ತಾ| ಚುನಾವಣಾಧಿಕಾರಿ ಎಸ್‌.ಸಿ. ಮಹೇಶ್‌, ಸಹಾಯಕ ಚುನಾವಣಾಧಿಕಾರಿ ರಾಜಣ್ಣ ತಿಳಿಸಿದ್ದಾರೆ.

249 ಮತಗಟ್ಟೆಗಳಿಗೆ ಎ. 17ರಂದು ತೆರಳುವ 1,166 ಚುನಾವಣಾಧಿಕಾರಿ ವರ್ಗಕ್ಕೆ ಮಸ್ಟರಿಂಗ್‌ ಕೇಂದ್ರ ಮೊಡಂ ಕಾಪು ಇನ್ಫೆಟ್‌ ಜೀಸಸ್‌ ಆಂಗ್ಲ ಮಾಧ್ಯಮ ಶಾಲೆಯ 21 ರೂಂಗಳಲ್ಲಿ ವ್ಯವಸ್ಥೆಗಳು ಸಿದ್ಧಗೊಂಡಿದೆ. 85 ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ, 35 ಮತಗಟ್ಟೆಗಳಿಗೆ ವೀಕ್ಷಕರ ನೇಮಕ ಮಾಡಿದೆ. 17 ಮತಗಟ್ಟೆಗಳಲ್ಲಿ ನೇರ ವೆಬ್‌ ಕಾಸ್ಟಿಂಗ್‌ ವ್ಯವಸ್ಥೆ ಇದೆ. 15 ಮತಗಟ್ಟೆಗಳಲ್ಲಿ ವಿಡಿಯೋ ಗ್ರಾಫಿಂಗ್‌ ವ್ಯವಸ್ಥೆ ಮಾಡಿದೆ. 96 ರೂಟ್‌ ವ್ಯವಸ್ಥೆಗೆ ಮಾರ್ಗಾಧಿಕಾರಿಗಳು ಇರುತ್ತಾರೆ. 125 ವಾಹನಗಳನ್ನು ಎ. 16ರಂದೇ ಮಸ್ಟರಿಂಗ್‌ ಕೇಂದ್ರಕ್ಕೆ ತರಿಸಿ ಕಾದಿರಿಸಿಕೊಳ್ಳಲಾಗಿದೆ. ಬೂತ್‌ ಮಟ್ಟದಲ್ಲಿ ಬೂತ್‌ ಲೆವೆಲ್‌ ಅಸಿಸ್ಟೆಂಟ್‌ಗಳು ಕರ್ತವ್ಯ ನಿರ್ವಹಿಸಲು ತೊಡಗಿಸಿದ್ದು ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ.

ಮತಗಟ್ಟೆ ಕೇಂದ್ರಕ್ಕೆ ಎಸ್‌ಪಿ ಭೇಟಿ
ಮೊಡಂಕಾಪು ಮತಗಟ್ಟೆ ಕೇಂದ್ರಕ್ಕೆ ಎ. 16ರಂದು ಸಂಜೆ ಜಿಲ್ಲಾ ಪೊಲೀಸ್‌ ಅಧೀಕ್ಷಕ ಲಕ್ಷ್ಮೀಪ್ರಸಾದ್‌ ಭೇಟಿ ನೀಡಿ ಮಸ್ಟರಿಂಗ್‌ ಕೇಂದ್ರ ವ್ಯವಸ್ಥೆಗಳನ್ನು ಪರಿಶೀಲನೆ ಮಾಡಿದರು. ಈ ಸಂದರ್ಭ ಅವರು ಮಾಹಿತಿ ನೀಡಿ, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಬ್ಬರು ಡಿವೈಎಸ್‌ಪಿ, ನಾಲ್ಕು ಮಂದಿ ಇನ್‌ಸ್ಪೆಕ್ಟರ್‌ಗಳು ಕರ್ತವ್ಯದಲ್ಲಿ ಇರುವರು. ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ಗಳು ಕರ್ತವ್ಯದ ರೌಂಡ್ಸ್‌ನಲ್ಲಿ ಇರುವರು. ಸಂಗಬೆಟ್ಟು ಕೆರೆಬಳಿ ಸರಕಾರಿ ಹಿ.ಪ್ರಾ.ಶಾಲೆಯನ್ನು ಪಿಂಕ್‌ ಮತಗಟ್ಟೆಯಾಗಿ ರೂಪಿಸಿದ್ದು ಅಲ್ಲಿಗೆ ಮಹಿಳಾ ಪೊಲೀಸ್‌ ಸಿಬಂದಿಯನ್ನು ನಿಯೋಜಿಸಲಾಗುತ್ತದೆ.ಮತದಾರರು ಶಾಂತ ರೀತಿಯಲ್ಲಿ ಮತದಾನ ಮಾಡಬೇಕು. ಯಾವುದೇ ಭಯಕ್ಕೆ ಆಸ್ಪದವಿಲ್ಲ ಎಂದರು.

ಊಟ -ಉಪಾಹಾರ
ಮತಗಟ್ಟೆಗೆ ತೆರಳುವ ಅಧಿಕಾರಿ ಸಿಬಂದಿಗೆ ಮಸ್ಟರಿಂಗ್‌ ಕೇಂದ್ರದಲ್ಲಿ ಎ. 17ರಂದು ಬೆಳಗ್ಗೆ 2,000 ಮಂದಿಗೆ ಉಪಾಹಾರ, ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ಎ. 17ರಂದು ರಾತ್ರಿ, 18ರಂದು ಬೆಳಗ್ಗೆ ಉಪಹಾರ, ಮಧ್ಯಾಹ್ನ ಊಟ, ಸಂಜೆ ಚಹಾದ ವ್ಯವಸ್ಥೆಯನ್ನು ಬಿಸಿಯೂಟ ಕಾರ್ಯಕರ್ತರು ನಿರ್ವಹಿಸುವರು. 18 ಚುನಾವಣ ದಿನ ಸಂಜೆ ಮತಯಂತ್ರವನ್ನು ಡಿಮಸ್ಟರಿಂಗ್‌ ಕೇಂದ್ರಕ್ಕೆ ಒಪ್ಪಿಸಲು ಬರುವ 2,000 ಮಂದಿ ಮತಗಟ್ಟೆ ಅಧಿಕಾರಿ ಸಿಬಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ಪೊಲೀಸ್‌ ಸಿಬಂದಿ ನಿಯೋಜನೆ
ಕ್ಷೇತ್ರದಲ್ಲಿ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ 70 ಸೆಕ್ಟರ್‌ಗಳನ್ನು ಮಾಡಿಕೊಂಡು 300 ಪೊಲೀಸ್‌ ಸಿಬಂದಿ ನಿಯೋಜಿಸಲಾಗಿದೆ. 85 ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿದ್ದು , ಪೊಲೀಸ್‌ ಸಿಬಂದಿ ಜತೆ ಸಿಆರ್‌ಪಿಗಳನ್ನು ನಿಯೋಜಿಸಿದೆ. ಬಂಟ್ವಾಳಕ್ಕೆ ಎರಡು ಹೆಚ್ಚುವರಿ ಕೆಎಸ್‌ಆರ್‌ಪಿ ಬೆಟಾಲಿಯನ್‌, ಹೋಂಗಾಡ್‌ ಸಿಬಂದಿಯನ್ನು ಕರ್ತವ್ಯಕ್ಕೆ ತೊಡಗಿಸಿದೆ
ಲಕ್ಷ್ಮೀಪ್ರಸಾದ್‌, ಜಿಲ್ಲಾ ಪೊಲೀಸ್‌ ಅಧೀಕ್ಷಕರು

ಟಾಪ್ ನ್ಯೂಸ್

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-ewewq

ODI; ಹ್ಯಾರಿಸ್‌ ರೌಫ್ ಗೆ ಹೆದರಿದ ಆಸೀಸ್‌ : 9 ವಿಕೆಟ್‌ಗಳಿಂದ ಗೆದ್ದ ಪಾಕಿಸ್ಥಾನ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.