Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

ಪ್ರಗತಿ ಚರ್ಚೆ ಮಧ್ಯೆಯೇ ಜಾತಿ ಗಣಿತ ಶುರು

Team Udayavani, Apr 24, 2024, 6:24 AM IST

Lok Sabha Election; Vigorous fight of new faces in Dakshina Kannada

ಕೆಲವು ದಶಕಗಳಿಂದಲೇ ಕಾಂಗ್ರೆಸ್‌-ಬಿಜೆಪಿ ನೇರ ಹಣಾ ಹಣಿಯ ಕಣವಾಗಿ ಮಾರ್ಪಟ್ಟಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಉಭಯ ಪಕ್ಷಗಳಿಂದಲೂ ಹೊಸಬರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಕಾಂಗ್ರೆಸ್‌ನ ಪದ್ಮರಾಜ್‌ ಆರ್‌. ಅವರು ವಕೀಲರಾದರೆ, ಬಿಜೆಪಿಯ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ನಿವೃತ್ತ ಸೇನಾಧಿಕಾರಿ. ಇಬ್ಬರಲ್ಲಿನ ಪ್ರಮುಖವಾದ ಸಾಮ್ಯತೆಯೆಂದರೆ ಇಬ್ಬರೂ ವೃತ್ತಿಪರ ರಾಜಕಾರಣಿಗಳಲ್ಲ ಎಂಬುದು. ಇಬ್ಬರೂ ಆರೋಪ ರಹಿತರು. ಹಾಗೆಯೇ ಇಬ್ಬರದ್ದೂ ರಾಜಕೀಯ ಕ್ಷೇತ್ರದ ರಂಗ ಪ್ರವೇಶ.

ಬಿಜೆಪಿಯು ಹಾಲಿ ಸಂಸದರಿಗೆ ಟಿಕೆಟ್‌ ಕೊಡಬೇಕು, ಬೇಡ ಎಂಬ ಅಂಶಗಳನ್ನು ತೂಗಿ ಅಳೆದು ಹೊಸಬರಿಗೆ ಮಣೆ ಹಾಕಿತು. ಹಾಗಾಗಿ ಮೂರು ಬಾರಿಯ ಸಂಸದ ಹಾಗೂ ನಿಕಟಪೂರ್ವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರನ್ನು ಬದಲಿಸಬೇಕಾಯಿತು. ಇದೂ ಸಹ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳಲು ಹೂಡಿದ ತಂತ್ರ. ಇದರೊಟ್ಟಿಗೆ ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪುತ್ತೂರಿನಲ್ಲಿ ಸಡ್ಡು ಹೊಡೆದಿದ್ದ ಅರುಣ್‌ ಪುತ್ತಿಲ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡಿತು. ಈ ಮೂಲಕ ಏಳಬಹುದಾದ ಆಂತರಿಕ ಅಸಮಾಧಾನದ ಅಲೆಯನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾಯಿತು. ಇದು ಸದ್ಯ ಬಿಜೆಪಿಗೆ ಸಿಕ್ಕ ಸಮಾಧಾನ.

ಪದ್ಮರಾಜ್‌ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ತಮ್ಮ ರಾಜಕೀಯ ಗುರು  ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರ ಗರಡಿಯಲ್ಲಿ ಬೆಳೆದವರು. ಜತೆಗೆ ಬಿಲ್ಲವರ ಪ್ರತಿನಿಧಿಯಾಗಿ ಗುರುತಿಸಿಕೊಂಡು ತಮ್ಮದೇ ಬಿಲ್ಲವರ ಸೇವಾ ಸಂಘಟನೆಯ ಮೂಲಕ ಸಮುದಾಯದ ಯುವಜನರನ್ನು ಒಗ್ಗೂಡಿಸುತ್ತಿರುವವರು. ಗೆಲುವಿಗಾಗಿ ಶ್ರಮ ಪಡುವ ಹುಮ್ಮಸ್ಸೂ ಇದೆ, ಇವೆಲ್ಲವನ್ನೂ ಲೆಕ್ಕ ಹಾಕಿ ಕಾಂಗ್ರೆಸ್‌ ಸಹ ಅಭ್ಯರ್ಥಿ ಆಯ್ಕೆಯಲ್ಲಿ ಜಾಣ ನಡೆ ಪ್ರದರ್ಶಿಸಿತು. ಈ ಅಭ್ಯರ್ಥಿ ಬದಲು ಹಾಗೂ ಜಾತಿ ಸಮೀಕರಣದ ಸಾಧ್ಯತೆಯತ್ತ ಕಾಂಗ್ರೆಸ್‌ ಹೊರಳಿರುವುದೂ ಒಂದು ಗೆಲುವಿಗಾಗಿ.

ಕಾಂಗ್ರೆಸ್‌ ಕ್ರಿಯಾಶೀಲವಾಗಿರುವುದು ಒಂದು ಗುರಿ, ಎರಡು ಪರಿಣಾಮಕ್ಕೆ. ಹೇಗಾದರೂ ಕ್ಷೇತ್ರವನ್ನು ಬಿಜೆಪಿಯಿಂದ ಮರಳಿ ಪಡೆಯುವುದು ಗುರಿಯಾದರೆ, ಆ ಮೂಲಕ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ ಪುನಶ್ಚೇತನಕ್ಕೆ ನಾಂದಿ ಹಾಡುವುದು. ಅದರೊಂದಿಗೆ ಬಿಜೆಪಿಯ ಪ್ರತೀ ಬಾರಿಯ ಮತ ಕ್ರೋಡೀಕರಣ ಪ್ರಯತ್ನಕ್ಕೆ ತಡೆ ಹಾಕಿದಂತಾಗುತ್ತದೆ.

ಬಿಲ್ಲವ ಸಮುದಾಯ ಈ ಕ್ಷೇತ್ರದಲ್ಲಿ ನಿರ್ಣಾಯಕ ಎಂದಿದೆ. ಬಿಲ್ಲವರ ನಿಗಮ ಬೇಕು ಎಂದು ಹೋರಾಟ ಮಾಡಿದ್ದವರು ಗೋಕರ್ಣನಾಥ ಕ್ಷೇತ್ರದ ಖಜಾಂಚಿಯೂ ಆಗಿರುವ ಪದ್ಮರಾಜ್‌ ಆರ್‌. ಹಿಂದೂ ಪರಿವಾರದ ಮಾಜಿ ಹೋರಾಟಗಾರ ಸತ್ಯಜಿತ್‌ ಸುರತ್ಕಲ್‌ ಇತ್ತೀಚೆಗೆ ಬಿಲ್ಲವ ಅಭ್ಯರ್ಥಿಗಳನ್ನು ಬಿಲ್ಲವ ವೇದಿಕೆ ಪಕ್ಷಾತೀತವಾಗಿ ಬೆಂಬಲಿಸಲಿದೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿಯೂ ಸಹ ಪ್ರಧಾನಿ ಮೋದಿಯವರನ್ನು ಕರೆಸಿ ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಮಾಲಾರ್ಪಣೆ, ಅದೇ ಸ್ಥಳದಿಂದ ರೋಡ್‌ ಶೋ ಕೂಡ ನಡೆಸಿ ಪ್ರತಿತಂತ್ರವನ್ನೂ ಹೂಡಿದೆ. ಇದು ಬಿಜೆಪಿ ಕಾರ್ಯಕರ್ತರಲ್ಲಿ ಮಿಂಚಿನ ಸಂಚಲನಕ್ಕೆ ನಾಂದಿ ಹಾಡಿದೆ.

ಇನ್ನೊಂದೆಡೆ ಕಳೆದ ಚುನಾವಣೆಯಲ್ಲಿ 46,839 ಮತಗಳನ್ನು ಗಳಿಸಿದ್ದ ಎಸ್‌ಡಿಪಿಐ ಈ ಬಾರಿ ಕಣಕ್ಕಿಳಿಯದೆ ಕಾಂಗ್ರೆಸ್‌ಗೆ ಬೆಂಬಲ ಕೊಟ್ಟಂತಿದೆ. 2019ರ ಚುನಾವಣೆಯಲ್ಲಿ 2.74 ಲಕ್ಷ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಜಯ ಸಾಧಿಸಿದ್ದರು. ಆದರೆ ಈ ಬಾರಿ ಬದಲಾಗಿರುವ ಸನ್ನಿವೇಶಗಳಿಂದ ಗೆಲುವಿನ ಅಂತರ ಕಡಿಮೆ ಆಗಬಹುದೆಂಬ ಆತಂಕ ಬಿಜೆಪಿಗೂ ಇದ್ದಂತಿದೆ. ಆದರೆ ಈ ಅಂತರ ಯಾರಿಗೆ ಗೆಲುವು ತಂದುಕೊಡುತ್ತದೆಂಬ ಕುತೂಹಲಕ್ಕೆ 42 ದಿನಗಳು ಕಾಯಬೇಕಿದೆ.

ವಿಷಯಗಳು: ಕ್ಷೇತ್ರದಲ್ಲಿ ಹಿಂದಿನಿಂದಲೂ ಚುನಾವಣೆಗೆ ನಿರ್ಣಾಯಕವೆನಿಸುತ್ತಿರುವುದು ಹಿಂದುತ್ವ ಹಾಗೂ ಕಳೆದ ಒಂದು ದಶಕದಲ್ಲಿ ನರೇಂದ್ರ ಮೋದಿ. ಮೋದಿಯವರ ಪರವಾದ ಅಲೆ ಈಗಲೂ ಇರುವುದು ಅವರ ರೋಡ್‌ ಶೋದಲ್ಲಿ ವ್ಯಕ್ತವಾಗಿದೆ. ಅಲ್ಲದೇ ಹಿಂದಿನ ಎರಡು ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಯ ಗೆಲುವಿನ ಅಂತರವನ್ನು ಹೆಚ್ಚಿಸಿತ್ತು. ಈ ಬಾರಿ ಮಂಗಳೂರು ರೈಲ್ವೇ ವಲಯ ರಚನೆಯಂಥ ಹಳೆ ಬೇಡಿಕೆ, ತುಳು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ, ಸ್ಥಳೀಯ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಆದ್ಯತೆ, ದಕ್ಷಿಣ ಕನ್ನಡಕ್ಕೆ ರೈಲ್ವೇ ಸೌಲಭ್ಯ ಹೆಚ್ಚಳದಂಥ ವಿಷಯಗಳು ಮುನ್ನೆಲೆಯಲ್ಲಿವೆ. ಹಾಗೆಯೇ ಸೌಜನ್ಯಾ ಹೋರಾಟ ಸಮಿತಿಯ ನೋಟಾ ಅಭಿಯಾನವೂ ಚರ್ಚೆಯಲ್ಲಿದೆ.

ವೇಣು ವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.