ಲೋಕಸಭಾ ಫಲಿತಾಂಶ: ಬಿಗಿ ಬಂದೋಬಸ್ತ್
Team Udayavani, May 23, 2019, 6:00 AM IST
ಪುತ್ತೂರು: ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಮೇ 23ರಂದು ಯಾವುದೇ ಅಹಿತಕರ ಘಟನೆಗಳಿಗೆ ಕಾರಣವಾಗದಂತೆ ಶಾಂತಿ ಸುವ್ಯವಸ್ಥೆಯ ನಿಟ್ಟಿನಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ವ್ಯವಸ್ಥೆಗೊಳಿಸಲಾಗಿದೆ.
ದ.ಕ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಮೇ 22ರ ಸಂಜೆಯಿಂದ ಮದ್ಯದಂಗಡಿ ಮತ್ತು ಬಾರ್‌ಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಯಾವುದೇ ರೀತಿಯಲ್ಲಿ ಗುಂಪು ಸೇರಲು ಅಥವಾ ಮೆರವಣಿಗೆಗಳನ್ನು ನಡೆಸಲು ಅವಕಾಶ ಇಲ್ಲ. ನಿಷೇಧಾಜ್ಞೆಯ ಪಾಲನೆಗೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.
ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಮೇ 23ರಂದು ಹೆಚ್ಚುವರಿ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ. ಸ್ಥಳೀಯ ಪೊಲೀಸರಿಗೆ ಬಂದೋಬಸ್ತ್ ಕಾರ್ಯದಲ್ಲಿ ನೆರವಾಗಲು ಜಿಲ್ಲಾ ಸಶಸ್ತ್ರ ಮೀಸಲು ಪಡೆ, ರಾಜ್ಯ ಮೀಸಲು ಪೊಲೀಸ್ ಪಡೆಯ ಸಿಬಂದಿ ಪುತ್ತೂರಿಗೆ ಆಗಮಿಸಲಿದ್ದಾರೆ. ಗೃಹರಕ್ಷಕ ದಳದವರು ಬಂದೋಬಸ್ತ್ನಲ್ಲಿ ಪಾಲ್ಗೊಳ್ಳಲಿದ್ದಾರೆ.
ನಿಷೇಧಾಜ್ಞೆ ಜಾರಿಯಲ್ಲಿದೆ. ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ವಿವಿಧ ರಾಜಕೀಯ ಪಕ್ಷದವರು, ಸಂಘಟನೆಯವರು ಮತ್ತು ನಾಗರಿಕರು ಶಾಂತಿ ಕಾಪಾಡುವಲ್ಲಿ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಪುತ್ತೂರು ನಗರ ಪಿಐ ಶಶಿಕುಮಾರ್ ಮನವಿ ಮಾಡಿದ್ದಾರೆ.
ಬೆಟ್ಟಿಂಗ್ ಇದೆ
ತಾಲೂಕು ವ್ಯಾಪ್ತಿಯಲ್ಲಿ ಅಭ್ಯರ್ಥಿಗಳ ಸೋಲು – ಗೆಲುವಿನ ಕುರಿತೂ ಚರ್ಚೆ ಗಳು ನಡೆಯುತ್ತಿವೆ. ಆಯಕಟ್ಟಿನ ಸ್ಥಳಗಳಲ್ಲಿ ಬೆಟ್ಟಿಂಗ್ ಸದ್ದು ಮಾಡು ತ್ತಿದೆ. ಜಿಲ್ಲೆಯ ಅಭ್ಯರ್ಥಿಗಳ ಕುರಿತಂತೆ ಹೆಚ್ಚಿನ ಬೆಟ್ಟಿಂಗ್ ಇಲ್ಲದಿ ದ್ದರೂ ಮಂಡ್ಯ ಕ್ಷೇತ್ರ, ಕೇಂದ್ರದಲ್ಲಿ ಬಹುಮತ ಹಾಗೂ ಒಟ್ಟು ಸ್ಥಾನಗಳ ಕುರಿತು ಬೆಟ್ಟಿಂಗ್ ಚಾಲ್ತಿಯಲ್ಲಿದೆ.
ವಿಜಯೋತ್ಸವಕ್ಕೆ ಅವಕಾಶವಿಲ್ಲ
ಚುನಾವಣ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಂಭ್ರಮಾಚರಣೆ, ವಿಜಯೋತ್ಸವಕ್ಕೆ ಅವಕಾಶವಿಲ್ಲ ಎಂದು ಈಗಾಗಲೇ ದ.ಕ. ಜಿಲ್ಲಾಧಿಕಾರಿಯವರು ಸೂಚನೆ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರು ಜವಾಬ್ದಾರಿ ವಹಿಸಬೇಕು.
– ಎಚ್.ಕೆ. ಕೃಷ್ಣಮೂರ್ತಿ, ಸಹಾಯಕ ಆಯುಕ್ತರು, ಪುತ್ತೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.