ಲೋಕಾಯುಕ್ತ: 2 ವರ್ಷಗಳಲ್ಲಿ 9,031 ಪ್ರಕರಣ ಇತ್ಯರ್ಥ
Team Udayavani, Jan 25, 2019, 12:50 AM IST
ಮಂಗಳೂರು: ರಾಜ್ಯ ಲೋಕಾಯುಕ್ತದಲ್ಲಿ ಎರಡು ವರ್ಷಗಳ ಅವಧಿಯಲ್ಲಿ 9,031 ಪ್ರಕರಣಗಳು ಇತ್ಯರ್ಥವಾಗಿದ್ದು 6,734 ಪ್ರಕರಣ ಗಳು ಇತ್ಯರ್ಥಕ್ಕೆ ಬಾಕಿ ಇವೆ ಎಂದು ಲೋಕಾಯುಕ್ತ ನ್ಯಾ| ಪಿ. ವಿಶ್ವನಾಥ ಶೆಟ್ಟಿ ತಿಳಿಸಿದ್ದಾರೆ.
ಅವರು ಗುರುವಾರ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭ ಸಕೀìಟ್ ಹೌಸ್‌ನಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.
2017 ಫೆಬ್ರವರಿ 1ರಂದು ತಾನು ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸುವ ಸಂದರ್ಭ 7,350 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದ್ದವು. ಅಂದಿನಿಂದ 2019 ಜನವರಿ 4ರ ವರೆಗಿನ ಅವಧಿಯಲ್ಲಿ 8,415 ಪ್ರಕರಣಗಳು ಹೊಸದಾಗಿ ಸೇರ್ಪಡೆಗೊಂಡಿದ್ದು, ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 15,765 ಆಗಿತ್ತು. ಈ ಪೈಕಿ ಕಳೆದ 2 ವರ್ಷಗಳಲ್ಲಿ 9,031 ಪ್ರಕರಣಗಳು ವಿಲೇವಾರಿ ಆಗಿದ್ದು, 6,734 ಪ್ರಕರಣಗಳು ಬಾಕಿ ಉಳಿದಿವೆ ಎಂದು ವಿವರಿಸಿದರು.
ತಾನು ಅಧಿಕಾರ ಸ್ವೀಕರಿಸುವ ಸಂದರ್ಭ ಇದ್ದ ಬಾಕಿ ಪ್ರಕರಣಗಳು ಮತ್ತು ಎರಡು ವರ್ಷಗಳ ಬಳಿಕ ಈಗ ಬಾಕಿ ಉಳಿದಿರುವ ಪ್ರಕರಣಗಳನ್ನು ತುಲನೆ ಮಾಡಿದರೆ ಇತ್ಯರ್ಥ ಆಗಿರುವ ಪ್ರಕರಣಗಳ ಸಂಖ್ಯೆ ಅಧಿಕ ಎಂದರು.
ಸರಕಾರಿ ಆಸ್ಪತ್ರೆಗಳ ಸ್ಥಿತಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮವಾಗಿದೆ. ಇಲ್ಲಿ ಸರಕಾರಿ ವೈದ್ಯರು ಚೆನ್ನಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರಕಾರಿ ಆಸ್ಪತ್ರೆಗಳಿಗೆ ರೋಗಿಗಳು ಅಧಿಕ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದು, ಇದರಿಂದ ವೈದ್ಯರಿಗೂ ಕರ್ತವ್ಯದ ಒತ್ತಡ ಜಾಸ್ತಿ ಇರುತ್ತದೆ. ಹಾಗಿದ್ದರೂ ಉತ್ತಮ ಸೇವೆಯನ್ನು ಒದಗಿಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ
ಮೂರು ದಿನವಾದರೂ ದಾಖಲಾಗದ ಎಫ್‌ಐಆರ್ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!
ಡಾ| ವೀರಪ್ಪ ಮೊಯ್ಲಿ ಕೃತಿ “ವಿಶ್ವ ಸಂಸ್ಕೃತಿಯ ಮಹಾಯಾನ’ ಭಾಗ-2 ನಾಳೆ ಬಿಡುಗಡೆ
Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ನೈಸರ್ಗಿಕ ಅನಿಲ
Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.