ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಲೋಕಾಯುಕ್ತ ಎಸ್‌ಪಿ ಭೇಟಿ
Team Udayavani, Nov 20, 2017, 3:55 PM IST
ಬೆಳ್ತಂಗಡಿ: ಸರಕಾರಿ ಆಸ್ಪತ್ರೆಗಳಲ್ಲಿ ಸಮರ್ಪಕ ಚಿಕಿತ್ಸೆ ದೊರೆಯುತ್ತಿದೆಯೇ ಎಂದು ಲೋಕಾಯುಕ್ತ ಎಸ್‌ಪಿ ರಶ್ಮಿ ಅವರು ಶನಿವಾರ ಇಲ್ಲಿನ ಸರಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಆಸ್ಪತ್ರೆಯ ಶವಾಗಾರ , ಅಡುಗೆ ಕೋಣೆ ಸ್ವತ್ಛತೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಡಯಾಲಿಸಿಸ್ ಕೇಂದ್ರಕ್ಕೆ 40 ಜನ ನೋಂದಾಯಿಸಿದ್ದರೂ ವಾರದಲ್ಲಿ 16 ಜನರಿಗಷ್ಟೇ ಮಾಡಲು ಸಾಧ್ಯವಾಗುತ್ತಿದ್ದು ಈ ಬಗ್ಗೆ ಬದಲಿ ವ್ಯವಸ್ಥೆಗೆ ಮುತುವರ್ಜಿ ವಹಿಸಿ ಎಂದು ಆಡಳಿತ ವೈದ್ಯಾಧಿಕಾರಿ ಡಾ| ಗೌತಮ್ ಅವರಿಗೆ ಹೇಳಿದರು.
ಬಳಿಕ ಮಾಧ್ಯಮದ ಜತೆ ಮಾತನಾಡಿದ ಎಸ್ಪಿ ಅವರು, ಆಸ್ಪತ್ರೆ, ಅಂಗನವಾಡಿ ಹಾಗೂ ಎಸ್‌ಸಿಎಸ್‌ಟಿ ಹಾಸ್ಟೆಲ್‌ಗಳಿಗೆ ನಿರಂತರ ಭೇಟಿ ನೀಡುತ್ತಿದ್ದು ಸರಕಾರದ ಸೌಲಭ್ಯ ಸರಿಯಾಗಿ ವಿತರಣೆಯಾಗುತ್ತಿದ್ದೆಯೇ ಎಂದು ಪರಿಶೀಲಿಸುತ್ತಿದ್ದೇವೆ. ಅಧಿಕಾರಿಗಳು ಪ್ರತಿ ತಿಂಗಳು ಎಲ್ಲ ತಾಲೂಕಿನಲ್ಲಿ ಅಹವಾಲು ಸ್ವೀಕಾರ ನಡೆಸುತ್ತಿದ್ದಾರೆ. ಸರಕಾರದ ಅಕ್ಕಿ, ಬೇಳೆ ಇತ್ಯಾದಿಗಳನ್ನು ಅಕ್ರಮ ದಾಸ್ತಾನಿಟ್ಟರೆ ಸಾರ್ವಜನಿಕರು ಮಾಹಿತಿ ನೀಡಬಹುದು ಎಂದರು. ಲೋಕಾಯುಕ್ತ ಇನ್ಸ್‌ಪೆಕ್ಟರ್ ವಿವೇಕಾನಂದ, ಸಿಬಂದಿ ಹರಿಶ್ಚಂದ್ರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.