“ಸೋಲು, ಕಷ್ಟ, ನಷ್ಟಗಳನ್ನು ಮನಗಂಡರೆ ಸಾಧನೆ’
Team Udayavani, May 7, 2019, 6:00 AM IST
ಡಾ| ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿದರು.
ನೆಹರೂನಗರ: ಪ್ರತಿಯೊಬ್ಬನ ಜೀವನ ಶೂನ್ಯದಿಂದ ಆರಂಭವಾದರೆ ಬದುಕಿನಲ್ಲಿ ಯಶಸ್ಸು ಖಂಡಿತ. ಸೋಲು, ಕಷ್ಟ, ನಷ್ಟಗಳನ್ನು ಮನಗಂಡರೆ ಸಾಧನೆ ಸುಲಭ ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ| ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.
ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರದ ಅಂತಿಮ ವರ್ಷದ ಸ್ನಾತ ಕೋತ್ತರ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳ ಮೂಲಕ ಸಾಧನೆಯನ್ನು ಮಾಡಿ ಹೆಸರು ಗಳಿಸಬಹುದು. ಸಮಾಜದಲ್ಲಿ ವ್ಯಕ್ತಿತ್ವಕ್ಕೆ ಮೊದಲ ಗೌರವ. ಹಾಗಾಗಿ ಆತನ ಗುಣ, ನಡತೆ ಅಥವಾ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಪ್ರತಿಯೊಬ್ಬನ ಕೆಲಸ. ಯಾವುದೇ ವ್ಯಕ್ತಿ ಸಮಾಜದಲ್ಲಿ ಮುಂದೊಂದು ದಿನ ದೊಡ್ಡ ವ್ಯಕ್ತಿಯಾದಾಗ ಜೀವನ ಕ್ರಮವನ್ನು ಅರ್ಥ ಮಾಡಿಕೊಂಡು ಜೀವಿಸಬೇಕು ಎಂದು ಹೇಳಿದರು.
ಮೌಲ್ಯಯುತ ಶಿಕ್ಷಣ
ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರದ ಸಂಯೋಜಕಿ
ಡಾ| ವಿಜಯಾ ಸರಸ್ವತಿ ಮಾತನಾಡಿ, ಕಾಲೇಜಿನಲ್ಲಿ ಪಠ್ಯ ವಿಷಯದ ಜೊತೆಗೆ ಜೀವನ ನಡೆಸುವ ಮೌಲ್ಯಯುತ ಶಿಕ್ಷಣವನ್ನು ಪಡೆಯುವ ಅವಕಾಶ ಲಭಿಸಿದೆ. ಇವುಗಳನ್ನು ಸರಿಯಾಗಿ ಜೀವನದಲ್ಲಿ ಉಪಯೋಗಿಸಿಕೊಂಡು ಸಾಧನೆ ಮಾಡುವಂತಾಗಲಿ ಎಂದರು.
ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ವಿಜಯ ಗಣಪತಿ ರಮೇಶ ಕಾರಂತ ಶುಭಹಾರೈಸಿದರು. ಸ್ನಾತಕೋತ್ತರ ವಾಣಿಜ್ಯ, ರಸಾಯನಶಾಸ್ತ್ರ, ಪತ್ರಿಕೋ ದ್ಯಮ ವಿಭಾಗದ ಉಪ ನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಮಧುರಾ ಸ್ವಾಗತಿಸಿ, ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಲಕ್ಷ್ಮೀ ವಂದಿಸಿ ದರು. ಉಪನ್ಯಾಸಕಿಯರಾದ ಅನನ್ಯಾ ಮತ್ತು ರಾಧಿಕಾ ಕಾನತ್ತಡ್ಕ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.