ಕಲ್ಲಾಪು ಲಾಠಿಚಾರ್ಜ್ ಪ್ರಕರಣ ಅಮಾನತು ಮಾಡಿಲ್ಲ: ಕಮಿಷನರ್
Team Udayavani, Mar 22, 2018, 10:10 AM IST
ಮಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಉಳ್ಳಾಲ ದರ್ಗಾ ಭೇಟಿಯ ವೇಳೆ ಪಕ್ಷದ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆಸಿದ ಪೊಲೀಸರ ವಿರುದ್ಧ ಕ್ರಮ ಜರಗಿಸಲಾಗಿದೆ ಎಂಬ ವದಂತಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಇದು ಗಮನಕ್ಕೆ ಬರುತ್ತಿದ್ದಂತೆ ತಾವು ಪೊಲೀಸರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ರಾಹುಲ್ ರೋಡ್ ಶೋ ವೇಳೆ ಪೊಲೀಸ್ ವಾಹನದ ಮೇಲೇರಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಜರಗಿಸುವಂತೆ ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕ ಒತ್ತಾಯ ವ್ಯಕ್ತವಾಗುತ್ತಿದೆ. ಈ ಬಗ್ಗೆ ಪೊಲೀಸರ ವಿಚಾರಣೆ ನಡೆಸುವುದಾಗಿ ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ನೆಹರೂ ಮೈದಾನದಲ್ಲಿ ಸಮಾವೇಶ ಮುಗಿಸಿದ ರಾಹುಲ್ ಗಾಂಧಿ ಉಳ್ಳಾಲ ದರ್ಗಾಕ್ಕೆ ವಿಶೇಷ ವಾಹನದಲ್ಲಿ ತೆರಳುತ್ತಿದ್ದಾಗ ತೊಕ್ಕೊಟ್ಟು ಸಮೀಪದ ಕಲ್ಲಾಪು ಮತ್ತು ಉಳ್ಳಾಲ ದರ್ಗಾ ಬಳಿ ಕಾರ್ಯಕರ್ತರು ಅಧಿಕ ಸಂಖ್ಯೆಯಲ್ಲಿ ಸೇರಿದ್ದರು. ಆಗ ಜನರ ದಟ್ಟಣೆ ಉಂಟಾಗಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದು, ಇದನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪಿಸಿದ್ದರು. ಘಟನೆ ಕುರಿತು ಸಚಿವ ಯು.ಟಿ. ಖಾದರ್ ಗಮನಕ್ಕೆ ತಂದಿದ್ದರು. ಸಚಿವರು ಈ ಬಗ್ಗೆ ಮುಖ್ಯಮಂತ್ರಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಿಎಂ ಕಮಿಷನರ್‌ಗೆ ಆದೇಶಿಸಿದ್ದರು. ಸ್ಥಳಕ್ಕೆ ತೆರಳಿದ ಕಮಿಷನರ್ ಅವರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ ಹಾಗೂ ಡಿಸಿಪಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದರು ಎಂಬುದಾಗಿ ವ್ಯಾಪಕ ಸುದ್ದಿಯಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಆದರೆ “ನಾವು ಯಾರನ್ನೂ ಅಮಾನತುಗೊಳಿಸಿಲ್ಲ ಹಾಗೂ ಶೋಕಾಸ್ ನೋಟಿಸ್ ಜಾರಿಗೊಳಿಸಿಲ್ಲ. ಆದರೆ ಲಘು ಲಾಠಿಪ್ರಹಾರಕ್ಕೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ರಾಹುಲ್ ಗಾಂಧಿ ಅವರ ವಾಹನ ಬರುವಾಗ ಜನ ದಟ್ಟಣೆಯನ್ನು ನಿಯಂತ್ರಿಸಲು ಪೊಲೀಸರು ಯಾವ ಕ್ರಮ ಕೈಗೊಂಡಿದ್ದರು ಎಂಬುದರ ಮಾಹಿತಿ ಪಡೆಯಲಾಗುತ್ತಿದೆ’ ಎಂದು ಕಮಿಷನರ್ ಸ್ಪಷ್ಟಪಡಿಸಿದ್ದಾರೆ.
ಪೊಲೀಸ್ ವಾಹನ ದುರ್ಬಳಕೆ: ತನಿಖೆ
ನಗರದ ಜ್ಯೋತಿ ಜಂಕ್ಷನ್‌ನಲ್ಲಿ ಮಂಗಳವಾರ ಸಂಜೆ ರೋಡ್ ಶೋ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಾಹನದ ಮೇಲೇರಿದ್ದು, ಕಾಂಗ್ರೆಸ್ ಧ್ವಜ ಹಿಡಿದು ಘೋಷಣೆ ಕೂಗಿ ಮೆರವಣಿಗೆಯಲ್ಲಿ ಸಾಗಿದ್ದರು. ವಾಹನದಲ್ಲಿದ್ದ ಪೊಲೀಸರು ನಿರಾಕರಿಸಿದರೂ ಅವರ ವಿನಂತಿಯನ್ನು ಪಾಲಿಸಿಲ್ಲ. ಈ ಬಗ್ಗೆ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸ್ ವಾಹನ ದುರ್ಬಳಕೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಜರಗಿಸುತ್ತಿಲ್ಲವೇಕೆ ಎಂದು ಅನೇಕ ಮಂದಿ ಪ್ರಶ್ನಿಸಿದ್ದಾರೆ. ಈ ವಿಚಾರವೂ ಗಮನಕ್ಕೆ ಬಂದಿದೆ; ಪೊಲೀಸ್ ವಾಹನದ ಸಿಬಂದಿಯನ್ನು ಪ್ರಶ್ನಿಸಿ ಅಗತ್ಯ ಬಿದ್ದರೆ ಕ್ರಮ ಜರಗಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಕಮಿಷನರ್ ಟಿ.ಆರ್. ಸುರೇಶ್ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.