Fraud Case ಪಾರ್ಟ್‌ಟೈಂ ಕೆಲಸದ ಆಮಿಷ: 9.29 ಲಕ್ಷ ರೂ. ವಂಚನೆ
Team Udayavani, Sep 16, 2023, 9:59 PM IST
ಮಂಗಳೂರು: ಟೆಲಿಗ್ರಾಂ ಮೂಲಕ ಬಂದ ಆನ್‌ಲೈನ್ ಪಾರ್ಟ್‌ಟೈಂ ಕೆಲಸದ ಸಂದೇಶವನ್ನು ನಂಬಿ 9,29,986 ರೂ. ಕಳೆದುಕೊಂಡಿರುವ ಕುರಿತಂತೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರಿಗೆ ಅಪರಿಚಿತ ವ್ಯಕ್ತಿಯೊಬ್ಬ ಟೆಲಿಗ್ರಾಂ ಮೂಲಕ ಪಾರ್ಟ್ ಟೈಂ ಆನ್‌ಲೈನ್ ಕೆಲಸದ ಬಗ್ಗೆ ಸಂದೇಶ ಕಳುಹಿಸಿದ್ದಾನೆ. ಇದನ್ನು ನಂಬಿದ ಅವರು ಬಳಿಕ ಟೆಲಿಗ್ರಾಂ ಗ್ರೂಪ್ ಒಂದಕ್ಕೆ ಸೇರಿ, ಅವರು ಕಳುಹಿಸಿದ ಲಿಂಕ್ ಮೂಲಕ ಟಾಸ್ಕ್ ಪೂರ್ಣಗೊಳಿಸಿದ್ದಾರೆ. ಅದಕ್ಕೆ 10 ಸಾವಿರ ರೂ. ಬೋನಸ್ ಲಭಿಸಿದ್ದು, ಅದರಲ್ಲಿ 1,044 ರೂ.ನ್ನು ತಮ್ಮ ಖಾತೆಗೆ ಹಿಂಪಡೆದಿದ್ದಾರೆ.
ಅನಂತರ ಹೆಚ್ಚಿನ ಕಮಿಷನ್ ಆಸೆಯಿಂದ ಮುಂದಿನ ಟಾಸ್ಕ್ ಪೂರ್ಣಗೊಳಿಸಲು 10 ಸಾವಿರ ರೂ. ಡೆಪಾಸಿಟ್ ಮಾಡಿದ್ದಾರೆ. ಬಳಿಕ ಬಳಿಕ ಹಂತ ಹಂತವಾಗಿ ಆಟವಾಡಿ 53,848 ರೂ. ತಮ್ಮ ಖಾತೆಗೆ ವಿದ್‌ಡ್ರಾ ಮಾಡಿದ್ದಾರೆ. ಇನ್ನೂ ಹೆಚ್ಚಿನ ಹಣ ಹೂಡಿಕೆ ಮಾಡಿದರೆ, ಹೆಚ್ಚು ಕಮಿಷನ್ ಗಳಿಸಬಹುದು ಎನ್ನುವ ಆಸೆಯಿಂದ ಟಾಸ್ಕ್ ಗಾಗಿ ತಮ್ಮ ವಿವಿಧ ಖಾತೆಯಿಂದ 9.29 ಲಕ್ಷ ರೂ. ಅಪರಿಚಿತ ವ್ಯಕ್ತಿಯ ಖಾತೆಗೆ ವರ್ಗಾವಣೆ ಮಾಡಿದ್ದಾರೆ. ಆದರೆ ಅನಂತರ ಯಾವುದೇ ಟಾಸ್ಕ್ ನೀಡದೆ ವಂಚಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.