ಮಂಗಳೂರು ವಿ.ವಿ.: ಸಾಂಸ್ಕೃತಿಕ ನೀತಿ ಬಹುತೇಕ ಸಿದ್ಧ

ನವೆಂಬರ್‌ ಅಂತ್ಯ ಅಥವಾ ಡಿಸೆಂಬರ್‌ ಮೊದಲ ವಾರ ಬಿಡುಗಡೆ

Team Udayavani, Oct 31, 2022, 11:02 AM IST

ಮಂಗಳೂರು ವಿ.ವಿ.: ಸಾಂಸ್ಕೃತಿಕ ನೀತಿ ಬಹುತೇಕ ಸಿದ್ಧ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಗೊಳಪಟ್ಟ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳ ಸಾಂಸ್ಕೃತಿಕ ಅಸ್ತಿತ್ವವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ವಿ.ವಿ. ವತಿಯಿಂದ ಸಾಂಸ್ಕೃತಿಕ ನೀತಿ ತಯಾರಿಸುವ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದ್ದು, ನವೆಂಬರ್‌ ಅಂತ್ಯ ಅಥವಾ ಡಿಸೆಂಬರ್‌ ಮೊದಲ ವಾರದಲ್ಲಿ ಬಿಡುಗಡೆಗೊಳ್ಳುವ ನಿರೀಕ್ಷೆಯಿದೆ.

ಮಂಗಳೂರು ವಿ.ವಿ.ಯಲ್ಲಿ ಈ ಮೊದಲು ಕ್ರೀಡಾ ನೀತಿಯೊಂದನ್ನು ರಾಜ್ಯದಲ್ಲೇ ಮೊದಲ ಬಾರಿಗೆ ರಚಿಸಲಾಗಿತ್ತು. ಇದೀಗ ಅದೇ ಮಾದರಿಯಲ್ಲಿ ಸಾಂಸ್ಕೃತಿಕ ನೀತಿ ಜಾರಿಗೆ ತರಲಾಗುತ್ತಿದೆ. ಉಭಯ ಜಿಲ್ಲೆಗಳು ಹಾಗೂ ಕೊಡಗಿಗೆ ಸಂಬಂಧಿಸಿ ಸಾಂಸ್ಕೃತಿಕ ಕಲೆಗಳಿಗೆ ಶಾಸ್ತ್ರೋಕ್ತ ಚೌಕಟ್ಟು ರಚಿಸಿ, ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಿ, ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವುದು ಇದರ ಹಿಂದಿನ ಉದ್ದೇಶ.

ಡಾ| ಎಂ. ಮೋಹನ ಆಳ್ವ ಅವರ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ನೀತಿ ತಯಾರಿಗೆ ಸಂಬಂಧಿಸಿದ ಸಮಿತಿ ರಚಿಸಲಾಗಿದ್ದು, ಡಾ| ಬಿ.ಎ. ವಿವೇಕ ರೈ, ಡಾ| ಚಿನ್ನಪ್ಪ ಗೌಡ, ಡಾ| ಧನಂಜಯ ಕುಂಬ್ಳೆ, ಜೀವನ್‌ ರಾಮ್‌ ಸುಳ್ಯ ಸೇರಿದಂತೆ ಹಲವರು ಸಮಿತಿಯಲ್ಲಿದ್ದಾರೆ. ಜತೆಗೆ ಪ್ರೊ| ಅರವಿಂದ ಹೆಬ್ಟಾರ್‌ ನೇತೃತ್ವದ ಉಪಸಮಿತಿ ರಚಿಸಲಾಗಿದ್ದು, ನಿವೃತ್ತ ಇಂಗ್ಲಿಷ್‌ ಪ್ರಾಧ್ಯಾಪಕ ರವಿಶಂಕರ್‌ ರಾವ್‌ ಒಳಗೊಂಡಂತೆ ಸಾಂಸ್ಕೃತಿಕ ರಂಗದ ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. ಮೂಲ ಸಮಿತಿ ನೀತಿಗೆ ಸಂಬಂಧಿಸಿದ ರೂಪರೇಖೆ ಸಿದ್ಧಪಡಿಸಿದ್ದು, ಉಪ ಸಮಿತಿ ಅದನ್ನು ಇನ್ನಷ್ಟು ಅಚ್ಚುಕಟ್ಟು ಮಾಡುವ ಕೆಲಸ ಮಾಡಿದೆ.

ಸಾಂಸ್ಕೃತಿಕ ಕಲಾಕೃತಿಗಳ ಪ್ರದರ್ಶನ
ಶಿವಮೊಗ್ಗ ಕುವೆಂಪು ವಿ.ವಿ., ಹಾವೇರಿಯ ಜಾನಪದ ವಿ.ವಿ., ವಿಜಯಪುರದ ಮಹಿಳಾ ವಿ.ವಿ.ಗಳ ಕ್ಯಾಂಪಸ್‌ ಸೇರಿದಂತೆ ವಿವಿಧ ವಿ.ವಿ.ಗಳಲ್ಲಿ ಅಲ್ಲಿನ ಸ್ಥಳೀಯ ಜಾನಪದ ಕಲೆ, ಸಂಸ್ಕೃತಿಗೆ ಸಂಬಂಧಿಸಿದ ಕಲಾಕೃತಿ ಪ್ರದರ್ಶಿಸುವ ಮೂಲಕ ಸಾಂಸ್ಕೃತಿಕ ಅಸ್ತಿತ್ವವನ್ನು ತೋರಿಸಲಾಗಿದೆ. ಅದೇ ಮಾದರಿಯನ್ನು ಇಲ್ಲಿಯೂ ಅನುಸರಿಸುವಂತೆ ಸಮಿತಿ ಶಿಫಾರಸು ಮಾಡಿದ್ದು, ಆಡಳಿತ ಕಚೇರಿ, ಗ್ರಂಥಾಲಯ, ವಿಜ್ಞಾನ ಬ್ಲಾಕ್‌ನ ಎದುರು, ವಿಶ್ವವಿದ್ಯಾನಿಲಯ ಪ್ರವೇಶ ಸ್ಥಳ ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಕರಾವಳಿಯ ಯಕ್ಷಗಾನ, ಕಂಬಳ, ಹುಲಿವೇಷ, ಭೂತಕೋಲ ಹಾಗೂ ಕೊಡಗು ಜಿಲ್ಲೆಗೆ ಸಂಬಂಧಿಸಿದ ಫೈಬರ್‌ ಗ್ಲಾಸ್‌ ಕಲಾಕೃತಿಗಳನ್ನು ಪ್ರದರ್ಶಿಸಲು ಉದ್ದೇಶಿಸಲಾಗಿದೆ.

ಸಾಂಸ್ಕೃತಿಕ ತರಬೇತಿ
ಮೂರು ಜಿಲ್ಲೆಗಳಲ್ಲಿ 215 ಕಾಲೇಜುಗಳು ವಿ.ವಿ.ಯ ಸಂಯೋಜನೆಗೆ ಒಳಪಟ್ಟಿದ್ದು, ಸುಮಾರು 1 ಲಕ್ಷ ವಿದ್ಯಾರ್ಥಿಗಳಿದ್ದಾರೆ. ಕೊಣಾಜೆ ಮಂಗಳಗಂಗೋತ್ರಿ ವಿ.ವಿ. ಕ್ಯಾಂಪಸ್‌ನಲ್ಲಿ 40 ಶೈಕ್ಷಣಿಕ ಕಾರ್ಯಕ್ರಮಗಳು, 28 ವಿಭಾಗಗಳು ಸೇರಿ 2,500 ವಿದ್ಯಾರ್ಥಿಗಳಿದ್ದಾರೆ. ಬಹುತೇಕ ವಿದ್ಯಾರ್ಥಿಗಳಿಗೆ ನೃತ್ಯ, ನಟನೆ, ಹಾಡುಗಾರಿಕೆ, ಯಕ್ಷಗಾನ ಮೊದಲಾದವುಗಳಲ್ಲಿ ಆಸಕ್ತಿಯಿದ್ದರೂ ಸೂಕ್ತ ತರಬೇತಿಯಿಲ್ಲದೆ ಅವಕಾಶ ವಂಚಿತರಾಗುತ್ತಿದ್ದಾರೆ. ಇಂತಹ ವಿದ್ಯಾರ್ಥಿಗಳನ್ನು ಗುರುತಿಸಿ ತರಬೇತಿ ನೀಡಿ ಅವರನ್ನು ಮುನ್ನೆಲೆಗೆ ತರುವುದು ವಿಶ್ವವಿದ್ಯಾಲಯದ ನೈತಿಕ ಹೊಣೆಗಾರಿಕೆ. ಅದಕ್ಕೆ ಪೂರಕವಾಗಿ ಸಾಂಸ್ಕೃತಿಕ ನೀತಿ ಕೆಲಸ ಮಾಡಲಿದೆ ಎನ್ನುತ್ತಾರೆ ಕುಲಪತಿ ಪ್ರೊ| ಯಡಪಡಿತ್ತಾಯರು.

ಫೆಲೋಶಿಪ್‌
ಭರತನಾಟ್ಯ, ಯಕ್ಷಗಾನ, ಕರಾವಳಿ-ಕೊಡಗಿನ ಜಾನಪದ ಕಲೆಗಳಲ್ಲಿ ಆಸಕ್ತಿ ಇದ್ದವರನ್ನು ಆಯಾ ಕಾಲೇಜಿನವರು ಗುರುತಿಸಿ ಕೊಟ್ಟರೆ, ತರಬೇತಿ ಕೊಟ್ಟು ಸಾಂಸ್ಕೃತಿಕ ರಂಗದಲ್ಲಿ ಮಿಂಚುವಂತೆ ಮಾಡುವುದು ಅಥವಾ ವಿ.ವಿ. ಮಟ್ಟದ ಸಾಂಸ್ಕೃತಿಕ ಹಬ್ಬಗಳಲ್ಲಿ ಪ್ರತಿಭಾ ಪ್ರದರ್ಶನ ನೀಡುವ ವಿದ್ಯಾರ್ಥಿಗಳನ್ನು ಗುರುತಿಸಿ, ಆಯ್ದ 10 ವಿದ್ಯಾರ್ಥಿಗಳಿಗೆ ಫೆಲೋಶಿಪ್‌ ನೀಡುವುದು ನೀತಿಯಲ್ಲಿದೆ. ಕೆಲವರಿಗೆ ಉಚಿತ ತರಬೇತಿ ನೀಡುವುದು ಯೋಜನೆಯಲ್ಲಿ ಸೇರಿದೆ.

ಸಾಂಸ್ಕೃತಿಕ ನೀತಿಯ ಕರಡು ಬಹುತೇಕ ಸಿದ್ಧವಾಗಿದೆ. ಇದನ್ನು ಅಂತಿಮಗೊಳಿಸುವ ಮೊದಲು ಏನಾದರೂ ಸೇರ್ಪಡೆ ಅಥವಾ ತೆಗೆಯಬೇಕಾದ ವಿಚಾರಗಳಿವೆಯೇ ಎಂದು ಸಾಂಸ್ಕೃತಿಕ ರಂಗದ ಪ್ರಮುಖರ ಜತೆಗೆ ಚರ್ಚೆ ನಡೆಸಲಾಗುವುದು. ಮಾತ್ರವಲ್ಲದೆ ಶೀಘ್ರ ಇದರ ಪ್ರತಿಯನ್ನು ವಿ.ವಿ.ಯ ವೆಬ್‌ಸೈಟ್‌ನಲ್ಲಿ ಹಾಕಿ ಸಾರ್ವಜನಿಕರಿಂದಲೂ ಸಲಹೆ ಸೂಚನೆ ಪಡೆಯಲಾಗುವುದು.
– ಪ್ರೊ| ಪಿ.ಎಸ್‌. ಯಡಪಡಿತ್ತಾಯ, ಕುಲಪತಿ, ಮಂಗಳೂರು ವಿಶ್ವವಿದ್ಯಾನಿಲಯ

– ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

5

Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್‌!

4

Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ

3

Mangaluru: ಕೊಕ್ಕಡದ ʼಸಾಂತಾ ಕ್ಲಾಸ್‌ʼ ವಿನ್ಸೆಂಟ್‌ ಕ್ರಿಸ್ಮಸ್‌ ತಿರುಗಾಟಕ್ಕೆ 25 ವರ್ಷ!

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.