ಮಲೇರಿಯಾ, ಡೆಂಗ್ಯೂ ಹೆಚ್ಚುವ ಸಮಯ… ಎಚ್ಚರಿಕೆ ಅಗತ್ಯ

ಮನೆ ಪರಿಸರ ಸ್ವಚ್ಛವಿಡುವ ಮೂಲಕ ಸೊಳ್ಳೆ ನಿಯಂತ್ರಣ

Team Udayavani, Jun 16, 2023, 3:39 PM IST

maಮಲೇರಿಯಾ, ಡೆಂಗ್ಯೂ ಹೆಚ್ಚುವ ಸಮಯ… ಎಚ್ಚರಿಕೆ ಅಗತ್ಯ

ಮಹಾನಗರ: ಮಳೆಗಾಲ ಆರಂಭ ಗೊಂಡಿದೆ. ಮಲೇರಿಯಾ, ಡೆಂಗ್ಯೂ ಹಾವಳಿಯೂ ಎದುರಾಗಿದೆ. ಈ ಹಿಂದಿನ ಅಂಕಿಅಂಶಗಳನ್ನು ಪರಿಗಣಿಸಿದರೆ ಜೂನ್‌ನಿಂದ ನವೆಂಬರ್‌ವರೆಗೆ ಮಲೇರಿಯಾ-ಡೆಂಗ್ಯೂ ಹೆಚ್ಚಾಗುವ ಸಮಯ. ಹೀಗಾಗಿ ಈ ಅವಧಿಯಲ್ಲಿ ಹೆಚ್ಚು ಎಚ್ಚರಿಕೆ ವಹಿಸಿದರೆ ರೋಗ ಬಾರದಂತೆ ತಡೆಯಬಹುದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷ ಜನವರಿಯಿಂದ ಜೂನ್‌ 8ರ ವರೆಗೆ ಒಟ್ಟು 48 ಡೆಂಗ್ಯೂ ಪ್ರಕರಣ ದಾಖಲಾಗಿದ್ದು, ಇದರಲ್ಲಿ 22 ಪ್ರಕರಣ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿಯೇ ದಾಖಲಾಗಿದೆ. ಮಲೇರಿಯಾ ಕೂಡ ಏರಿಕೆ ಪ್ರಮಾಣದಲ್ಲಿದೆ.

ಮಲೇರಿಯಾ, ಡೆಂಗ್ಯೂ ಸಹಿತ ಸಾಂಕ್ರಾಮಿಕ ರೋಗಗಳ ತಡೆಗೆ ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ವತಿಯಿಂದ ಕ್ರಮಗಳು, ಅಭಿಯಾನಗಳು ಜಾರಿಯಲ್ಲಿವೆ. ಇವುಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಯಶಸ್ವಿಯಾಗಬೇಕಾದರೆ ಸಾರ್ವಜನಿಕ ಜಾಗೃತಿ, ಸಹಭಾಗಿತ್ವ ಅತೀ ಅಗತ್ಯ.

ಪರಿಸರ ಸ್ವಚ್ಛವಾಗಿಡಿ
ಮನೆ ಪರಿಸರದಲ್ಲಿ ಸೊಳ್ಳೆಗಳ ಉತ್ಪತ್ತಿಗೆ ಅವಕಾಶವಾಗದಂತೆ ಎಚ್ಚರ ವಹಿಸುವುದೇ ಅತೀ ಅಗತ್ಯ. ಮುಚ್ಚಳವಿಲ್ಲದ ಓವರ್‌ಹೆಡ್‌ ಟ್ಯಾಂಕ್‌, ಸಿಮೆಂಟ್‌ ಟ್ಯಾಂಕ್‌ಗಳು, ತೆಂಗಿನ ಚಿಪ್ಪು, ಕುಡಿದು ಬಿಸಾಡಿದ ಎಳನೀರು ಚಿಪ್ಪು (ಬೊಂಡ), ಮನೆಯ ಸುತ್ತಮುತ್ತ ಎಸೆದ ಪ್ಲಾಸ್ಟಿಕ್‌, ಟಯರ್‌ ಸಹಿತ ನೀರು ನಿಲ್ಲುಲು ಅವಕಾಶವಿರುವ ಎಲ್ಲ ಪರಿಕರಗಳು ಸೊಳ್ಳೆಗಳ ಉತ್ಪತಿ ತಾಣಗಳು. ಇದರ ಬಗ್ಗೆ ಗಮನಹರಿಸಿ ಅಲ್ಲಿ ನೀರು ನಿಲ್ಲದಂತೆ ನೋಡಬೇಕಿದೆ.

ಅಂಗೈ ಅಗಲದ ಜಾಗದಲ್ಲಿ
ನೀರಿದ್ದರೂ ಸೊಳ್ಳೆ ಉತ್ಪತ್ತಿ!
ಅಂಗೈ ಅಗಲದ ಜಾಗದಲ್ಲಿ ಸ್ವಲ್ಪ ನೀರಿದ್ದರೂ ಸಾಕು; ಅಲ್ಲಿ ಸೊಳ್ಳೆಗಳು ಉತ್ಪತಿಯಾಗುತ್ತವೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವತ್ಛ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತದೆ. ಮನೆಯ ಆವರಣದಲ್ಲಿ ಗೇಟ್‌ಗೆ ಹಾಕಿರುವ ಬಿದಿರಿನ ತುಂಡುಗಳಲ್ಲಿ, ಚಪ್ಪಲಿಗಳಲ್ಲಿ ನಿಂತ ನೀರಿನಲ್ಲಿ ಕೂಡ ಲಾರ್ವಾಗಳು ಪತ್ತೆಯಾಗಿರುವ ಪ್ರಕರಣಗಳು ಇವೆ.

ಮನೆಯ ಸುತ್ತಮತ್ತ, ತಾರಸಿ, ಕಿಟಕಿಯ ಶೇಡ್‌, ಗೋಡೆಯ ಮಳೆ ಹನಿಯಲ್ಲೂ ಸೊಳ್ಳೆ ಉತ್ಪತ್ತಿಯಾಗುವ ಸಾಧ್ಯತೆ ಇದೆ. ಅಂದಹಾಗೆ, ಮಂಗಳೂರು ಹೊರವಲಯದ ಅಡಿಕೆ ತೋಟದಲ್ಲಿ ಬಿದ್ದಿರುವ ಹಾಳೆಗಳಲ್ಲಿ ನೀರು ಇದ್ದರೆ ಅವುಗಳು ಸೊಳ್ಳೆಗಳ ಉತ್ಪತಿ ತಾಣವಾಗುತ್ತವೆ.

ಸೊಳ್ಳೆ ನಿಯಂತ್ರಣಕ್ಕೆ ಆದ್ಯತೆ
ಡೆಂಗ್ಯೂ ಹರಡುವ ಇಡಿಸ್‌ ಈಜಿಪ್ಟೆ$ç ಸೊಳ್ಳೆ ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ. ಮಲೇರಿಯಾ ಹರಡುವ ಆನಾಫಿಲಿಸ್‌ ರಾತ್ರಿ ಸಮಯದಲ್ಲಿ ಕಚ್ಚುತ್ತವೆ. ಸೊಳ್ಳೆ ಪ್ರವೇಶಿಸದಂತೆ ಸಂಜೆ ಹೊತ್ತು ಕಿಟಕಿ ಬಾಗಿಲುಗಳನ್ನು ಭದ್ರವಾಗಿ ಮುಚ್ಚುವುದು ಅಥವಾ ಜಾಲರಿಗಳನ್ನು ಅಳವಡಿಸುವುದು ಮುಂತಾದ ಕ್ರಮಗಳನ್ನು ಅನುಸರಿಸುವ ಮೂಲಕ ಸೊಳ್ಳೆಗಳಿಂದ ರಕ್ಷಣೆ ಪಡೆಯಬಹುದು. ಅಂದಹಾಗೆ, ಬಾವಿ/ಕೆರೆಗಳಲ್ಲಿ ಗಪ್ಪಿ ಮೀನುಗಳನ್ನು ಸಾಕುವ ಮೂಲಕ ಸೊಳ್ಳೆಗಳ ಉತ್ಪತಿಯನ್ನು ತಡೆಗಟ್ಟಬಹುದು.

ಸೊಳ್ಳೆ ನಿಯಂತ್ರಣಕ್ಕೆ
ಹೀಗೆ ಮಾಡಿ…
ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವತ್ಛವಾಗಿಡುವ ಮೂಲಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಡೆಂಗ್ಯೂ ಜ್ವರಕ್ಕೆ ಒಳಗಾದವರು ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ಹಗಲಿನಲ್ಲಿ ವಿಶ್ರಾಂತಿ ಪಡೆಯುವ ಮಕ್ಕಳು, ಗರ್ಭಿಣಿ, ಬಾಣಂತಿ, ವಯಸ್ಸಾದವರು ಸೊಳ್ಳೆ ಪರದೆ ಬಳಸಬೇಕು.

ಮನೆಯ ಪರಿಸರದಲ್ಲಿ ಸ್ವತ್ಛತೆ ಘನತ್ಯಾಜ್ಯ ಸಮರ್ಪಕ ವಿಲೇವಾರಿ, ನೀರು ಸಂಗ್ರಹಿಸುವಾಗ ಭದ್ರವಾದ ಮುಚ್ಚಳ ಅಳವಡಿಕೆ, ನೀರು ನಿಂತ ಸ್ಥಳಗಳಿಗೆ ವಾರದಲ್ಲಿ ಒಂದು ಸಲ ಟೆಮೊಫಾಸ್‌ ರಾಸಾಯನಿಕ ಸಿಂಪಡಣೆ ಮಾಡುವುದು ಇತ್ಯಾದಿ ಕ್ರಮಗಳನ್ನು ಕೈಗೊಂಡಾಗ ಸೊಳ್ಳೆ ಬೆಳವಣಿಗೆ ನಿಯಂತ್ರಿಸಬಹುದು.

ನೀರಿನ ತೊಟ್ಟಿಗಳು, ಡ್ರಂ, ಬ್ಯಾರಲ್‌ ಹಾಗೂ ಟ್ಯಾಂಕ್‌ಗಳನ್ನು ಭದ್ರವಾಗಿ ಮುಚ್ಚಿಡಿ. ಮನೆಯ ಮೇಲೆ ಮತ್ತು ಸುತ್ತಲಿನ ಮಳೆಯ ನೀರು ಸಂಗ್ರಹವಾಗುವಂತಹ ಪ್ಲಾಸ್ಟಿಕ್‌ ವಸ್ತುಗಳು, ಟೈರ್‌ಗಳು, ಒಡೆದ ತೆಂಗಿನ ಚಿಪ್ಪು ಇತ್ಯಾದಿಗಳನ್ನು ತತ್‌ಕ್ಷಣವೇ ವಿಲೇವಾರಿ ಮಾಡಬೇಕು.

ಏರ್‌ಕೂಲರ್‌, ಹೂವಿನಕುಂಡ, ಫೈರ್‌ ಬಕೆಟ್‌, ರೆಫ್ರಿಜರೇಟರ್‌ನ ಹಿಂಭಾಗ.. ಇತ್ಯಾದಿಗಳ ನೀರನ್ನು ಪ್ರತೀ ವಾರ ಖಾಲಿ ಮಾಡಿ ಒಣಗಿಸಿ ಮತ್ತೆ ಭರ್ತಿ ಮಾಡಬೇಕು. ವಿಶೇಷವಾಗಿ ಸೊಳ್ಳೆ ಕಚ್ಚದಂತೆ ತುಂಬು ತೋಳಿನ ಬಟ್ಟೆ, ಮೈ ಮೇಲೆ ಬೇವಿನ ಎಣ್ಣೆ ಅಥವಾ ಔಷಧ ಹಚ್ಚಿಕೊಳ್ಳಬಹುದು.

ಸಾರ್ವಜನಿಕ ಸಹಭಾಗಿತ್ವದಿಂದ ಸೊಳ್ಳೆ ನಿಯಂತ್ರಣ
ಮಂಗಳೂರು ಪಾಲಿಕೆಯ 60 ಮಂದಿ ಎಂಪಿಡಬ್ಲ್ಯು ಕಾರ್ಯಕರ್ತರು, 83 ಮಂದಿ ಆಶಾ ಕಾರ್ಯಕರ್ತೆಯರು ಮತ್ತು 20 ಮಂದಿ ಮಲೇರಿಯ ನಿಯಂತ್ರಣ ಕಾರ್ಯಕರ್ತರು ಮನೆ ಮನೆ ಭೇಟಿ ನೀಡಿ ಈಡೀಸ್‌ ಸೊಳ್ಳೆ ಉತ್ಪಾದನ ತಾಣಗಳನ್ನು ಗುರುತಿಸಿ, ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮನೆ ಮಂದಿಗೆ ಮಾಹಿತಿ ನೀಡುತ್ತಿದ್ದಾರೆ. ಪ್ರತೀ ದಿನ ಸುಮಾರು 400 ಮಂದಿಯ ಡೆಂಗ್ಯೂ ರೋಗದ ತಪಾಸಣೆಗೆ ಒಳಪಡಿಸಲಾಗುತ್ತಿದೆ. 2022ರಲ್ಲಿ ಇದೇ ವೇಳೆ 73 ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಂಡಿದ್ದು, ಆದರೆ ಈ ವರ್ಷ ಮಳೆ ವಿಳಂಬದ ಕಾರಣಕ್ಕೆ ಸದ್ಯ 48 ಪ್ರಕರಣ ಪತ್ತೆಯಾಗಿದೆ. ಪರಿಸರ ಸ್ವತ್ಛತೆಯನ್ನು ಕಾಯ್ದುಕೊಳ್ಳುವ ಮೂಲಕ ಸೊಳ್ಳೆ ಉತ್ಪತ್ತಿಯನ್ನು ತಡೆಯಬಹುದು.
– ಡಾ| ನವೀನ್‌ಚಂದ್ರ ಕುಲಾಲ್‌, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ

ಜ್ವರವಿದ್ದರೆ ರಕ್ತ ಪರೀಕ್ಷೆ ಮಾಡಿಸಿ
ಜ್ವರ ಯಾವುದೇ ಇರಲಿ. ರಕ್ತ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಖಾತ್ರಿ ಪಡಿಸಿಕೊಳ್ಳುವುದು ಒಳ್ಳೆಯದು. ಮಲೇರಿಯಾ/ ಡೆಂಗ್ಯೂ ಜ್ವರ ಕಂಡುಬಂದಲ್ಲಿ ವೈದ್ಯರಿಂದ ಸೂಕ್ತ ಚಿಕಿತ್ಸೆಯನ್ನು ಪರಿಣಾಮಕಾರಿಯಾಗಿ ಪಡೆದುಕೊಳ್ಳಬೇಕು. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರಕಾರಿ ಆಸ್ಪತ್ರೆಗಳು, ಮಂಗಳೂರು ಮಹಾನಗರ ಪಾಲಿಕೆ ಮಲೇರಿಯಾ ಪರೀಕ್ಷೆ ಕೇಂದ್ರಗಳಲ್ಲಿ ರಕ್ತ ತಪಾಸಣೆಯನ್ನು ಮಾಡಿಕೊಳ್ಳಬಹುದು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.