ವಲಸೆ ಕಾರ್ಮಿಕರಿಗೆ ಮಲೇರಿಯಾ ತಪಾಸಣೆ ಕಡ್ಡಾಯ

ಉದ್ದಿಮೆದಾರರಿಗೆ ಆರೋಗ್ಯ ಸರ್ವೇಕ್ಷಣಾಧಿಕಾರಿ ಸೂಚನೆ

Team Udayavani, Nov 22, 2020, 12:23 PM IST

ವಲಸೆ ಕಾರ್ಮಿಕರಿಗೆ ಮಲೇರಿಯಾ ತಪಾಸಣೆ ಕಡ್ಡಾಯ

ಮಹಾನಗರ, ನ. 21: ನಗರದಲ್ಲಿ ವಲಸೆ ಕಾರ್ಮಿಕರಿಗೆ ಮಲೇರಿಯಾ ತಪಾಸಣೆಯನ್ನು ಕಡ್ಡಾಯ ಗೊಳಿಸ ಬೇಕೆಂದು ಜಿಲ್ಲಾ ಆರೋಗ್ಯ ಇಲಾಖೆಯ ಸರ್ವೇಕ್ಷಣಾಧಿಕಾರಿ ಡಾ| ನವೀನ್‌ಚಂದ್ರ ಕುಲಾಲ್‌ ಅವರು ನಗರದ ವಿವಿಧ ಉದ್ದಿಮೆದಾರರು, ವ್ಯಾಪಾರಸ್ಥರಿಗೆ ಸೂಚನೆ ನೀಡಿದ್ದಾರೆ.

ಪಾಲಿಕೆ ಸಭಾಂಗಣದಲ್ಲಿ ಶನಿವಾರ ಮೇಯರ್‌ ದಿವಾಕರ್‌ ಪಾಂಡೇಶ್ವರ ಅವರ ಅಧ್ಯಕ್ಷತೆಯಲ್ಲಿ ಜರಗಿದ ಮಹಾನಗರ ಪಾಲಿಕೆ ವ್ಯಾಪ್ತಿಯ ಉದ್ದಿಮೆದಾರರು, ಸಂಘ-ಸಂಸ್ಥೆಗಳ ಸಭೆಯಲ್ಲಿ ಅವರು ಮಾತನಾಡಿದರು.

6 ವರ್ಷಗಳಿಂದೀಚೆಗೆ ನಗರದಲ್ಲಿ ಮಲೇರಿಯಾ ಪ್ರಕರಣಗಳು ಕಡಿಮೆ ಯಾಗುತ್ತಿವೆ. ಆದರೆ ರಾಜ್ಯದಲ್ಲಿ ಪತ್ತೆಯಾಗುತ್ತಿರುವ ಒಟ್ಟು ಮಲೇರಿಯಾ ಪ್ರಕರಣಗಳ ಪೈಕಿ ಮಂಗಳೂರು ನಗರದ ಕೊಡುಗೆ ಶೇ. 82ರಷ್ಟಿದೆ. ತೇವಾಂಶದಿಂದ ಕೂಡಿದ ಇಲ್ಲಿನ ವಾತಾವರಣ, ಹೆಚ್ಚು ನಿರ್ಮಾಣ ಕಾಮಗಾರಿಗಳು ಮಲೇರಿಯಾ ಹೆಚ್ಚಳಕ್ಕೆ ಕಾರಣವಾಗಿದೆ. ರಕ್ತ ತಪಾಸಣೆ ಮಾಡದಿರುವುದು, ಸಂಪೂರ್ಣ ಚಿಕಿತ್ಸೆ ಪಡೆಯದಿರುವುದು, ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳದಿರುವುದು ಮಲೇ ರಿಯಾ ನಿರ್ಮೂಲನೆಗೆ ತೊಡಕಾಗಿದೆ. ಮುಖ್ಯವಾಗಿ ವಲಸೆ ಕಾರ್ಮಿಕರು ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದು ಕಂಡುಬಂದಿದೆ. ಹಾಗಾಗಿ ಇಂತಹ ಕಾರ್ಮಿಕರ ಬಗ್ಗೆ ಉದ್ದಿಮೆದಾರರು ಸಹಿತ ಎಲ್ಲ ಮಾಲಕರು ವಿಶೇಷ ಗಮನ ಹರಿಸಬೇಕು. ಮಲೇರಿಯಾ ಪರೀಕ್ಷೆ ಯನ್ನು ಕಡ್ಡಾಯವಾಗಿ ಮಾಡಿಸಬೇಕು. ಇಲಾಖೆಯಿಂದ ಉಚಿತ ತಪಾಸಣೆ, ಚಿಕಿತ್ಸೆ, ಸೊಳ್ಳೆ ಪರದೆ ಲಭ್ಯವಿದೆ ಎಂದರು.

ಡೆಂಗ್ಯೂ ಇಳಿಕೆ; ಇರಲಿ ಎಚ್ಚರಿಕೆ :

ನಗರದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಡೆಂಗ್ಯೂ ಪ್ರಕರಣಗಳಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಸಾಮಾನ್ಯವಾಗಿ ಎರಡು ವರ್ಷಗಳಿಗೊಮ್ಮೆ ಡೆಂಗ್ಯೂ ಹೆಚ್ಚಳವಾಗುವ ಸಾಧ್ಯತೆಗಳಿ ರುತ್ತವೆ. ಹಾಗಾಗಿ ಮುಂದಿನ ವರ್ಷ ಕೂಡ ಡೆಂಗ್ಯೂ ನಿಯಂತ್ರಣಕ್ಕೆ ಬರಬೇಕಾದರೆ ಹೆಚ್ಚಿನ ಎಚ್ಚರಿಕೆ, ಮುಂಜಾಗರೂಕತೆ ಅಗತ್ಯವಾಗಿದೆ. ಅಲ್ಲದೆ ಚಿಕೂನ್‌ ಗುನ್ಯಾ ಬಗ್ಗೆಯೂ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಡಾ| ನವೀನ್‌ಚಂದ್ರ ಹೇಳಿದರು.

ನೈಸರ್ಗಿಕ ತ್ಯಾಜ್ಯ ಸಂಸ್ಕರಣೆ :

ರಾಮಕೃಷ್ಣ ಮಠದ   ಶ್ರೀ ಏಕಗಮ್ಯಾನಂದ ಸ್ವಾಮೀಜಿ ಮಾತನಾಡಿ, ಹಸಿ ತ್ಯಾಜ್ಯವನ್ನು ನೈಸರ್ಗಿಕವಾಗಿ ಸಂಸ್ಕರಣೆ ಮಾಡುವ ಪ್ರಕ್ರಿಯೆ ಮಠದ ವತಿಯಿಂದ 17 ಅಪಾರ್ಟ್‌ಮೆಂಟ್‌ಗಳಲ್ಲಿ ನಡೆಯುತ್ತಿದೆ. ಪಾಲಿಕೆಯವರು ಹಸಿ ತ್ಯಾಜ್ಯವನ್ನು ಅಪಾರ್ಟ್‌ಮೆಂಟ್‌ ಗಳಿಂದ ಸಂಗ್ರಹಿಸಿ ಅದನ್ನು ವಿಲೇವಾರಿ ಮಾಡುವುದು ಸಮಸ್ಯೆ ಯಾಗುತ್ತಿರು ವುದರಿಂದ ನೈಸರ್ಗಿಕವಾಗಿ ಅಪಾರ್ಟ್‌ ಮೆಂಟ್‌ ಪರಿಸರದಲ್ಲೇ ಸಂಸ್ಕರಿಸಿ ಗೊಬ್ಬರ ಉತ್ಪಾದನೆಗೆ ಪ್ರೋತ್ಸಾಹಿಸಬೇಕು ಎಂದು ಆಯುಕ್ತರಿಗೆ ಮನವಿ ಮಾಡಿದರು.

ಸಭಾಂಗಣಗಳಲ್ಲಿ  ತ್ಯಾಜ್ಯ ವಿಲೇವಾರಿಗೆ ಕ್ರಮ :

ಕೆಲವು ಸಭಾಂಗಣಗಳಲ್ಲಿ ತ್ಯಾಜ್ಯ  ಸಂಗ್ರಹಿಸಲು ಅಥವಾ ಸಂಸ್ಕರಿಸಿ ವಿಲೇವಾರಿ ಮಾಡಲು ಯಾವುದೇ ವ್ಯವಸ್ಥೆಗಳಿಲ್ಲ. ಇದರಿಂದಾಗಿ ಕ್ಯಾಟರಿಂಗ್‌ನವರಿಗೂ ಭಾರೀ ಸಮಸ್ಯೆಯಾಗುತ್ತಿದೆ. ಹಾಗಾಗಿ ಎಲ್ಲ ಸಭಾಂಗಣಗಳು ಕೂಡ ತ್ಯಾಜ್ಯ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕು ಎಂದು ಕ್ಯಾಟರಿಂಗ್‌ ಮಾಲಕರು ಮನವಿ ಮಾಡಿದರು.

ಪ್ಲಾಸ್ಟಿಕ್‌ ಬಳಸಿದರೆ ಲೈಸನ್ಸ್‌ ರದ್ದು ನಿಷೇಧಿತ ಪ್ಲಾಸ್ಟಿಕ್‌ಗಳ ಸಂಗ್ರಹ, ಬಳಕೆ ಮಾಡುವುದು ಪತ್ತೆಯಾದರೆ ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಉದ್ದಿಮೆಗಳ ಪರವಾನಿಗೆ ರದ್ದು ಮಾಡಲಾಗುವುದು ಎಂದು ಆಯುಕ್ತ ಅಕ್ಷಯ್‌ ಶ್ರೀಧರ್‌ ತಿಳಿಸಿದರು.  ಉಪಮೇಯರ್‌ ವೇದಾವತಿ ಮತ್ತಿತರರು ಉಪಸ್ಥಿತರಿದ್ದರು.

ಝೀರೋ ವೇಸ್ಟ್‌  :

ಉಪ್ಪಿನಂಗಡಿ ಗ್ರಾ.ಪಂ. ವ್ಯಾಪ್ತಿಯ 800ರಿಂದ 900 ಕೆಜಿ ಹಸಿ ಹಾಗೂ 400ರಿಂದ 500 ಕೆಜಿ ಒಣಕಸವನ್ನು ಕಡಿಮೆ ಖರ್ಚಿನಲ್ಲಿ ನೈಸರ್ಗಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ಇದರಲ್ಲಿ ಉತ್ಪಾದನೆ ಯಾಗುವ ಗೊಬ್ಬರಕ್ಕೂ ಉತ್ತಮ ಬೇಡಿಕೆ ಇದೆ. ಬಲ್ಕ್ ವೇಸ್ಟ್‌ (ಬೃಹತ್‌ ತ್ಯಾಜ್ಯ) ವಿಲೇವಾರಿ ಕೂಡ ನೈಸರ್ಗಿಕವಾಗಿ ಮಾಡಲು ಸಾಧ್ಯ ಎಂಬುದನ್ನು ಇದು ತೋರಿಸಿಕೊಟ್ಟಿದೆ. ಇದೇ ರೀತಿ ಮಠದ ನೇತೃತ್ವದಲ್ಲಿ ಮಂಗಳೂರು ವಿ.ವಿ. ಕ್ಯಾಂಪಸ್‌, ಕಟೀಲು ದೇಗುಲಗಳಲ್ಲಿ “ಝೀರೋ ವೇಸ್ಟ್‌’ (ಶೂನ್ಯ ತ್ಯಾಜ್ಯ) ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಶ್ರೀ ಏಕಗಮ್ಯಾನಂದ ಸ್ವಾಮೀಜಿ ತಿಳಿಸಿದರು.

ಟಾಪ್ ನ್ಯೂಸ್

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.