ಪುತ್ತೂರಿನ ವ್ಯಕ್ತಿ ಆಸ್ಪತ್ರೆಯಿಂದ ಬಿಡುಗಡೆ

Team Udayavani, Apr 15, 2020, 11:44 AM IST

ಪುತ್ತೂರಿನ ವ್ಯಕ್ತಿ ಆಸ್ಪತ್ರೆಯಿಂದ ಬಿಡುಗಡೆ

ಮಂಗಳೂರು: ಕೋವಿಡ್-19 ಸೋಂಕು ದೃಢಪಟ್ಟು ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರಿನ 49 ವರ್ಷದ ವ್ಯಕ್ತಿ ಗುಣಮುಖರಾಗಿ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 49 ವರ್ಷದ ಈ ವ್ಯಕ್ತಿ ದುಬಾೖಯಿಂದ ಮಾ. 21ರಂದು ಪುತ್ತೂರಿಗೆ ಆಗಮಿಸಿದ್ದರು. ಎ. 1ರಂದು ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎ. 12 ಮತ್ತು 13ರಂದು ಗಂಟಲು ದ್ರವ ಮಾದರಿಯನ್ನು ಮರು ಪರೀಕ್ಷಿಸಲಾಗಿದ್ದು, ನೆಗೆಟಿವ್‌ ಬಂದಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.

ಮಂಗಳವಾರ 12 ಮಂದಿಯ ಗಂಟಲು ದ್ರವ ಮಾದರಿಯ ವರದಿ ಬಂದಿದ್ದು, ಯಾವುದೇ ಪಾಸಿಟಿವ್‌ ಪ್ರಕರಣ ಕಂಡುಬಂದಿಲ್ಲ. ಕೊರೊನಾ ಸೋಂಕಿತರ ಸಂಪರ್ಕದಲ್ಲಿರುವವರ ಒಟ್ಟು 156 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಒಟ್ಟು 168 ವರದಿ ಬಾಕಿ ಇವೆ. ಒಟ್ಟು 1,485 ಮಂದಿ ಗೃಹ ನಿಗಾದಲ್ಲಿದ್ದು, 24 ಮಂದಿ ಇಎಸ್‌ಐ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ. ಫಿವರ್‌ ಕ್ಲಿನಿಕ್‌ನಲ್ಲಿ ಒಟ್ಟು 201 ಮಂದಿಯ ತಪಾಸಣೆ ನಡೆಸಲಾಗಿದೆ. ಲಾಕ್‌ಡೌನ್‌ ಉಲ್ಲಂಘಿಸಿದ ಆರೋಪದ ಮೇಲೆ ಒಟ್ಟು 54 ವಾಹನಗಳನ್ನು ವಶಪಡಿಸಿಕೊಳ್ಳಳಾಗಿದೆ.

10 ದಿನಗಳಿಂದ ಹೊಸ ಪ್ರಕರಣಗಳಿಲ್ಲ
ದ.ಕ. ಜಿಲ್ಲೆಯಲ್ಲಿ ಕೊರೊನಾ ದೃಢಪಟ್ಟು ಚಿಕಿತ್ಸೆಗೆ ದಾಖಲಾಗಿದ್ದ ಒಟ್ಟು 12 ಮಂದಿ ಸೋಂಕಿತರ ಪೈಕಿ 9 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಜಾರಿಗೆ ತಂದ ಕಟ್ಟುನಿಟ್ಟಿನ ಕ್ರಮದಿಂದಾಗಿ ಹತ್ತು ದಿನಗಳಿಂದ ಯಾವುದೇ ಹೊಸ ಕೋವಿಡ್-19 ಪಾಸಿಟಿವ್‌ ಪ್ರಕರಣ ದಾಖಲಾಗಲಿಲ್ಲ. 12 ಮಂದಿಯ ಪೈಕಿ ಮೂವರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರಿಗೆ ಜಿಲ್ಲಾಡಳಿತ ಹಾಗೂ ಸಂಘಟನೆಗಳು ಊಟದ ವ್ಯವಸ್ಥೆ ಮಾಡಿದ್ದು, ಮಂಗಳವಾರ ಹಂಪನಕಟ್ಟೆ ಬಸ್‌ ನಿಲ್ದಾಣ ಬಳಿ ದಾನಿಗಳು ತಂದ ಊಟ ಪಡೆಯಲು ಧಾವಿಸುತ್ತಿರುವ ಕಾರ್ಮಿಕರು.

ಟಾಪ್ ನ್ಯೂಸ್

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.