ಕಿಂಡಿ ಅಣೆಕಟ್ಟಿನ ನಿರ್ವಹಣೆ: ಜಲ ಸಂರಕ್ಷಣೆಗೆ ಪೂರಕ

Team Udayavani, Jan 28, 2022, 3:20 AM IST

ಕಿಂಡಿ ಅಣೆಕಟ್ಟಿನ ನಿರ್ವಹಣೆ: ಜಲ ಸಂರಕ್ಷಣೆಗೆ ಪೂರಕ

ಹಳೆಯಂಗಡಿ: ಕಿಂಡಿ ಅಣೆಕಟ್ಟುಗಳ ಸಮರ್ಪಕ ನಿರ್ವಹಣೆ ಯಿಂದಾಗಿ ಪಡು ಪಣಂಬೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಕೂರು ಗ್ರಾಮದಲ್ಲಿ ಜಲ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ.

ಗ್ರಾಮದ ಕಿಂಡಿ ಅಣೆಕಟ್ಟುಗಳ ರಾಜ ಕಾಲುವೆಯಲ್ಲಿ ಹರಿಯುವ ನೀರು ಅಣೆಕಟ್ಟಿನ ಮೇಲ್ಭಾಗದಲ್ಲಿ ಉಕ್ಕಿ ಹರಿಯುತ್ತಿದ್ದು,

ಸುತ್ತಮುತ್ತ ಗದ್ದೆಗಳ ಸಹಿತ ಕುಡಿಯುವ ನೀರಿನ ಬಾವಿಗಳಿಗೆ ಶೇಖರಣೆಗೊಂಡಿವೆ. ಗ್ರಾಮದ ಚಿಕ್ಕಟ್ರಾಯನ ಬಳಿಯ, ಕಲ್ಲಾಪು, ಮಾಗಂದಡಿ, ಬೆಳ್ಳಾಯರು, ತೋಕೂರು, ಕಂಬಳಬೆಟ್ಟು ಕಿಂಡಿ ಅಣೆಕಟ್ಟುಗಳ ಉತ್ತಮ ನಿರ್ವಹಣೆಗೆ ಸೇವಾ ಸಂಸ್ಥೆಗಳು ಕೂಡ ಶ್ರಮ ವಹಿಸಿವೆ.

ಪಡುಪಣಂಬೂರು ಗ್ರಾ.ಪಂ.ನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ತೋಕೂರು ಗ್ರಾಮ ಮಾದರಿಯಾಗಿದ್ದು ಮುಂದಿನ ಬೇಸಗೆಯಲ್ಲಿ ನೀರಿನ ಬವಣೆಯನ್ನು ನಿಭಾಯಿಸಲು ಕಂಡುಕೊಂಡಿರುವ ಕಿಂಡಿಅಣೆಕಟ್ಟಿನ ನಿರ್ವಹಣೆಯು ಪಂಚಾಯತ್‌ ಹಾಗೂ ಸಂಘ-ಸಂಸ್ಥೆಗಳು ಸ್ವಯಂ ಪ್ರೇರಣೆಯಿಂದ ಮುಂದಾಗಿವೆ.

ಉದಯವಾಣಿ ಅಭಿಯಾನ ಪ್ರೇರಣೆ:

ಎರಡು ವರ್ಷದ ಹಿಂದೆ “ಉದಯ ವಾಣಿ’ಯಲ್ಲಿ ಜಲ ಸಂರಕ್ಷಣೆಯ ಲೇಖನಗಳೇ ನಮಗೆ ಪ್ರೇರಣೆಯಾಗಿವೆ. ಇದರಿಂದ ಪ್ರೇರಿತಗೊಂಡು ಗ್ರಾಮದ ಕಿಂಡಿ ಅಣೆಕಟ್ಟುಗಳನ್ನು ಸುರಕ್ಷಿತ ವಾಗಿಡಲು, ಶ್ರಮದಾನ ನಡೆಸಲು ಸದಸ್ಯರು ಸಹಕಾರ ನೀಡಿದ್ದಾರೆ. ಇದು ಮುಂದೆಯೂ ಮುಂದುವರಿಯಲಿದೆ, ಕ್ಲಬ್‌ನ ಸೇವಾ ಯೋಜನೆಯಲ್ಲಿ ಇದನ್ನು ಪ್ರಾಮುಖ್ಯವಾಗಿಟ್ಟುಕೊಂಡಿದ್ದೇವೆ ಎನ್ನುವುದು ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ನ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಸಂತೋಷ್‌ ದೇವಾಡಿಗ ಅವರ ಅಭಿಪ್ರಾಯ.

ಜಲ ಸುರಕ್ಷೆ‌ಯ ಭದ್ರತೆ :

ಕಿಂಡಿ ಅಣೆಕಟ್ಟಿನಲ್ಲಿ ಜಲಮೌಲ್ಯ ಹೆಚ್ಚಾಗಿದ್ದರಿಂದ ತೋಕೂರು ಗ್ರಾಮದಲ್ಲಿನ ಸುಮಾರು 65 ಕೃಷಿ ಕುಟುಂಬಗಳು ತಮ್ಮ 300ಕ್ಕೂ ಹೆಚ್ಚು ಕೃಷಿ ಭೂಮಿಯಲ್ಲಿ ಎರಡು ಬಾರಿ ಭತ್ತವನ್ನು ಬೆಳೆಯುತ್ತಿದ್ದಾರೆ. ತೋಟಗಾರಿಕೆಗೆ ವಿಶೇಷ ಆಸಕ್ತಿ ವಹಿಸಿ ಅಡಿಕೆ, ತೆಂಗು ಬೆಳೆಯನ್ನು 12 ಕುಟುಂಬಗಳು ಹೊಸದಾಗಿ ನರೇಗಾ ಯೋಜನೆಯ ಮೂಲಕ ಪ್ರಸ್ತುತ ವರ್ಷದಲ್ಲಿ ಖಾಲೀ ಜಮೀನಿನಲ್ಲಿ ತೊಡಗಿಸಿಕೊಂಡಿದ್ದಾರೆ. ಎರಡು ಕುಟುಂಬಗಳು ಮೀನು ಕೃಷಿಯನ್ನು ಆರಂಭಿಸಿದ್ದಾರೆ. ಅಣೆಕಟ್ಟಿನ ಸುತ್ತಮುತ್ತ ಇರುವ ಸುಮಾರು 270ಕ್ಕೂ ಹೆಚ್ಚು ಮನೆಗಳಿಗೆ ಕುಡಿಯುವ ನೀರಿನ ಬಾವಿಗಳಲ್ಲಿ ಬೇಸಗೆ ಸಮಯದಲ್ಲಿಯೂ ನೀರು ಪಡೆಯುವಂತಾಗಲಿದೆ. ಉಪ್ಪು ನೀರಿನ ಪ್ರದೇಶದಲ್ಲಿಯೂ ಬದಲಾವಣೆ ಕಂಡು ಬಂದಿದೆ. ಗ್ರಾಮ ಪಂಚಾಯತ್‌ನ ವಿದ್ಯುತ್‌ ಪಂಪ್‌ಗ್ಳು ಹಾಗೂ ವಿಶ್ವಬ್ಯಾಂಕ್‌ನ ಪಂಪ್‌ಗ್ಳಲ್ಲಿ ನೀರಿನ ಅಭಾವ ಕಾಡದು ಎಂದು ಪಂಚಾಯತ್‌ ಹೇಳಿಕೊಂಡಿದೆ.

ಇತರ ಗ್ರಾ.ಪಂ. ಅನುಸರಿಸಲಿ:

ಅನೇಕ ಗ್ರಾ.ಪಂ.ಗಳಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾದರೂ ಸಹ ಅದರ ನಿರ್ವಹಣೆಗೆ ಹೆಚ್ಚಾಗಿ ಯಾರೂ ಸ್ಪಂದಿಸುವುದಿಲ್ಲ, ಪಂಚಾಯತ್‌ನ ಸದಸ್ಯರು ತೋಕೂರಿನ ಸೇವಾ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾರ್ಗದರ್ಶನ ನೀಡಿದ್ದರಿಂದ ಅಣೆಕಟ್ಟುಗಳನ್ನು ಸುರಕ್ಷಿತವಾಗಿಟ್ಟಲ್ಲಿ ಗ್ರಾಮಕ್ಕೇ ಫಲ ಸಿಗುತ್ತದೆ ಎಂಬ ಮಾದರಿ ಕಾರ್ಯ ಇತರ ಗ್ರಾಮ ಪಂಚಾಯತ್‌ಗಳು ಅನುಸರಿಸಲು ಇದೊಂದು ಪ್ರೇರಣೆಯಾಗಿದೆ. –  ಲೋಕನಾಥ ಭಂಡಾರಿ, ಕಾರ್ಯದರ್ಶಿ, ಪಡುಪಣಂಬೂರು ಗ್ರಾ.ಪಂ.

-ನರೇಂದ್ರ ಕೆರೆಕಾಡು

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.