ಮಂಗಳ ಈಜುಕೊಳ: ಮಾಸಾಂತ್ಯಕ್ಕೆ ಕಾಮಗಾರಿ ಪೂರ್ಣ
Team Udayavani, Jan 3, 2019, 5:53 AM IST
ಮಂಗಳೂರು: ಮಂಗಳ ಈಜುಕೊಳ ಮೇಲ್ದರ್ಜೆಗೇರಿಸಲು ಮೂರು ತಿಂಗಳ ಹಿಂದೆ ಪ್ರಾರಂಭವಾದ ಕಾಮಗಾರಿ ಅಂತಿಮ ಹಂತದಲ್ಲಿದ್ದು, ತಿಂಗಳಾಂತ್ಯಕ್ಕೆ ಕಾಮಗಾರಿ ಪೂರ್ಣಗೊಂಡು ಫೆಬ್ರವರಿಯಲ್ಲಿ ಸಾರ್ವಜನಿಕರಿಗೆ ಮುಕ್ತವಾಗಲಿದೆ ಎಂದು ಮೇಯರ್ ಭಾಸ್ಕರ್ ಕೆ. ಹೇಳಿದರು.
ಬುಧವಾರ ಅಧಿಕಾರಿಗಳು ಹಾಗೂ ಪಾಲಿಕೆ ಸದಸ್ಯರೊಂದಿಗೆ ಕಾಮಗಾರಿ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಈಜುಕೊಳದಲ್ಲಿ ನೀರು ಶುದ್ಧೀಕರಣ ಘಟಕಕ್ಕೆ ನೂತನ ತಂತ್ರಜ್ಞಾನ ಅಳವಡಿಕೆ, ಈಜುಕೊಳದ ನೀರನ್ನು ಓಝೋನ್ ಘಟಕದಲ್ಲಿ ಸಂಸ್ಕರಿಸುವ ನೂತನ ತಂತ್ರಜ್ಞಾನ, ಈಜುಕೊಳ ಲೇನ್ ಮಾರ್ಕ್ ಸಹಿತ ಇತರ ಕಾಮಗಾರಿಗಳು ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಮಾಡಲಾಗಿದೆ. ಎಲ್ಲ ಕಾಮಗಾರಿಗಳು ಈ ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳಲಿದೆ. ಬಳಿಕ ಅದನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುವುದು ಎಂದರು.
ಈಜುಕೊಳದ ಶುಲ್ಕ ಹೆಚ್ಚಿಸುವ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದರು. ಉಪ ಮೇಯರ್ ಕೆ.ಮಹಮ್ಮದ್, ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಮನಪಾ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ನವೀನ್ ಡಿ’ಸೋಜಾ, ಕಾರ್ಪೊರೇಟರ್ ಗಳಾದ ಅಪ್ಪಿ, ಪ್ರತಿಭಾ ಕುಳಾಯಿ, ಆರೋಗ್ಯಾಧಿಕಾರಿ ಡಾ| ಮಂಜಯ್ಯ ಶೆಟ್ಟಿ, ಕಾರ್ಯನಿರ್ವಾಹಕ ಅಭಿಯಂತರ ಗುರುರಾಜ್ ಮಳಹಳ್ಳಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.