ದ. ಕ.: 13 ಮಂದಿಗೆ ದೃಢ : 30 ಮಂದಿ ಬಿಡುಗಡೆ; ಇಬ್ಬರ ಸ್ಥಿತಿ ಗಂಭೀರ
Team Udayavani, Jun 20, 2020, 9:29 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 13 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದೇ ವೇಳೆ 30 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸೌದಿ ಅರೇಬಿಯಾದಿಂದ ಆಗಮಿಸಿದ್ದ 43 ವರ್ಷದ ವ್ಯಕ್ತಿ, 22, 23, 22 ವರ್ಷದ ಯುವಕ, ಶಾರ್ಜಾದಿಂದ ಆಗಮಿಸಿದ್ದ 34 ವರ್ಷದ ಮಹಿಳೆ, 24 ವರ್ಷದ ಯುವತಿ, 34 ವರ್ಷದ ಮಹಿಳೆ, 27 ವರ್ಷದ ಯುವತಿ, 38 ವರ್ಷದ ವ್ಯಕ್ತಿ, 21 ವರ್ಷದ ಯುವತಿ, 55 ವರ್ಷದ ಮಹಿಳೆಗೆ ಕೋವಿಡ್ ದೃಢಪಟ್ಟಿದೆ.
ಇಬ್ಬರ ಸ್ಥಿತಿ ಗಂಭೀರ
ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 70 ವರ್ಷದ ವೃದ್ಧ ಮಧುಮೇಹ ಹಾಗೂ ನ್ಯುಮೋನಿಯಾ ದಿಂದ ಬಳಲುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 52 ವರ್ಷದ ವ್ಯಕ್ತಿ ಮಧುಮೇಹ ಮತ್ತು ಅರ್ಬುದ ರೋಗದಿಂದ ಬಳಲುತ್ತಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ಸೋಂಕಿನಿಂದ ಗುಣಮುಖರಾದ 30 ಮಂದಿ ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 60 ವರದಿ ಬರಲು ಬಾಕಿ ಕೋವಿಡ್ ಆಸ್ಪತ್ರೆಯಲ್ಲಿ ಗುರುವಾರ ಸ್ವೀಕರಿಸಲಾದ 118 ಮಂದಿಯ ಗಂಟಲ ದ್ರವ ಮಾದರಿ ಪರೀಕ್ಷೆ ವರದಿ ಪೈಕಿ 13 ಪಾಸಿಟಿವ್, 105 ನೆಗೆಟಿವ್ ಆಗಿವೆ. ಹೊಸದಾಗಿ 147 ಮಂದಿಯ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಹಿಂದಿನ 60 ಮಾದರಿಯ ವರದಿಗಳು ಬರಲು ಬಾಕಿ ಇವೆ. 28 ಮಂದಿ ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ.
ಕಾಸರಗೋಡು: 4 ಪ್ರಕರಣ
ಕಾಸರಗೋಡು: ಜಿಲ್ಲೆಯಲ್ಲಿ ಶುಕ್ರವಾರ ನಾಲ್ಕು ಮಂದಿಗೆ ಕೋವಿಡ್ ವೈರಸ್ ಸೋಂಕು ದೃಢೀಕರಿಸಲಾಗಿದ್ದು ನಾಲ್ವರು ಗುಣಮುಖರಾಗಿದ್ದಾರೆ.
ಸೋಂಕು ಬಾಧಿತರಲ್ಲಿ ಇಬ್ಬರು ವಿದೇಶದಿಂದ ಹಾಗೂ ಇನ್ನಿಬ್ಬರು ಮಹಾರಾಷ್ಟ್ರದಿಂದ ಬಂದವರು. 58, 59, 18 ಮತ್ತು 36 ವರ್ಷದ ವ್ಯಕ್ತಿಗಳಿಗೆ ಕೋವಿಡ್ ಸೋಂಕು ಬಾಧಿಸಿದೆ.
118 ಮಂದಿಗೆ ಸೋಂಕು
ಕೇರಳ ರಾಜ್ಯದಲ್ಲಿ ಶುಕ್ರವಾರ 118 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢೀಕರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.