ಮಂಗಳೂರು:ಗಾಳಿ,ಸಿಡಿಲಿಗೆ ಇಬ್ಬರು ಬಲಿ, ಹಲವೆಡೆ ಹಾನಿ
Team Udayavani, May 3, 2017, 1:31 PM IST
ಮಂಗಳೂರು : ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಗುಡುಗು ಮಿಂಚು, ಗಾಳಿ ಸಹಿತ ಮಳೆಯಾಗಿದ್ದು, ಬಜಪೆಯ ಎಕ್ಕಾರಿನಲ್ಲಿ ಹೊಟೇಲ್ವೊಂದರ ಮೇಲೆ ಮರ ಬಿದ್ದು ಮಾಲಿಕ ಸಾವನ್ನಪ್ಪಿದ್ದರೆ, ಮೂಡಬಿದಿರಿಗೆ ಸಿಡಿಲಿಗೆ ಬಾಲಕ ಬಲಿಯಾಗಿದ್ದಾನೆ.
ಎಕ್ಕಾರಿನಲ್ಲಿ ರಸ್ತೆ ಬದಿಯಲ್ಲಿರುವ ಹೊಟೇಲ್ ಮೇಲೆ ಬೃಹತ್ ಅರಳಿ ಮರ ಬಿದ್ದ ಪರಿಣಾಮ ಮಾಲಿಕ ಸುಂದರ ಪೂಜಾರಿ (48)ಅವರು ಕಲ್ಲುಗಳ ಅಡಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದು , ಅವರ ಪತ್ನಿ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅವಘಡ ನಡೆಯುವ ವೇಳೆ ಮಗನೂ ಹೊಟೇಲ್ನಲ್ಲಿದ್ದ ಎಂದು ತಿಳಿದು ಬಂದಿದೆ. ಬಜಪೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮೂಡಬಿದಿರೆಯ ಬಲಾಯಿಪಾದೆಯಲ್ಲಿ ಸಿಡಿಲು ಬಡಿದ ಪರಿಣಾಮ ಲವಲೇಶ(15)ಎಂಬ ಬಾಲಕ ಮಲಗಿದ್ದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ. ರಾತ್ರಿ 9.50 ರ ವೇಳೆಗೆ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ.
ಜಿಲ್ಲೆಯ ಹಲವೆಡೆ ಗಾಳಿ ಮಳೆಗೆ ವಿದ್ಯುತ್ ಕಂಬಗಳು , ಮರಗಳು ಧರಾಶಾಯಿಯಾಗಿ ಅಪಾರ ಹಾನಿ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Brahmavar: ಲಾಕ್ಅಪ್ ಡೆತ್; ಕೇರಳ ಸಿಎಂಗೆ ದೂರು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ
Bengaluru: ಯತ್ನಾಳ್ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ
Udupi: ಬಾಂಗ್ಲಾದಲ್ಲಿ ಇಸ್ಕಾನ್ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.