ಮಂಗಳೂರು: ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
UUCMS ತಂತ್ರಾಂಶ ಸರಿಪಡಿಸಿ ಫಲಿತಾಂಶ ಪ್ರಕಟಿಸುವಂತೆ ಆಗ್ರಹ
Team Udayavani, Nov 3, 2022, 7:57 PM IST
ಮಂಗಳೂರು : 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಬಾಕಿಯಿರುವ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ UUCMS ತಂತ್ರಾಂಶವನ್ನು ಸರಿಪಡಿಸಿ ಫಲಿತಾಂಶವನ್ನು ಪ್ರಕಟಿಸುವಂತೆ ಆಗ್ರಹಿಸಿ ಎಬಿವಿಪಿ ಗುರುವಾರ ನಗರದ ಮಹಾನಗರ ಪಾಲಿಕೆಯ ಮುಂಭಾಗ ಪ್ರತಿಭಟನೆ ನಡೆಸಿತು.
ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿ ವರ್ಷ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ತಮ್ಮ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನದಿಂದ ಬರುವ ಹಣವನ್ನು ಪೂರಕವಾಗಿ ಬಳಸಿಕೊಳ್ಳುತ್ತಿದ್ದರು.ಆದರೆ ಈ ಬಾರಿ,ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ ಈ ತಂತ್ರಾಂಶದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆ ಆಗಿರುವುದಾಗಿ ನಮೂದಿಸಲಾಗಿದೆ.ಆದರೆ ಬಹುತೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ದೊರೆತಿರುವುದಿಲ್ಲ. ಈ ಕೂಡಲೇ ಸರಕಾರವು ಈ ವಿಷಯದ ಕುರಿತು ಗಮನವನ್ನು ಹರಿಸಿ ವಿದ್ಯಾರ್ಥಿಗಳಿಗೆ ನೀಡಬೇಕಾದ ವಿದ್ಯಾರ್ಥಿ ವೇತನದ ಹಣವನ್ನು ಬಿಡುಗಡೆಗೊಳಿಸಬೇಕಾಗಿ ಹಾಗೂ ಈ ವಿದ್ಯಾರ್ಥಿವೇತನದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆಯು ಸೂಕ್ತ ತನಿಖೆ ನಡೆಸಯವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿತು.
NEP ಜಾರಿಯಾದ ನಂತರ ಎಲ್ಲಾ ವಿಶ್ವವಿದ್ಯಾನಿಲಯಗಳು UUCMS ತಂತ್ರಾಂಶವನ್ನು ಬಳಸಿ, ದಾಖಲಾತಿಯಿಂದ ಫಲಿತಾಂಶದವರೆಗೆ ಎಲ್ಲಾ ರೀತಿಯ ಮಾಹಿತಿಗಳನ್ನು ಇದರ ಮೂಲಕವೇ ನಮೂದಿಸಬೇಕಾಗಿದೆ. ಆದರೆ ಈ ತಂತ್ರಾಂಶದಲ್ಲಿರುವ ಕೆಲವು ಸಮಸ್ಯೆಗಳಿಂದಾಗಿ, ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಲು, ಬೇರೆ ಕಾಲೇಜಿಗೆ ವರ್ಗಾವಣೆ ಪಡೆಯಲು, ವಿದ್ಯಾರ್ಥಿವೇತನಗಳಿಗೆ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಿದೆ. ವಿಶ್ವವಿದ್ಯಾಲಯಗಳು ಸರಿಯಾದ ರೀತಿಯಲ್ಲಿ ಫಲಿತಾಂಶವನ್ನು ನೀಡದೆ ಇರುವುದರಿಂದ ಹಲವಾರು ರೀತಿಯ ಸಮಸ್ಯೆಗಳನ್ನು ವಿದ್ಯಾರ್ಥಿ ಸಮೂಹ ಎದುರಿಸುತ್ತಿದ್ದು ಈ ಕೂಡಲೇ ಅವುಗಳನ್ನು ಬಗೆಹರಿಸುವಂತೆ ವಿದ್ಯಾರ್ಥಿ ಪರಿಷತ್ ಆಗ್ರಹಿಸಿತು.
ಹೋರಾಟದ ನೇತೃತ್ವವನ್ನು ಅಭಾವಿಪ ರಾಜ್ಯ ಕಾರ್ಯದರ್ಶಿ ಮಣಿಕಂಠ ಕಳಸ, ಜಿಲ್ಲಾ ಸಂಚಾಲಕರಾದ ಶ್ರೇಯಸ್ ಶೆಟ್ಟಿ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.