Mangaluru:ಅಟ್ಟುಕಲ್ ದೇವಸ್ಥಾನದಲ್ಲಿ ಪೊಂಗಲ್ ಹಿನ್ನೆಲೆ ರೈಲುಗಳಿಗೆ ಹೆಚ್ಚುವರಿ ನಿಲುಗಡೆ
Team Udayavani, Feb 22, 2024, 11:46 PM IST
ಮಂಗಳೂರು: ಅಟ್ಟುಕಲ್ ಭಗವತಿ ದೇವಸ್ಥಾನದಲ್ಲಿ ಪೊಂಗಲ್ ಹಿನ್ನೆಲೆ ರೈಲುಗಳಿಗೆ ಹೆಚ್ಚುವರಿ ನಿಲುಗಡೆ
ಮಂಗಳೂರು: ಕೇರಳದ ಅಟ್ಟುಕಲ್ ಭಗವತಿ ದೇವಸ್ಥಾನದಲ್ಲಿ ಪೊಂಗಲ್ ಮಹೋತ್ಸವ ಹಿನ್ನೆಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಪ್ರಮುಖ ರೈಲುಗಳಿಗೆ ಹೆಚ್ಚುವರಿ ನಿಲುಗಡೆ ನೀಡಲಾಗಿದೆ.
ಫೆ. 24ರಂದು ಸಂಜೆ 4.10ಕ್ಕೆ ಮಧುರೈ ಜಂಕ್ಷನ್‌ನಿಂದ ಹೊರಡುವ ಮಧುರೈ ಜಂಕ್ಷನ್-ತಿರುವನಂತಪುರ ಸೆಂಟ್ರಲ್ ಅಮೃತ ಎಕ್ಸ್‌ಪ್ರೆಸ್ ರೈಲಿಗೆ ಪರವೂರ್ ಮತ್ತು ಚಿರಯಂಕೀಝುದಲ್ಲಿ ಹೆಚ್ಚುವರಿ ನಿಲುಗಡೆಗಳನ್ನು ಒದಗಿಸಲಾಗಿದೆ.
ಫೆ. 24ರಂದು ಸಂಜೆ 5.30ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಡುವ ಮಂಗಳೂರು ಸೆಂಟ್ರಲ್-ತಿರುವನಂತಪುರ ಸೆಂಟ್ರಲ್ ಮಾವೇಲಿ ಎಕ್ಸ್‌ಪ್ರೆಸ್ ರೈಲು ಕಡಕಾವೂರು ಮತ್ತು ಚಿರಯಂಕೀಝುದಲ್ಲಿ ಹೆಚ್ಚುವರಿ ನಿಲುಗಡೆ ಒದಗಿಸಲಿದೆ.
ಫೆ. 24ರಂದು ಮಧ್ಯಾಹ್ನ 3.20ಕ್ಕೆ ಡಾ| ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಹೊರಡುವ ಡಾ| ಎಂಜಿಆರ್ ಚೆನ್ನೈ ಸೆಂಟ್ರಲ್-ತಿರುವನಂತಪುರ ಸೆಂಟ್ರಲ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿಗೆ ಚಿರಯಂಕೀಝುದಲ್ಲಿ ಹೆಚ್ಚುವರಿ ನಿಲುಗಡೆಯನ್ನು ಒದಗಿಸಲಾಗುತ್ತದೆ. ಫೆ. 23ರ ರಾತ್ರಿ 9.25ಕ್ಕೆ ಜಾಮ್‌ನಗರದಿಂದ ಹೊರಡುವ ಜಾಮ್‌ನಗರ-ತಿರುನೆಲ್ವೇಲಿ ಎಕ್ಸ್‌ಪ್ರೆಸ್ ರೈಲಿಗೆ ಬಲರಾಮಪುರಂ ಮತ್ತು ನೆಯ್ಯಂಟಿಂಕರಾದಲ್ಲಿ ಹೆಚ್ಚುವರಿ ನಿಲುಗಡೆಗಳನ್ನು ಒದಗಿಸಲಾಗುತ್ತದೆ ಎಂದು ರೈಲ್ವೇ ಇಲಾಖೆಯ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.