ಮಂಗಳೂರು ಏರ್‌ಪೋರ್ಟ್‌ಗೆ ಅದಾನಿ ಹೆಸರಿಲ್ಲ
Team Udayavani, Sep 12, 2021, 12:43 AM IST
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣ ಕೊನೆಗೂ ತನ್ನ ಹಿಂದಿನ ಹೆಸರನ್ನು ಉಳಿಸಿಕೊಂಡಿದೆ. ಕಳೆದ ವರ್ಷ ಮಂಗಳೂರು ಸಹಿತ ದೇಶದ ಹಲವು ವಿಮಾನ ನಿಲ್ದಾಣಗಳ ನಿರ್ವಹಣೆಯ ಗುತ್ತಿಗೆಯನ್ನು ಅದಾನಿ ಸಂಸ್ಥೆಗೆ ವಹಿಸಿದ ಬಳಿಕ ಸಂಸ್ಥೆಯು “ಅದಾನಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ನಾಮಕರಣಗೊಳಿಸಿತ್ತು. ಇದಕ್ಕೆ ವಿರೋಧ ವ್ಯಕ್ತವಾಗಿತ್ತು.
ಸಾಮಾಜಿಕ ಕಾರ್ಯಕರ್ತ ದಿಲ್‌ರಾಜ್ ಆಳ್ವ ಅವರು ಮಾಹಿತಿ ಹಕ್ಕು ಕಾಯಿದೆಯಡಿ ಮಾಹಿತಿ ಪಡೆದು ಕಾನೂನು ಹೋರಾಟ ರೂಪಿಸಿದ್ದರು. ಈ ಬಗ್ಗೆ ವಿಮಾನ ನಿಲ್ದಾಣ ಪ್ರಾಧಿಕಾರವನ್ನು ಪ್ರಶ್ನಿಸಿದಾಗ ಪ್ರಾಧಿಕಾರವು “ಒಪ್ಪಂದದ ಪ್ರಕಾರ ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸುವಂತಿಲ್ಲ’ ಎಂದು ತಿಳಿಸಿತ್ತು. ಆ ಬಳಿಕ ಪ್ರಾಧಿಕಾರವು ಅದಾನಿ ಸಂಸ್ಥೆಗೆ ನೋಟಿಸ್ ನೀಡಿತ್ತು. ಇದೀಗ ಸೆ. 10ರಂದು ಅದಾನಿ ಸಂಸ್ಥೆಯು ನಿಲ್ದಾಣ ಹೆಸರನ್ನು ಮತ್ತೆ ಈ ಹಿಂದಿನಂತೆಯೇ ಬದಲಾಯಿಸಿದೆ ಎಂದು ದಿಲ್‌ರಾಜ್ ಆಳ್ವ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಿತೇಶ್ ಡಿ’ಸೋಜಾ, ರಕ್ಷಣ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.