ಮಂಗಳೂರು ವಿಮಾನ ನಿಲ್ದಾಣ; ನಾಳೆಯಿಂದ ಇ-ವೀಸಾ ಸೌಲಭ್ಯ
Team Udayavani, Mar 31, 2017, 9:56 AM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎ. 1ರಂದು “ಇ-ವೀಸಾ’ ಸೌಲಭ್ಯ ಆರಂಭವಾಗಲಿದೆ. ಈ ಮೂಲಕ ಸುದೀರ್ಘ ಕಾಲದ ವಿಮಾನ ಪ್ರಯಾಣಿಕರ ಬೇಡಿಕೆಯೊಂದು ಈಡೇರಿದಂತಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಇ-ವೀಸಾ ಪರಿಶೀಲನೆ ಸೌಲಭ್ಯ ಇಲ್ಲದ ಕಾರಣ ವಿದೇಶಗಳಿಂದ ಇ-ವೀಸಾ ಮೂಲಕ ನೇರವಾಗಿ ಮಂಗಳೂರಿಗೆ ಬರುವ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿತ್ತು. ಈ ನಿಟ್ಟಿನಲ್ಲಿ ಮಂಗಳೂರು ನಿಲ್ದಾಣಕ್ಕೆ ಇ-ವೀಸಾ ಸೌಲಭ್ಯ ಕಲ್ಪಿಸುವಂತೆ ಸಂಬಂಧಪಟ್ಟ ಸಚಿವಾಲಯಗಳಿಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಇ-ವೀಸಾ ಸೌಲಭ್ಯ ಅನುಷ್ಠಾನವಾಗುವ ಮೂಲಕ ಹೊರದೇಶದ ಪ್ರವಾಸಿಗರು, ಉದ್ಯಮಿಗಳು ಹಾಗೂ ವೈದ್ಯಕೀಯ ಚಿಕಿತ್ಸೆಗೆ ಬರುವವರು ನೇರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯಬಹುದಾಗಿದೆ.
ಪ್ರವಾಸೋದ್ಯಮಕ್ಕೆ ಹೊಸ ಆಯಾಮ: ಇ-ವೀಸಾ ಆರಂಭಿಸುವ ಮೂಲಕ ಕರಾವಳಿಯ ಪ್ರವಾಸೋದ್ಯಮ ಹಾಗೂ ವೈದ್ಯಕೀಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಆಯಾಮ ದೊರೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರು ಬಳಿಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇ-ವೀಸಾ ಸೌಲಭ್ಯಕ್ಕೆ ಅನುಮತಿ ಕಲ್ಪಿಸಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಜಿಲ್ಲೆಯ ಜನತೆ ಪರವಾಗಿ ಕೃತಜ್ಞತೆ ಅರ್ಪಿಸುವುದಾಗಿ ಸಂಸದ ನಳಿನ್ಕುಮಾರ್ ಕಟೀಲು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿರುವ ಮಂಗಳೂರು ನಗರದ ಬೆಳವಣಿಗೆಗೆ ಇದು ಅವಕಾಶ ತೆರೆದಿಡಲಿದೆ ಎಂದವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.