ಮಂಗಳೂರು: ಬೀಡಿ ಕಾರ್ಮಿಕರ ಪ್ರತಿಭಟನೆ
Team Udayavani, Feb 27, 2019, 1:00 AM IST
ಮಂಗಳೂರು: ಅಖೀಲ ಭಾರತ ಬೀಡಿ ಕಾರ್ಮಿಕರ ಬೇಡಿಕೆ ದಿನಾಚರಣೆ ಪ್ರಯುಕ್ತ ಬೀಡಿ ಕಾರ್ಮಿಕರ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿ ಬೀಡಿ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಉದ್ಘಾಟಿಸಿದ ಕರ್ನಾಟಕ ರಾಜ್ಯ ಬೀಡಿ ವರ್ಕರ್ಸ್ ಫೆಡರೇಶನ್‌ನ ರಾಜ್ಯಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ ಮಾತನಾಡಿ, ಬೀಡಿ ಕಾರ್ಮಿಕರಿಗೆ ಕಾನೂನು ಪ್ರಕಾರ ಏರಿಕೆ ಮಾಡಬೇಕಾದಂತಹ ಕನಿಷ್ಠ ವೇತನವನ್ನು ರಾಜ್ಯ ಸರಕಾರವು ಸರ್ವಾನುಮತವಾಗಿ ತೀರ್ಮಾನ ಮಾಡಿದೆ. ಆದರೆ ಬೀಡಿ ಮಾಲಕರು ತಮ್ಮ ಹಠಮಾರಿತನದಿಂದಾಗಿ ಜಾರಿ ಮಾಡದಿರುವುದರಿಂದ ಬೀಡಿ ಕಾರ್ಮಿಕರಿಗೆ ಅನ್ಯಾಯ ವೆಸಗಿ ದಂತಾಗಿದೆ. 2015ರ ತುಟ್ಟಿಭತ್ತೆ ಕೂಡ ಬಾಕಿ ಉಳಿಸಿಕೊಂಡಿದ್ದಾರೆ. ಕೇಂದ್ರ ಸರಕಾರ ಕೂಡ ಬೀಡಿ ಕಾರ್ಮಿಕರನ್ನು ಬೀದಿಪಾಲು ಮಾಡುವಂತಹ ಕೋಪಾr ಕಾಯಿದೆಯನ್ನು ಕಠಿನಗೊಳಿಸಿದೆ. ಅಂಗಡಿ ಮುಗ್ಗಟ್ಟುಗಳಲ್ಲಿ ಬೀಡಿ ಮಾರಾಟ ಮಾಡುವುದಕ್ಕೆ ತಡೆ ಒಡ್ಡಲಾಗುತ್ತದೆ. ಇದರಿಂದಾಗಿ ಬೀಡಿ ಕಾರ್ಮಿಕರಿಗೆ ಕೆಲಸದ ಅಭದ್ರತೆ ಸೃಷ್ಟಿಯಾಗಿದೆ ಎಂದರು.
ಕಾರ್ಮಿಕರು ಕಂಗಾಲು
ಫೆಡರೇಶನ್ ಜಿಲ್ಲಾಧ್ಯಕ್ಷ ವಸಂತ ಆಚಾರಿ ಅವರು ಮಾತನಾಡಿ, ನರೇಂದ್ರ ಮೋದಿ ಸರಕಾರ ಆಡಳಿತಕ್ಕೆ ಬಂದ ಅನಂತರ ನೋಟಿನ ಮಾನ್ಯತೆ ರದ್ದು ಮಾಡಿ, ಜಿಎಸ್‌ಟಿ ಹೇರಿಕೆ ಮಾಡಿರುವುದರಿಂದಾಗಿ ವಿಪರೀತ ಬೆಲೆ ಏರಿಕೆಯಾಗಿದೆ. ಕೋಟಾ³ ಕಾಯಿದೆಯನ್ನು ಯಾವುದೇ ಪರ್ಯಾಯ ಪರಿಹಾರ ನೀಡದೆ ಜಾರಿ ಮಾಡಿರುವುದರಿಂದ ಬೀಡಿ ಕಾರ್ಮಿಕರು ಕಂಗಾಲಾಗಿದ್ದಾರೆ ಎಂದರು.
ಜಿಲ್ಲಾಧಿಕಾರಿಗಳು ನ್ಯಾಯೋಚಿತ ವಾಗಿ ಬೀಡಿ ಮಾಲಕರು ನೀಡಬೇಕಾದ ಸವಲತ್ತು ನೀಡುವಂತೆ ಸೂಚಿಸಬೇಕು. ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಬೀಡಿ ಮಾಲಕರು ಹಾಗೂ ಕಾರ್ಮಿಕ ಸಂಘಟನೆಗಳ ನಾಯಕರ ಜಂಟಿ ಸಭೆ ಕರೆಯಬೇಕೆಂದು ಈ ವೇಳೆ ಆಗ್ರಹಿಸಲಾಯಿತು.
ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಫೆಡರೇಶನ್ ಉಪಾಧ್ಯಕ್ಷ ಯು.ಬಿ. ಲೋಕಯ್ಯ, ಜಯಂತ ನಾಯ್ಕ, ಸುಮತಿ ಅಡ್ಯಾರ್, ಜಯಲಕ್ಷ್ಮೀ, ಪುಷ್ಪಾ ಮತ್ತಿತರರು ಉಪಸ್ಥಿತರಿದ್ದರು.
ಜಯಂತಿ ಬಿ. ಶೆಟ್ಟಿ ಸ್ವಾಗತಿಸಿದರು. ಭಾರತಿ ಬೋಳಾರ್ ಅವರು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.