ಮಂಗಳೂರು- ಬೆಂಗಳೂರು ಇಂಡಿಗೋ ವಿಮಾನ ಯಾನ ಆರಂಭ


Team Udayavani, May 2, 2017, 3:45 AM IST

BIG-3.jpg

ಮಂಗಳೂರು: ಮಂಗಳೂರು – ಬೆಂಗಳೂರು ಹಾಗೂ ಮಂಗಳೂರು -ಮುಂಬಯಿ ಮಧ್ಯೆ ಅತಿ ಕಡಿಮೆ ಪ್ರಯಾಣ ದರದ ಇಂಡಿಗೊ ವಿಮಾನ ಸೇವೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇ 1ರಂದು ಆರಂಭಗೊಂಡಿತು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂಡಿಗೋ ವಿಮಾನ ನಂ. 6 ಇ 6724 ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದಾಗ ಅದನ್ನು ಸಾಂಪ್ರಾದಾಯಿಕವಾಗಿ ಸ್ವಾಗತಿಸಲಾಯಿತು. ಬಳಿಕ ಜರಗಿದ ಸರಳ ಸಮಾರಂಭದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲು ದೀಪ ಬೆಳಗಿಸಿದರು. ವಿಮಾನ ನಿಲ್ದಾಣ ನಿರ್ದೇಶಕ ಜೆ.ಟಿ. ರಾಧಾಕೃಷ್ಣ ಕೇಕ್‌ ಕತ್ತರಿಸಿದರು. ಮಾಜಿ ಸಚಿವ, ಶಾಸಕ ಅಭಯಚಂದ್ರ ಜೈನ್‌, ಶಾಸಕ ಜೆ.ಆರ್‌. ಲೋಬೋ ಮುಖ್ಯ ಅತಿಥಿಯಾಗಿದ್ದರು. ದ.ಕ. ಜನತೆಗೆ ಪೂರಕ ಸಚಿವ ರಮಾನಾಥ ರೈ ಮತ್ತು ಶಾಸಕ ಜೆ.ಆರ್‌. ಲೋಬೋ ಮಾತನಾಡಿ, ಕಡಿಮೆ ಪ್ರಯಾಣ ದರದ ಇಂಡಿಗೋ ವಿಮಾನ ಸೇವೆ ಆರಂಭ ಗೊಂಡಿರುವುದರಿಂದ ಅವಿಭಜಿತ ದ.ಕ. ಜಿಲ್ಲೆಯ ಪ್ರಯಾಣಿಕರಿಗೆ ಅನುಕೂಲವಾಗಿದೆ. ಹೆಚ್ಚು ಮಂದಿ ವಿಮಾನ ಪ್ರಯಾಣವನ್ನು ಅವಲಂಬಿಸಲು ಪೂರಕವಾಗಿದೆ ಎಂದರು.

ಇಂಡಿಗೊ ನಿರ್ವಹಣೆ ಮತ್ತು ಗ್ರಾಹಕ ಸೇವೆ ವಿಭಾಗದ ಸಹಾಯಕ ಉಪಾಧ್ಯಕ್ಷ ಚಾರ್ನೆಲ್‌ ಡಿ’ಸೋಜಾ, ಮಂಗಳೂರು ಕೇಂದ್ರದ ಮುಖ್ಯಸ್ಥೆ ಅರ್ಚನಾ  ಉಪಸ್ಥಿತರಿದ್ದರು. ಮಂಗಳೂರು – ಬೆಂಗಳೂರು ಮಧ್ಯೆ 2 ವಿಮಾನಗಳು ಹಾಗೂ ಮಂಗಳೂರು-ಮುಂಬಯಿ ಮಧ್ಯೆ 1 ವಿಮಾನ ಪ್ರತೀ ದಿನ ಸಂಚರಿಸ ಲಿದೆ. ಮೇ 15ರಿಂದ ಮಂಗಳೂರು- ಬೆಂಗಳೂರು ಮಧ್ಯೆ ಇನ್ನೊಂದು ವಿಮಾನ ಸೇವೆ ಆರಂಭಗೊಳ್ಳಲಿದೆ. ಮಂಗಳೂರು – ಬೆಂಗಳೂರಿಗೆ ಕನಿಷ್ಠ ದರ 1,499 ರೂ., ಮಂಗಳೂರು- ಮುಂಬಯಿಗೆ 1,799 ರೂ. ಕನಿಷ್ಠ ದರ ನಿಗದಿಪಡಿಸಲಾಗಿದೆ.

ಇಂಡಿಗೋ ವಿಮಾನ ಸೇವೆ
ಹೊರಡುವ ಸ್ಥಳ    ನಿರ್ಗಮನ        ಆಗಮನ     ದರ
ಬೆಂಗಳೂರು        5.30(ಬೆಳಗ್ಗೆ)       6.30     1499 ಮಂಗಳೂರು           7.00 (ಬೆಳಗ್ಗೆ)       7.55     1499 ಬೆಂಗಳೂರು        2.55(ಮಧ್ಯಾಹ್ನ) 3.50    1499 ಮಂಗಳೂರು       4.20 (ಸಂಜೆ)                  5.15      1499 ಮುಂಬಯಿ             9.40(ಬೆಳಗ್ಗೆ)        11.30     1799 ಮಂಗಳೂರು       12.05(ಮಧ್ಯಾಹ್ನ) 2.00    1799
ಮೇ 15ರಿಂದ ಆರಂಭಗೊಳ್ಳುವ ಇನ್ನೊಂದು ವಿಮಾನ ರಾತ್ರಿ 10 ಗಂಟೆಗೆ ಮಂಗಳೂರಿನಿಂದ ನಿರ್ಗಮಿಸಲಿದೆ.

ಟಾಪ್ ನ್ಯೂಸ್

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.