ಇಂದು ಬಸ್ ಸಂಚಾರ ಆರಂಭ
Team Udayavani, Dec 22, 2019, 12:05 AM IST
ಮಂಗಳೂರು: ಕರ್ಫ್ಯೂ ಸಡಿಲಿಸಿದ ಕಾರಣ ನಗರದ ಕೆಎಸ್ಸಾರ್ಟಿಸಿ ವಿಭಾಗದಿಂದ ಬಸ್‌ಗಳು ಸಂಚರಿಸಿದವು. ಬೆಂಗಳೂರು, ಮೈಸೂರು, ಧರ್ಮಸ್ಥಳ, ಉಪ್ಪಿನಂಗಡಿ ಸಹಿತ ವಿವಿಧ ಭಾಗಗಳಿಗೆ ಬಸ್ ಪ್ರಯಾಣ ಬೆಳೆಸಿದ್ದವು. ಆದರೆ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ರಾತ್ರಿಯೂ ಬಸ್‌ಗಳು ಸಂಚರಿಸಿವೆ. ರವಿವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6ರ ವರೆಗೆ ಕರ್ಫ್ಯೂ ಸಡಿಲಿಕೆ ಇರುವ ಕಾರಣ ಅನುಮತಿ ಪಡೆದು ಬಸ್ ಕಾರ್ಯಾಚರಣೆ ನಡೆಸಬೇಕೇ ಎಂದು ತೀರ್ಮಾನಿಸಲಾಗುವುದು ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
ಇಂದು ಎಂದಿನಂತೆ ಸಿಟಿ ಬಸ್ ಸಂಚಾರ
ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ರವಿವಾರದಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಕರ್ಫ್ಯೂ ಸಡಿಲಗೊಳಿಸಿದ ಕಾರಣ ಸಿಟಿ ಬಸ್ ಸಂಚಾರ ಎಂದಿನಂತೆ ಇರುತ್ತದೆ’ ಎಂದಿದ್ದಾರೆ.
ಇಂದು ಬಸ್ ಓಡಾಟ ಸಾಧ್ಯತೆ
ರವಿವಾರ ಹಗಲು ಕರ್ಫ್ಯೂ ಹಿಂದೆಗೆಯುವ ಘೋಷಣೆ ಹೊರಡಿಸಲಾಗಿದ್ದು, ಉಡುಪಿಯಿಂದ ಮಂಗಳೂರು ಕಡೆ ಮತ್ತು ಮಂಗಳೂರಿನಿಂದ ಉಡುಪಿ ಕಡೆ ಎಕ್ಸ್‌ಪ್ರೆಸ್ ಬಸ್‌ಗಳು ರವಿವಾರ ಎಂದಿನಂತೆ ಸಂಚಾರ ಆರಂಭಿಸುವ ಸಾಧ್ಯತೆ ಇದೆ.
ಕೆಎಸ್‌ಆರ್‌ಟಿಸಿ: 3 ಕೋಟಿ ರೂ.ಗೂ ಹೆಚ್ಚು ನಷ್ಟ
ಕರ್ಫ್ಯೂನಿಂದಾಗಿ 2 ದಿನಗಳಲ್ಲಿ ಕೆಎಸ್ಸಾರ್ಟಿಸಿಗೆ 3 ಕೋ.ರೂ.ಗೂ ಹೆಚ್ಚು ನಷ್ಟವಾಗಿದೆ.
ನಗರದ ಸುತ್ತಮುತ್ತಲಿನ ಪ್ರದೇಶಗಳಿಗೆ ಸುಮಾರು 300ಕ್ಕೂ ಹೆಚ್ಚಿನ ಕೆಎಸ್ಸಾರ್ಟಿಸಿ ಸಿಟಿ ಬಸ್‌ಗಳು ಸಂಚರಿಸುತ್ತವೆ. ಡಿ. 19ರ ಸಂಜೆ ಬಳಿಕ ಡಿ. 21ರ ವರೆಗೆ ಅವು ಸಂಚರಿಸಲಿಲ್ಲ. ಒಂದು ಬಸ್‌ನಲ್ಲಿ ಪ್ರತೀ ದಿನ ಸರಾಸರಿ ಸುಮಾರು 10 ಸಾವಿರ ರೂ. ಸಂಗ್ರಹವಾಗುತ್ತದೆ. ಎರಡೂವರೆ ದಿನಗಳಲ್ಲಿ ಸುಮಾರು 1.5 ಕೋಟಿ ರೂ.ಗೂ ಅಧಿಕ ನಷ್ಟ ಆಗಿದೆ. ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಸಾಮಾನ್ಯ ದಿನಗಳಲ್ಲಿ ಇಲ್ಲಿ ಸುಮಾರು 50 ಲಕ್ಷ ರೂ. ಸಂಗ್ರವಾಗುತ್ತದೆ. ಆದರೆ ಎರಡೂವರೆ ದಿನ ಬಸ್ ಸಂಚಾರ ಸ್ಥಗಿತಗೊಂಡ ಕಾರಣ ಸುಮಾರು 1.5 ಕೋಟಿ ರೂ. ನಷ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.