Mangaluru Central: 4, 5ನೇ ಪ್ಲಾಟ್ಫಾರಂ ಕಾಮಗಾರಿ ಪೂರ್ಣ
Team Udayavani, Nov 25, 2023, 11:23 PM IST
ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ 4 ಮತ್ತು 5ನೇ ಪ್ಲಾಟ್ಫಾರಂ ಕಾಮಗಾರಿ ಪೂರ್ಣಗೊಂಡಿದ್ದು, ಪ್ರಾಯೋಗಿಕ ರೈಲು ಸಂಚಾರ ಆರಂಭವಾಗಿದೆ.
ಪ್ರಯಾಣಿಕರಿಗೆ ಮೂಲಸೌಕರ್ಯ ಕಲ್ಪಿಸುವ ವ್ಯವಸ್ಥೆಗಳು ಇನ್ನಷ್ಟೇ ಆಗಬೇಕಿರುವುದರಿಂದ ಪ್ರಸ್ತುತ ನಿಲ್ದಾಣಕ್ಕೆ ಆಗಮಿಸುವ ರೈಲುಗಳಿಗೆ ಇಲ್ಲಿ ತಂಗಲು ಅವಕಾಶ ಕಲ್ಪಿಸಲಾಗುತ್ತಿದೆ.ಶನಿವಾರ ಬೆಳಗ್ಗೆ ಆಗಮಿಸಿದ ಕಾಚಿಗುಡ-ಮಂಗಳೂರು ಸೆಂಟ್ರಲ್ ರೈಲಿಗೆ ಹೊಸ ಪ್ಲಾಟ್ ಫಾರಂನಲ್ಲಿ ತಂಗಲು ಅವಕಾಶ ಕಲ್ಪಿಸಿಕೊಡಲಾಗಿತ್ತು.
ಬೋಗಿಗಳ ಸ್ವತ್ಛಗೊಳಿಸುವಿಕೆ, ತಾಂತ್ರಿಕ ನಿರ್ವಹಣೆಯನ್ನೂ ನಡೆಸಲಾಗಿದೆ. ಹೊಸ ಪ್ಲಾಟ್ ಫಾರಂನಲ್ಲಿ ಪ್ರಯಾಣಿಕರಿಗೆ ಮಳೆ, ಬಿಸಿಲಿನಿಂದ ರಕ್ಷಣೆಗೆ ಮೇಲ್ಫಾವಣಿ, ವಿದ್ಯುದ್ದೀಪ, ಕುಡಿಯುವ ನೀರು ಮೊದಲಾದ ಮೂಲ ಸೌಕರ್ಯ ಇನ್ನಷ್ಟೇ ಕಲ್ಪಿಸಬೇಕಾಗಿದೆ. ಪಾದಚಾರಿ ಮೇಲ್ಸೇತುವೆ ಜನವರಿ ಅಂತ್ಯದೊಳಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.
ನೂತನ ಪ್ಲ್ಯಾಟ್ಫಾರಂಗಳು 600 ಮೀಟರ್ ಉದ್ದವಿದ್ದು, 24 ರೈಲು ಬೋಗಿಗಳ ನಿಲುಗಡೆಗೆ ಅವಕಾಶವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.