ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ವರ್ಗಾವಣೆ; ಕುಲದೀಪ್ ಕುಮಾರ್ ಜೈನ್ ನೂತನ ಆಯುಕ್ತ
Team Udayavani, Feb 23, 2023, 3:11 PM IST
ಮಂಗಳೂರು: ಪ್ರಮುಖ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದ್ದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಪಶ್ವಿಮ ಸಂಚಾರ ವಿಭಾಗದ ಡಿಸಿಪಿ ಆಗಿದ್ದ ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನಿಯೋಜಿಸಿ ಸರ್ಕಾರ ಆದೇಶಿಸಿದೆ.
ಬೆಂಗಳೂರು ವೈರ್ಲೆಸ್ ಎಸ್.ಪಿಯಾಗಿದ್ದ ಡಿ.ಕಿಶೋರ್ ಬಾಬು ಅವರನ್ನು ಗುಪ್ತದಳ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ. ಕೆಎಸ್ ಆರ್ ಪಿ ಬೆಂಗಳೂರು ಕಮಾಂಡೆಂಟ್ ಆಗಿರುವ ಕೆ.ವಂಶಿಕೃಷ್ಣ ಅವರನ್ನು ಬೆಂಗಳೂರು ವೈರ್ಲೆಸ್ ಎಸ್.ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಮುಹಮ್ಮದ್ ಸುಜೀತಾ ಎಂ.ಎಸ್. ಅವರನ್ನು ಬೆಂಗಳೂರು ಸಿಎಆರ್ ಡಿಸಿಪಿಯಿಂದ ಬೆಂಗಳೂರು ದಕ್ಷಿಣ ಸಂಚಾರ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ:ಎಲ್ಲರೂ ಬೀಫ್ ತಿನ್ನುತ್ತಾರೆ…ಯಾರಿಂದಲೂ ತಡೆಯಲು ಸಾಧ್ಯವಿಲ್ಲ; ಮೇಘಾಲಯ ಬಿಜೆಪಿ ಮುಖ್ಯಸ್ಥ
ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಅರುಣಾಂಶುಗಿರಿ ಅವರನ್ನು ಸಿಎಆರ್ ಬೆಂಗಳೂರು ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಬೆಳಗಾವಿ ಲೋಕಾಯುಕ್ತ ಎಸ್.ಪಿ. ಯಶೋಧಾ ವಂಟಗೋಡಿ ಅವರನ್ನು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.