ಪೂರ್ವಸಿದ್ಧತೆ ಆರಂಭ ;ನೋಡಲ್‌ ಅಧಿಕಾರಿ ನೇಮಕ

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ

Team Udayavani, Oct 14, 2019, 5:49 AM IST

1310MLR44-MCC

ವಿಶೇಷ ವರದಿ-ಮಹಾನಗರ : ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಪೂರ್ವಸಿದ್ಧ‌ªತೆಗಳನ್ನು ಆರಂಭಗೊಂಡಿದ್ದು ಚುನಾವಣೆ ಪ್ರಕ್ರಿಯೆಗಳು ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ನೋಡಲ್‌ ಅಧಿಕಾರಿಯನ್ನು ನೇಮಕಮಾಡಿದೆ. ಈ ಮೂಲಕ ಪಾಲಿಕೆ ಚುನಾವಣೆ ಶೀಘ್ರದಲ್ಲೇ ನಡೆಯುವ ಸಾಧ್ಯತೆಗಳು ಗೋಚರಿಸಿದೆ.
ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಪಾಲಿಕೆ ಚುನಾವಣೆಯ ಸದಾಚಾರ ಸಂಹಿತೆಯ ಮೇಲ್ವಿಚಾರಣೆಯ ನೋಡಲ್‌ ಅಧಿಕಾರಿಯಾಗಿ ದಕ್ಷಿಣಕನ್ನಡ ಜಿಲ್ಲೆಯ ಪರೀಕ್ಷಾರ್ಥ ಐಎಎಸ್‌ ಅಧಿಕಾರಿ ರಾಹುಲ್‌ ಶಿಂಧೆ ಅವರನ್ನು ನೇಮಕ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಅವಧಿ ಮುಗಿದಿರುವ ಮಂಗಳೂರು ಮಹಾನಗರ ಪಾಲಿಕೆ ಪರಿಷತ್‌ಗೆ ಚುನಾವಣೆ ನಡೆಸುವ ಬಗ್ಗೆ ಪೂರ್ವಸಿದ್ಧತೆಯನ್ನು ಮಾಡಿಕೊಳ್ಳುವಂತೆ ಚುನಾವಣೆ ಆಯೋಗ ನೀಡಿರುವ ನಿರ್ದೇಶನದಂತೆ ಚುನಾವಣೆಗೆ ಪೂರ್ವಭಾವಿ ಸಿದ್ಧತೆಗಳು ಆರಂಭಗೊಂಡಿವೆ.

ನ್ಯಾಯಾಲಯದ ಪ್ರಕರಣಗಳು ಇತ್ಯರ್ಥವಾಗಿರುವ ಹಾಗೂ 2019ರ ಡಿಸೆಂಬರ್‌ನಲ್ಲಿ ಅಧಿಕಾರ ಅವಧಿ ಮುಕ್ತಾಯವಾಗುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸುವ ಸಂಬಂಧ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವ ಬಗ್ಗೆ ರಾಜ್ಯ ಚುನಾವಣಾ ಆಯೋಗ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚಿಸಿದೆ. ಮತದಾರರ ಪಟ್ಟಿ, ಮತದಾನ ಕೇಂದ್ರಗಳ ಪಟ್ಟಿ ಸಿದ್ಧಪಡಿಸುವುದು. ಮತದಾನ ಸಿಬಂದಿ ನೇಮಕ,ಇವಿಎಂಗಳ ಸಂಗ್ರಹ ಮಾಡಿ ಸಿದ್ಧಪಡಿಸಿಕೊಳ್ಳುವುದು ಚುನಾವಣಾಧಿಕಾರಿಗಳ ನೇಮಕ ಮಾಡಲು ಪಟ್ಟಿ ತಯಾರಿಸಿ ಸಲ್ಲಿಸುವಂತೆ ನಿರ್ದೇಶಿಸಿರುವ ರಾಜ್ಯ ಚುನಾವಣೆ ಆಯೋಗ‌ ಮಹಾನಗರ ಪಾಲಿಕೆಯ ಪ್ರತಿ 5 ವಾರ್ಡ್‌ಗೆ ಉಪವಿಭಾಗಾಧಿಕಾರಿ ಅಥವಾ ತತ್ಸಮಾನ ಹುದ್ದೆಯ ಓರ್ವ ಅಧಿಕಾರಿಯನ್ನು ನೇಮಕ ಮಾಡಲು ಪಟ್ಟಿ ತಯಾರಿಸಿ ಸಲ್ಲಿಸುವಂತೆ ಸೂಚಿಸಿತ್ತು.

ಮಹಾನಗರ ಪಾಲಿಕೆ ಒಟ್ಟು 60 ವಾರ್ಡ್‌ಗಳನ್ನು ಒಳಗೊಂಡಿದ್ದು ಹಿಂದಿನ ಪರಿಷತ್‌ನಲ್ಲಿ ಕಾಂಗ್ರೆಸ್‌ 35, ಬಿಜೆಪಿ 20, ಜೆಡಿಎಸ್‌ 2, ಸಿಪಿಎಂ 1, ಎಸ್‌ ಡಿ ಪಿಐ 1 ಹಾಗೂ ಓರ್ವ ಪಕ್ಷೇತರ ಸದಸ್ಯರನ್ನು ಹೊಂದಿತ್ತು.

ಅಡ್ಡಿ ನಿವಾರಣೆ
ಮನಪಾ ಅಧಿಕಾರಾವಧಿ ಮಾರ್ಚ್‌ 7ಕ್ಕೆ ಅಂತ್ಯಗೊಂಡಿತ್ತು. ಆದರೆ ವಾರ್ಡ್‌ ಮೀಸಲಾತಿ ಪ್ರಶ್ನಿಸಿ ಕೆಲವು ಮಂದಿ ನ್ಯಾಯಾಲಯದ ಮೆಟ್ಟಿಲೇರಿದ ಪರಿಣಾಮ ಚುನಾವಣೆ ನಡೆದಿರಲಿಲ್ಲ. ಮೀಸಲಾತಿ ವಿವಾದವನ್ನು ನ್ಯಾಯಾಲಯ ಬಗೆಹರಿಸಿದ್ದು ಚುನಾವಣೆ ಪ್ರಕ್ರಿಯೆಯನ್ನು ಅ. 31ರೊಳಗೆ ಪೂರ್ಣಗೊಳಿಸಿ, ನ. 15ರೊಳಗೆ ಹೊಸ ಆಡಳಿತ ವ್ಯವಸ್ಥೆ ಸ್ಥಾಪನೆಯಾಗಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಆ. 27ರಂದು ನಿರ್ದೇಶನ ನೀಡಿದೆ. ಮನಪಾ ಮೀಸಲಾತಿಯ ಕುರಿತಂತೆ ಹೈಕೋರ್ಟ್‌ ನ ದ್ವಿಸದಸ್ಯ ಪೀಠದಲ್ಲಿ ಸಲ್ಲಿಕೆಯಾಗಿದ್ದ ಪುನರ್‌ ಪರಿಶೀಲನ ಅರ್ಜಿ ಕೂಡ ನ್ಯಾಯಾಲಯವು ಅ.11 ರಂದು ವಜಾಗೊಳಿಸಿ ಚುನಾವಣೆಗೆ ಎದುರಾಗಿದ್ದ ಕಾನೂನು ಅಡಚಣೆ ನಿವಾರಣೆಯಾಗಿದೆ.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.