ಅಂಚೆ ಮೂಲಕ ವಿದ್ಯುತ್ ಕಾರ್ಮಿಕರ ಬೇಡಿಕೆ ರವಾನೆ
Team Udayavani, Aug 22, 2017, 6:35 AM IST
ಬೆಳ್ತಂಗಡಿ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪೆನಿಯ ಗುತ್ತಿಗೆ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ರಾಜ್ಯದ ಮುಖ್ಯಮಂತ್ರಿ, ಇಂಧನ ಸಚಿವ ಹಾಗೂ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಅಂಚೆ ಮೂಲಕ ರವಾನಿಸುವ ಕಾರ್ಯಕ್ರಮ ನಡೆಯಿತು.
ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಮಿಕರ ಫೆಡರೇಶನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವ ಕುಮಾರ್ ಎಸ್.ಎಂ., ಮುಖಂಡರಾದ ಪ್ರಕಾಶ್ ಧರ್ಮಸ್ಥಳ, ಲೋಕೇಶ ಹೆಬ್ಟಾರ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಇಂಧನ ಇಲಾಖೆಯಲ್ಲಿ 5 ರಿಂದ 20 ವರ್ಷಗಳಿಂದ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರನ್ನು ಖಾಯಂ ಮಾಡಲು ಆ.26ರಂದು ಶಾಸಕರಿಗೆ ಮನವಿ ನೀಡಲಾಗುವುದು. ಸೆ.4 ರಂದು ಮಂಗಳೂರಿನ ಮೆಸ್ಕಾಂ ಪ್ರಧಾನ ಕಚೇರಿಯ ಎದುರು 24 ಗಂಟೆಗಳ ನಿರಶನ ಸತ್ಯಾಗ್ರಹ ನಡೆಯಲಿದೆ. 3 ಹಂತದ ಚಳವಳಿಯ ಭಾಗವಾಗಿ ಸೆ.14ರಂದು ವಿಧಾನ ಸೌಧ ಮುತ್ತಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಮುಖಂಡರಾದ ಪ್ರಕಾಶ್ ಧರ್ಮಸ್ಥಳ, ಲೋಕೇಶ ಹೆಬ್ಟಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.