Mangaluru;ಖೋಟಾ ನೋಟು ಚಲಾವಣೆ ಮಾಡುತ್ತಿದ್ದವ ಪೊಲೀಸರ ಬಲೆಗೆ
Team Udayavani, Dec 17, 2023, 8:09 PM IST
ಮಂಗಳೂರು: ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಖೋಟಾ ನೋಟು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿಯನ್ನು ಡಿ.17 ರಂದು ನಗರದ ಕಂಕನಾಡಿ ಬಳಿ ಬಂಧಿಸಿದ್ದಾರೆ.
ಬಂಧಿತ ಆರೋಪಿ ಪ್ರಶ್ವಿತ್ (25 ) ಎಂಬಾತನಾಗಿದ್ದು, ಕೇರಳದ ಮಂಜೆಶ್ವರ ನಿವಾಸಿ. ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಈವರೆಗೆ 500 ರೂ ಮುಖಬೆಲೆಯ, 200 ರೂ ಮತ್ತು 100 ರೂ. ಮುಖಬೆಲೆಯ ಸುಮಾರು 8 ರಿಂದ 9 ಸಾವಿರ ರೂಗಳ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದಾನೆ.
ಆರೋಪಿಯಿಂದ 500 ರೂ ಮುಖಬೆಲೆಯ 3 ನೋಟುಗಳು, 200 ರೂ ಮುಖಬೆಲೆಯ 2 ನೋಟುಗಳು ಹಾಗೂ 100 ರೂ ಮುಖಬೆಲೆಯ 3 ನೋಟುಗಳು ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿದೆ. 4250 ರೂ ಮೌಲ್ಯದ 35 ಅಸಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ನಗರ ಮಾನ್ಯ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ರವರ ಮಾರ್ಗದರ್ಶನ, ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ರವರ ನೇತೃತ್ವದಲ್ಲಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬಂದಿಗಳು ಭಾಗಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.