ಮೃತದೇಹಗಳ ವಾರಸುದಾರರ ಪತ್ತೆಗೆ ಪೊಲೀಸರ ಹೆಣಗಾಟ! ; ಅನಾಥವಾಗಿಯೇ ಮಣ್ಣಾಗುತ್ತಿವೆ ಶವಗಳು

Team Udayavani, Dec 27, 2021, 7:30 AM IST

ಮೃತದೇಹಗಳ ವಾರಸುದಾರರ ಪತ್ತೆಗೆ ಪೊಲೀಸರ ಹೆಣಗಾಟ! ; ಅನಾಥವಾಗಿಯೇ ಮಣ್ಣಾಗುತ್ತಿವೆ ಶವಗಳು

ಸಾಂದರ್ಭಿಕ ಚಿತ್ರ

ಮಂಗಳೂರು: ಮಂಗಳೂರು ನಗರ ಭಾಗದಲ್ಲಿ ಮೃತಪಟ್ಟ ಅಪರಿಚಿತರ ಸಂಬಂಧಿಕರನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ಸವಾಲಾಗಿದ್ದು, ಅನೇಕ ಶವಗಳು ಅನಾಥವಾಗಿಯೇ ಮಣ್ಣಾಗುತ್ತಿವೆ.

ರೈಲು ನಿಲ್ದಾಣ, ಬಸ್‌ ನಿಲ್ದಾಣ, ಮೈದಾನ, ಸಮುದ್ರ, ನದಿ ತಟ ಮೊದಲಾದ ಸಾರ್ವಜನಿಕ ಸ್ಥಳಗಳಲ್ಲಿ ಮೃತಪಟ್ಟವರ, ವೆನ್ಲಾಕ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದವರ ಸಂಬಂಧಿಕರನ್ನು ಪತ್ತೆ ಹಚ್ಚಲು ಪೊಲೀಸರು ಇನ್ನಿಲ್ಲದ ಪ್ರಯತ್ನ ನಡೆಸಿದರೂ ಪ್ರಯೋಜನವಾಗುತ್ತಿಲ್ಲ. ಮಂಗಳೂರು ದಕ್ಷಿಣ (ಪಾಂಡೇಶ್ವರ) ಹಾಗೂ ಮಂಗಳೂರು ಉತ್ತರ (ಬಂದರು) ಪೊಲೀಸ್‌ ಠಾಣೆಗಳಲ್ಲಿ ತಿಂಗಳಿಗೆ ಸರಾಸರಿ 10ರಿಂದ 12 ಶವಗಳು ಪತ್ತೆಯಾಗುತ್ತವೆ. ಇದರಲ್ಲಿ ಶೇ.50ಕ್ಕೂ ಅಧಿಕ ಶವಗಳ ವಾರಸುದಾರರು ಯಾರೆಂಬುದೇ ಪತ್ತೆಯಾಗುತ್ತಿಲ್ಲ.

ಬೇಡವಾದವೆ  ಶವಗಳು ? : 

ಕೆಲವು ಪ್ರಕರಣಗಳಲ್ಲಿ ಪೊಲೀಸರ ಪ್ರಯತ್ನದಿಂದಾಗಿ ದ.ಕ. ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆ, ಹೊರ ರಾಜ್ಯಗಳಿಂದಲೂ ವಾರಸುದಾರರು ಬಂದು ಶವಗಳನ್ನು ಗುರುತಿಸಿ ತಮ್ಮ ಊರಿಗೆ ಕೊಂಡೊಯ್ದಿದ್ದಾರೆ. ಇನ್ನು ಕೆಲವರು ಇಲ್ಲಿಯೇ ಅಂತ್ಯ ಸಂಸ್ಕಾರ ಮಾಡಿಸಿದ್ದಾರೆ. ಆದರೆ, ಇನ್ನು ಕೆಲವರು ಶವಗಳನ್ನು ಗುರುತಿಸಿದ್ದರೂ ಕೊಂಡೊಯ್ಯಲು ಹಿಂದೇಟು ಹಾಕಿರುವುದೂ ಇದೆ. ಕೊರೊನಾ ಅನಂತರದ ದಿನಗಳಲ್ಲಿ ಈ ರೀತಿಯ ಅಪರಿಚಿತ ಶವಗಳನ್ನು ಅದರ ವಾರಸುದಾರರು ನಿರ್ಲಕ್ಷಿಸುತ್ತಿರುವಂತೆ ಕಂಡುಬರುತ್ತಿದೆ. ಅಲ್ಲದೆ ಕೆಲವೊಮ್ಮೆ ವಾರಸುದಾರರಿದ್ದರೂ ಅವರು ಶವವನ್ನು ಸ್ವೀಕರಿಸಲು ಹಿಂದೇಟು ಹಾಕುವ ಹಿನ್ನೆಲೆಯಲ್ಲಿ ಅಪರಿಚಿತವಾಗಿಯೇ ಶವಗಳು ಮಣ್ಣಾಗುತ್ತಿವೆ ಎನ್ನುತ್ತಾರೆ ಪೊಲೀಸ್‌ ಸಿಬಂದಿ.

ವರ್ಷಕ್ಕೆ 90ಕ್ಕೂ ಅಧಿಕ : 

ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ 2021ರಲ್ಲಿ 30 ಅಪರಿಚಿತ ಶವಗಳು ಪತ್ತೆಯಾಗಿದ್ದು ಇದರಲ್ಲಿ ಶವಗಳ ವಾರಸುದಾರರು ಪತ್ತೆಯಾಗಿರುವುದು ಶೇ. 40ಕ್ಕಿಂತಲೂ ಕಡಿಮೆ. 2020ರಲ್ಲಿ 38 ಅಪರಿಚಿತ ಶವಗಳು ಪತ್ತೆಯಾಗಿದ್ದು 7 ಪುರುಷರು ಮತ್ತು ಒಬ್ಬರು ಹೆಂಗಸಿನ ಶವದ ವಾರಸುದಾರರು ಮಾತ್ರ ಪತ್ತೆಯಾಗಿದ್ದರು. ಮಂಗಳೂರು ಉತ್ತರ ಪೊಲೀಸ್‌ ಠಾಣೆಯಲ್ಲಿ ತಿಂಗಳಿಗೆ 4ರಿಂದ 5ರಂತೆ ವರ್ಷಕ್ಕೆ ಸುಮಾರು 60 ಅಪರಿಚಿತ ಶವಗಳು ಪತ್ತೆಯಾಗುತ್ತಿವೆ. ಇದರಲ್ಲಿ ಶೇ.50ರಷ್ಟು ವಾರಸುದಾರರ ಪತ್ತೆ ಸಾಧ್ಯವಾಗಿಲ್ಲ. ಅಪರಿಚಿತ ಶವಗಳ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟನೆ, ಎಲ್ಲ ಪೊಲೀಸ್‌ ಠಾಣೆಗಳಿಗೆ ಮಾಹಿತಿ ರವಾನೆ, ಬ್ಯಾನರ್‌ ಅಳವಡಿಕೆ, ಬೇರೆ ಠಾಣೆಗಳಲ್ಲಿ ನಾಪತ್ತೆಯಾದ ಪ್ರಕರಣಗಳ ಪರಿಶೀಲನೆ ಮೊದಲಾದ ಎಲ್ಲ ರೀತಿಯ ಪ್ರಯತ್ನಗಳನ್ನು ಪೊಲೀಸರು ನಡೆಸುತ್ತಿದ್ದಾರೆ. ಆದರೂ ಅನೇಕ ಶವಗಳ ವಾರಸುದಾರರ ಪತ್ತೆ ಸಾಧ್ಯವಾಗಿಲ್ಲ.

ಶವಾಗಾರದಲ್ಲಿ ಜಾಗದ ಕೊರತೆ : 

ಸಾಮಾನ್ಯವಾಗಿ ಅಪರಿಚಿತ ಶವಗಳನ್ನು ಒಂದು ವಾರ ಶವಾಗಾರದಲ್ಲಿಟ್ಟು ವಾರಸುದಾರರಿಗಾಗಿ ಕಾಯಲಾಗುತ್ತದೆ. ಒಂದು ವೇಳೆ ಕೊಳೆತ ಸ್ಥಿತಿಯಲ್ಲಿದ್ದರೆ ಅದನ್ನು 2-3 ದಿನಗಳಲ್ಲೇ ವಿಲೇವಾರಿ ಮಾಡಲಾಗುತ್ತದೆ. ಶವಾಗಾರದ ಶೈತ್ಯಾಗಾರದಲ್ಲಿ ಇತರ ಶವಗಳನ್ನು ಕೂಡ ಇಡಬೇಕಾಗಿರುವುದರಿಂದ ಕೆಲವೊಮ್ಮೆ ಶೈತ್ಯಾಗಾರದಲ್ಲೂ ಜಾಗದ ಕೊರತೆ ಎದುರಾಗುತ್ತದೆ.

ಮಣ್ಣಲ್ಲಿ ಹೂಳುವುದು ಕಡ್ಡಾಯ : 

ಅಪರಿಚಿತ ಶವಗಳನ್ನು ಮಣ್ಣಿನಲ್ಲೇ ಹೂಳಬೇಕಿದೆ. ಒಂದು ವೇಳೆ ಯಾವತ್ತಾದರೂ ಶವದ ವಾರಸುದಾರರು ಬಂದರೆ ಅದನ್ನು ಕಾನೂನಾತ್ಮಕವಾಗಿ ದೃಢೀಕರಿಸಿ ಕಳೇಬರ ಹಸ್ತಾಂತರಿಸಲು ಸಾಧ್ಯವಾಗಬೇಕೆಂಬ ದೃಷ್ಟಿಯಿಂದ ಮಣ್ಣಿನಲ್ಲಿ ಹೂಳಲಾಗುತ್ತದೆ.

ಪತ್ತೆಗೆ ಗರಿಷ್ಠ ಪ್ರಯತ್ನ:

ಅಪರಿಚಿತ ಶವಗಳ ವಾರಸುದಾರರ ಪತ್ತೆಗೆ ಪೊಲೀಸರು ಗರಿಷ್ಠ ಪ್ರಯತ್ನಗಳನ್ನು ಮಾಡುತ್ತಾರೆ. ಆದರೆ, ಕೆಲವೊಂದು ಶವಗಳ ವಾರಸುದಾರರು ಪತ್ತೆಯಾಗುವುದಿಲ್ಲ. ಮೃತದೇಹ ಯಾವ ಸ್ಥಿತಿಯಲ್ಲಿದೆ ಎಂಬುದನ್ನು ಗಮನಿಸಿ ಅದನ್ನು ಎಷ್ಟು ದಿನಗಳವರೆಗೆ ರಕ್ಷಿಸಿಡಬಹುದು ಎಂಬುದನ್ನು ನಿರ್ಧರಿಸಲಾಗುತ್ತದೆ.-ಎನ್‌. ಶಶಿಕುಮಾರ್‌, ಪೊಲೀಸ್‌ ಆಯುಕ್ತರು, ಮಂಗಳೂರು 

-ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ

Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ

Mangaluru: ಪಿಲಿಕುಳ ಕಂಬಳ; ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

Mangaluru: ಪಿಲಿಕುಳ ಕಂಬಳ; ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

BJP Protest: ರೈತರ ಜಮೀನು ವಕ್ಫ್ ಖಾತೆಗೆ ಭೂಪರಿವರ್ತನೆ

BJP Protest: ರೈತರ ಜಮೀನು ವಕ್ಫ್ ಖಾತೆಗೆ ಭೂಪರಿವರ್ತನೆ

Mangaluru: ಮಹಾಕಾಳಿಪಡ್ಪು ಕೆಳಸೇತುವೆ ಜನವರಿಯಲ್ಲಿ ಪೂರ್ಣ

Mangaluru: ಮಹಾಕಾಳಿಪಡ್ಪು ಕೆಳಸೇತುವೆ ಜನವರಿಯಲ್ಲಿ ಪೂರ್ಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.