ಮಂಗಳೂರು: ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಕರೆ ದೂರು ದಾಖಲು
Team Udayavani, Dec 23, 2019, 10:30 PM IST
ಮಂಗಳೂರು: ನಗರದಲ್ಲಿ ಡಿ.19ರಂದು ನಡೆದ ಅಹಿತಕರ ಘಟನೆಗಳ ಬಳಿಕ ಈಗ ಕೆಲವು ಪೊಲೀಸ್ ಅಧಿಕಾರಿಗಳಿಗೆ ಮತ್ತು ಅವರ ಕುಟುಂಬದವರಿಗೆ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬರುತ್ತಿದ್ದು, ಈ ಬಗ್ಗೆ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಪ್ರತಿಭಟನೆಗೆ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ 19ರಂದು ನಗರದ ಸ್ಟೇಟ್ ಬ್ಯಾಂಕ್ ಮತ್ತು ಬಂದರ್ ಪರಿಸರದ ನೆಲ್ಲಿಕಾಯಿ ರಸ್ತೆ, ಅಜೀಜುದ್ದೀನ್ ರಸ್ತೆ, ಮಿಷನ್ ರಸ್ತೆ ಮತ್ತಿತರ ಕಡೆ ಪ್ರತಿಭಟನಾಕಾರರು ಗುಂಪು ಸೇರಿದ್ದರಿಂದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ಸಂಘರ್ಷದಲ್ಲಿ ಗೋಲಿಬಾರ್‌ಗೆ ಇಬ್ಬರು ಸಾವನ್ನಪ್ಪಿದ್ದರು. ಘಟನೆ ಬಳಿಕ ಪೊಲೀಸ್ ಕಾರ್ಯಾಚರಣೆ ವಿರುದ್ಧ ಆಕ್ರೋಶಿತರಾದ ಕೆಲವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕೊಲೆ ಬೆದರಿಕೆ ಹಾಕಲು ಆರಂಭಿಸಿದ್ದಾರೆ. ಇದರಿಂದಾಗಿ ಕೆಲವು ಪೊಲೀಸ್ ಅಧಿಕಾರಿಗಳಿಗೂ ಗನ್‌ಮ್ಯಾನ್ ಭದ್ರತೆ ಒದಗಿಸಲಾಗಿದೆ.
ಕದ್ರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಾಂತಾರಾಮ ಮತ್ತು ಕುಟುಂಬದವರಿಗೆ ಹೆಚ್ಚಿನ ಬೆದರಿಕೆ ಕರೆಗಳು ಬರುತ್ತಿವೆ. ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶಾಂತಾರಾಮ ಮತ್ತವರ ಕುಟುಂಬದವರಿಗೆ ಜೀವ ಬೆದರಿಕೆಯನ್ನು ಹಾಕುತ್ತಿರುವ ಹಿನ್ನೆಲೆಯಲ್ಲಿ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ಸ್‌ಪೆಕ್ಟರ್ ಶಾಂತಾರಾಮ ಮತ್ತು ಇತರ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಅನಾಮಧೇಯ ಬೆದರಿಕೆ ಕರೆಗಳು ನಿರಂತರವಾಗಿ ಬರುತ್ತಿವೆ. ಹಾಗಾಗಿ ಕಿಡಿಗೇಡಿಗಳ ವಿರುದ್ಧ ಕೇಸು ದಾಖಲಿಸಲು ನಿರ್ಧರಿಸಲಾಗಿದೆ.
– ಡಾ| ಹರ್ಷ ಪಿ.ಎಸ್., ಪೊಲೀಸ್ ಕಮಿಷನರ್
ದಾಖಲೆ ಕಳುಹಿಸಲು ಕಮಿಷನರ್ ಟ್ವೀಟ್
ಮಂಗಳೂರು: ಡಿ.19ರಂದು ನಗರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟ ಯಾವುದೇ ಫೂಟೋ, ವಿಡಿಯೋಗಳಿದ್ದಲ್ಲಿ ಸಾರ್ವಜನಿಕರು ವಾಟ್ಸ್‌ಆ್ಯಪ್ ನಂಬರ್ 9480802327ಗೆ ಕಳುಹಿಸಿ ಕೊಡಿ ಅಥವಾ [email protected] ಇ-ಮೇಲ್ ಮಾಡಬಹುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಡಾ| ಹರ್ಷ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.