ಜನಸ್ನೇಹಿಯಾಗುವತ್ತ ಮಂಗಳೂರು ಪೊಲೀಸರ ಹೆಜ್ಜೆ


Team Udayavani, Jul 10, 2019, 5:00 AM IST

s-28

ಮಹಾನಗರ: ಡ್ರಗ್ಸ್‌- ಗಾಂಜಾ, ಕ್ರಿಕೆಟ್ ಬೆಟ್ಟಿಂಗ್‌ ಸಹಿತ ನಗರದಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಸಲುವಾಗಿ ಇದೀಗ ಸಾಮಾಜಿಕ ಜಾಲ ತಾಣವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಸದ್ಬಳಕೆ ಮಾಡಿಕೊಳ್ಳುವುದಕ್ಕೆ ನಗರ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್ ತೀರ್ಮಾನಿಸಿದ್ದಾರೆ.

ಪೊಲೀಸರು ಸಾರ್ವಜನಿಕರ ಸ್ನೇಹಿ ಯಾಗುವ ನಿಟ್ಟಿನಲ್ಲಿ ನಗರ ವ್ಯಾಪ್ತಿಯಲ್ಲಿ ಮಾಹಿತಿ, ಮಾರ್ಗದರ್ಶನ ನೀಡುವ ಸಲುವಾಗಿ ಅಳವಡಿಸಿದ್ದ ಡಿಜಿಟಲ್ ಡಿಸ್‌ಪ್ಲೇಗಳಲ್ಲಿ ಇದೀಗ ‘ಯಾವುದೇ ರೀತಿಯ ದೂರುಗಳಿದ್ದರೆ, ಅಪರಾಧ ನಡೆ ಯುತ್ತಿದ್ದರೆ [email protected]ಮೈಲ್ ಮಾಡಿ, 9480802300 ಮೊಬೈಲ್ ಸಂಖ್ಯೆಗೆ ವಾಟ್ಸಪ್‌ ಮಾಡಿ’ ಎಂಬ ಸಂದೇಶ ಬರುತ್ತಿದೆ.

ಪೊಲೀಸ್‌ ಆಯುಕ್ತರು ಸಕ್ರಿಯ
ವಾಟ್ಸಪ್‌ ಸಂಖ್ಯೆ ಸಹಿತ ಮೈಲ್ ವಿಳಾಸವನ್ನು ನಗರದ ಡಿಜಿಟಲ್ ಡಿಸ್‌ಪ್ಲೇಗಳಲ್ಲಿ ಅಳವಡಿಸುತ್ತಿದ್ದಂತೆ ಸಾರ್ವಜನಿಕರಿಂದಲೂ ಈಗ ಉತ್ತಮ ಸ್ಪಂದನೆ ಸಿಕ್ಕಿದೆ. ಸಾಮಾಜಿಕ ಜಾಲತಾಣ ಗಳಲ್ಲಿ ಪೊಲೀಸ್‌ ಆಯುಕ್ತರು ಸಕ್ರಿಯ ರಾಗುತ್ತಿದ್ದಂತೆ, ಸಾರ್ವಜನಿಕ ರಿಂದಲೂ ನೂರಾರು ದೂರುಗಳು ಬರುತ್ತಿದ್ದು, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮುಖ್ಯವಾಗಿ, ಸೋಮವಾರ ಸಾರ್ವಜನಿ ಕರೊಬ್ಬರು ಪೊಲೀಸರ ಅಧಿಕೃತ ಸಾಮಾ ಜಿಕ ಜಾಲ ತಾಣಕ್ಕೆ ನೀಡಿದ್ದ ಮಾಹಿತಿಯ ಪ್ರಕಾರ ಸುರ ತ್ಕಲ್ ಬಳಿಯ ಹೊಟೇಲ್ಗೆ ದಾಳಿ ನಡೆಸಿದ್ದ ಪೊಲೀಸರು 500 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದರು. ಅಲ್ಲದೆ, ಗಾಂಜಾ ಸೇವಿಸುತ್ತಿದ್ದ ಮೂವರನ್ನು ಬಂಧಿಸಿ ನಾಲ್ಕು ಮಂದಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣ ಭೇದಿಸಲು ಪೊಲೀಸರಿಗೆ ನೆರವಾಗಿದ್ದು, ಸಾಮಾಜಿಕ ಜಾಲತಾಣ.

ಸ್ಥಳೀಯಾಡಳಿತ ಸಕ್ರಿಯವಾಗಿಲ್ಲ
ಇಂದಿನ ತಂತ್ರಜ್ಞಾನ ವ್ಯವಸ್ಥೆಗೆ ತಕ್ಕಂತೆ ಮಹಾನಗರ ಪಾಲಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿಲ್ಲ. ‘ಮಂಗಳೂರು ಸಿಟಿ ಕಾರ್ಪೊರೇಷನ್‌’ ಎಂಬ ಫೇಸ್‌ಬುಕ್‌ ಪೇಜ್‌ ಇದ್ದರೂ ಅದರಲ್ಲಿ ಅನಗತ್ಯ ವಿಷಯಗಳು ಶೇರ್‌ ಆಗುತ್ತಿವೆ. ಇನ್ನು, ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ಸಾಮಾಜಿಕ ಜಾಲ ತಾಣಗಳಿಲ್ಲ. ಫೇಸ್‌ಬುಕ್‌ನಲ್ಲಿ ಡಿಸಿ ಕಚೇರಿ ಪೇಜ್‌ ಇದ್ದರೂ ಅವುಗಳಲ್ಲಿ ಯಾವುದೇ ಪೋಸ್ಟ್‌ ಗಳನ್ನು ಹಾಕಲಾಗಿಲ್ಲ. ಇನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಅಧಿಕೃತ ಫೇಸ್‌ಬುಕ್‌ ಜಾಲ ತಾಣವಿದ್ದು, ಮಾಹಿತಿ ಪೋಸ್ಟ್‌ ಮಾಡಲಾಗುತ್ತಿದೆ.

ಕುಂದು-ಕೊರತೆಗಳಿಗೆ ಸ್ಪಂದನೆ
ಈಗ ಪ್ರಧಾನಿ, ರಾಷ್ಟ್ರಪತಿ ಕಾರ್ಯಾಲಯದಿಂದ ಹಿಡಿದು ಗ್ರಾಮ ಪಂಚಾಯತ್‌ವರೆಗೆ ಎಲ್ಲ ಕಡೆಯು ಅಧಿಕೃತ ಟ್ವಿಟರ್‌ ಖಾತೆ ತೆರೆದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ.

ಪೊಲೀಸರು ಜನಸ್ನೇಹಿಯಾಗಿ

ನಗರ ಪೊಲೀಸರು ಟ್ವಿಟ್ಟರ್‌ ಖಾತೆ, ದೂರಿಗಾಗಿ ಇರುವ ವಾಟ್ಸಪ್‌ ನಲ್ಲಿ ಸಕ್ರಿಯವಾಗಿದೆ. ಟ್ವಿಟ್ಟರ್‌ ಖಾತೆಯನ್ನು ಖುದ್ದು ನಾನೇ ಪರಿಶೀಲನೆ ಮಾಡುತ್ತಿದ್ದೇನೆ. ಪೊಲೀಸರು ಜನಸ್ನೇಹಿಯಾಗುವ ಉದ್ದೇಶದಿಂದ ಹಿರಿಯ ಪೊಲೀಸ್‌ ಅಧಿಕಾರಿಗಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಮನವಿ ಮಾಡುತ್ತೇನೆ.
– ಸಂದೀಪ್‌ ಪಾಟೀಲ್, ನಗರ ಪೊಲೀಸ್‌ ಆಯುಕ್ತ

ಸಮಸ್ಯೆ ತಿಳಿಯಲು ಸಹಕಾರಿ

ಮನಪಾವನ್ನು ಜನಸ್ನೇಹಿಯಾಗಿ ಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯನ್ನು ಆರಂಭಿಸುತ್ತೇವೆ. ಇದರಿಂದ ಸಾರ್ವಜನಿಕರ ಸಮಸ್ಯೆಗಳನ್ನು ತಿಳಿಯಲು ಸಹಕಾರಿಯಾಗುತ್ತದೆ.
– ಮಹಮ್ಮದ್‌ ನಜೀರ್‌, ಪಾಲಿಕೆ ಆಯುಕ್ತ
ನವೀನ್‌ ಭಟ್ ಇಳಂತಿಲ

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.