ಮಂಗಳೂರು ರೈಲ್ವೇ ವಿಭಾಗ: ಶೀಘ್ರ  ಸಭೆ


Team Udayavani, Dec 28, 2018, 10:11 AM IST

nalin.jpg

ಮಂಗಳೂರು: ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಕೇಂದ್ರ ರೈಲ್ವೇ ಸಚಿವ ಪಿಯೂಶ್‌ ಗೋಯಲ್‌ ಅವರನ್ನು ಹೊಸದಿಲ್ಲಿಯಲ್ಲಿ ಗುರುವಾರ ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈಲ್ವೇ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.

ಮಂಗಳೂರು ರೈಲ್ವೇ ವಿಭಾಗ ಮಂಜೂರು ಮಾಡಬೇಕು ಎಂದು ಸಂಸದರು ಆಗ್ರಹಿಸಿದರು. ಪ್ರತಿಕ್ರಿಯೆ ನೀಡಿದ ಸಚಿವರು, ಮಂಗಳೂರು ಪ್ರತ್ಯೇಕ ರೈಲ್ವೇ ವಿಭಾಗ ರಚನೆ ಕುರಿತು ಹೊಸದಿಲ್ಲಿಯಲ್ಲಿ ರೈಲ್ವೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದು ಕೂಲಂಕಷವಾಗಿ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.

ಮಂಗಳೂರು ಕೇಂದ್ರ ರೈಲು ನಿಲ್ದಾಣಕ್ಕೆ ಹೊಸ ಸುಸಜ್ಜಿತ ಕಟ್ಟಡ ನಿರ್ಮಾಣ ಹಾಗೂ ಇತರ ಮೂಲಸೌಕರ್ಯ ಅಭಿವೃದ್ಧಿ ಮಾಡಬೇಕು, ಮಂಗಳೂರು ಕೇಂದ್ರ ರೈಲು ನಿಲ್ದಾಣದಲ್ಲಿ 3 ಮತ್ತು 4ನೇ ಪ್ಲಾಟ್‌ಫಾರಂ ನಿರ್ಮಾಣ ಕಾರ್ಯ ತ್ವರಿತಗೊಳಿಸಬೇಕು. ಸುಬ್ರಹ್ಮಣ್ಯ – ಸಕಲೇಶಪುರ ಹಳಿ ದ್ವಿಪಥ ಕಾಮಗಾರಿ ಕೈಗೆತ್ತಿಕೊಳ್ಳಬೇಕು,

ಮಂಗಳೂರು – ಮಡಗಾಂವ್‌ ಡೆಮು ರೈಲನ್ನು ಪ್ರತಿನಿತ್ಯ ಓಡಿಸಬೇಕು, ದಾದರ್‌- ಮಡಗಾಂವ್‌ ಜನ್‌ ಶತಾಬ್ದಿ ಎಕ್ಸ್‌ ಪ್ರಸ್‌ ರೈಲನ್ನು ಮಂಗಳೂರಿಗೆ ಓಡಿಸಬೇಕು, ಗೇಜ್‌ ಪರಿವರ್ತನೆಯ ಸಂದರ್ಭದಲ್ಲಿ ರದ್ದಾಗಿದ್ದ ಮಂಗಳೂರನ್ನು ಹಾಸನ-ಅರಸೀಕೆರೆ ಮೂಲಕ ಹುಬ್ಬಳ್ಳಿ ಮೀರಜ್‌ ಅನ್ನು ಸಂಪರ್ಕಿಸುತ್ತಿದ್ದ ಮಹಾಲಕ್ಷ್ಮೀ ಎಕ್ಸ್‌ಪ್ರೆಸ್‌ ಪುನರಾರಂಭಿಸಬೇಕು ಹಾಗೂ ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಸೇರಿದಂತೆ ಇನ್ನೂ ಹಲವು ಬೇಡಿಕೆಗಳನ್ನು ಪೂರೈಸುವಂತೆ ಸಚಿವರಿಗೆ ಸಂಸದರು ಮನವಿ ಮಾಡಿದರು. ಸಂಸದರ ಬೇಡಿಕೆಗಳನ್ನು ಪರಿಶೀಲಿಸಿದ ಸಚಿವರು, ಈ ಎಲ್ಲ ಬೇಡಿಕೆಗಳನ್ನು ಈಡೇರಿಸು ವುದಾಗಿ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

9

Mangaluru: ಪಾಲಿಕೆ ಕಚೇರಿ ಪಕ್ಕದಲ್ಲೇ ಫುಟ್‌ಪಾತ್‌ ಅವ್ಯವಸ್ಥೆ

8

Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!

6

Mangaluru: ಕರಾವಳಿ ಖಗೋಳ ಉತ್ಸವ; ಉಲ್ಕಾ ತುಣುಕು, ನಕ್ಷತ್ರ ವೀಕ್ಷಣೆ ಅವಕಾಶ

5

Bajpe: ಇನ್ಮುಂದೆ ದೀಪಗಳಿಂದ ಬೆಳಗ‌ಲಿದೆ ವಿಮಾನ ನಿಲ್ದಾಣ ರಸ್ತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.