ಮಂಗಳೂರು: ರೌಡಿಶೀಟರ್ ಬರ್ಬರ ಹತ್ಯೆ; 2 ದಿನದ ಬಳಿಕ ಶವ ಪತ್ತೆ
Team Udayavani, Jul 25, 2017, 11:33 AM IST
ಮಂಗಳೂರು: ರೌಡಿಶೀಟರ್ ವಾಮಂಜೂರು ಪವನ್ ರಾಜ್ ಶೆಟ್ಟಿ(20) ಎಂಬ ಯುವಕನನ್ನು ದುಷ್ಕರ್ಮಿಗಳು ಭಾನುವಾರ ರಾತ್ರಿ ತಲವಾರಿನಿಂದ ಕಡಿದು ಕೊಲೆ ಮಾಡಿ ಪರಾರಿಯಾಗಿದ್ದು, ಶವ ಮಂಗಳವಾರ ಬೆಳಗ್ಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. .
ಈತನ ತಂದೆ ರೌಡಿ ರೋಹಿ 8 ವರ್ಷದ ಹಿಂದೆ ಬರ್ಬರವಾಗಿ ಹತ್ಯೆಗೀಡಾಗಿದ್ದ. ಹತ್ಯೆಗೀಡಾದ ಪವನ್ ರಾಜ್ ಮೂರು ಕೊಲೆ ಪ್ರಕರಣದ ಆರೋಪಿಯಾಗಿದ್ದ ಎಂದು ತಿಳಿದು ಬಂದಿದೆ.
ಅಮೃತನಗರ ಫಸ್ಟ್ ಬ್ಲಾಕ್‌ನಲ್ಲಿ ಹತ್ಯೆಗೈಯಲಾಗಿದ್ದು ಶವದ ಬಳಿಯೇ ತಲವಾರುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.
ಈತ ಗಾಂಜಾ ವ್ಯವಹಾರ ಮಾಡಿಕೊಂಡಿದ್ದ ಎನ್ನಲಾಗಿದ್ದು, ಸ್ನೇಹಿತರೊಂದಿಗೆ ಪಾರ್ಟಿ ನಡೆಸುವ ವೇಳೆ ಹತ್ಯೆ ನಡೆದಿದೆ ಎನ್ನಲಾಗಿದೆ.
ಇತ್ತೀಚೆಗೆ ಜೈಲಿನಿಂದ ಜಾಮೀನು ಮೇಲೆ ಹೊರಬಂದಿದ್ದು, ಈತನ ಕೊಲೆಗೆ 2ವರ್ಷದಿಂದ ಪ್ರಯತ್ನ ನಡೆಯುತ್ತಿತ್ತೆನ್ನಲಾಗಿದೆ.
ಶವ ವಾಸನೆ ಬರುತ್ತಿದ್ದುದರಿಂದ ಜನರು ಅನುಮಾನದಲ್ಲಿ ಹುಡುಕಾಟ ನಡೆಸುವಾಗ ಹತ್ಯೆ ಬಯಲಿಗೆ ಬಂದಿದೆ.
ವಿಷಯ ತಿಳಿದ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.