ಮಂಗಳೂರು: 8ನೇ ತರಗತಿಯ ಅಯ್ಯಪ್ಪ ವ್ರತಧಾರಿ ಮೇಲೆ ನಾಲ್ಕು ಮಂದಿ ವಿದ್ಯಾರ್ಥಿಗಳಿಂದ ಹಲ್ಲೆ
Team Udayavani, Dec 20, 2022, 10:25 PM IST
ಮಂಗಳೂರು: ನಗರದ ಶಾಲೆಯೊಂದರ 8ನೇ ತರಗತಿಯ ಅಯ್ಯಪ್ಪಸ್ವಾಮಿ ವ್ರತಧಾರಿ ವಿದ್ಯಾರ್ಥಿಗೆ ಅದೇ ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಮಂಗಳವಾರ ಸಂಜೆ ನಡೆದಿದ್ದು ಕೆಲ ಹೊತ್ತು ಬಿಗುವಿನ ವಾತಾವರಣಕ್ಕೆ ಕಾರಣವಾಯಿತು.
8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ನಡುವೆ ಹಲವು ಬಾರಿ ಗಲಾಟೆ ನಡೆದಿತ್ತು. ಈ ಬಗ್ಗೆ ಶಿಕ್ಷಕರು ಎಚ್ಚರಿಕೆ ನೀಡಿದ್ದರು. ಮಂಗಳವಾರ ಕೂಡ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದು 9ನೇ ತರಗತಿಯ ವಿದ್ಯಾರ್ಥಿಗಳು ಅಯ್ಯಪ್ಪ ವ್ರತಧಾರಿ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದರು.
ಆ ವಿದ್ಯಾರ್ಥಿ ಸಂಜೆ ಶಾಲೆ ಬಿಟ್ಟ ಬಳಿಕ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಆಗ ಸ್ಥಳೀಯರು ಬಂದು ತಡೆದಿದ್ದಾರೆ.
ಗಾಯಗೊಂಡ ವಿದ್ಯಾರ್ಥಿಯನ್ನು ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಈ ವೇಳೆ ಸ್ಥಳದಲ್ಲಿ ಯುವಕರು ಜಮಾಯಿಸಿದ್ದರು. ಆ ಸಂದರ್ಭ ಬಿಗುವಿನ ವಾತಾವರಣ ಉಂಟಾಗಿತ್ತು. ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.