ಮಂಗಳೂರು: ಸಿಸಿ ಕೆಮರಾ ಸಂಖ್ಯೆ 1,830ಕ್ಕೆ
Team Udayavani, May 29, 2019, 6:10 AM IST
ಮಂಗಳೂರು: ನಗರ ಪೊಲೀಸರು ಸಾರ್ವಜನಿಕ ಸುರಕ್ಷತಾ ಕಾಯ್ದೆಯನ್ವಯ ನಡೆಸುತ್ತಿರುವ ವಿಶೇಷ ಅಭಿಯಾನದಂತೆ ಕಳೆದ ವಾರ ನಗರದಲ್ಲಿ ವಾಣಿಜ್ಯ ಸಂಕೀರ್ಣಗಳು ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಒಟ್ಟು 210 ಸಿಸಿ ಕೆಮರಾ ಅಳವಡಿಕೆಯಾಗಿವೆ. ಈ ಮೂಲಕ ನಗರದಲ್ಲಿ ಅಳವಡಿಕೆಯಾಗಿರುವ ಸಿಸಿ ಕೆಮರಾಗಳ ಸಂಖ್ಯೆ 1,830ಕ್ಕೇರಿದೆ.
ಸಾರ್ವಜನಿಕ ಸುರಕ್ಷತಾ ಕಾಯ್ದೆಯನ್ವಯ ಎಲ್ಲ ವಾಣಿಜ್ಯ ಸಂಕೀರ್ಣಗಳು, ಕಚೇರಿಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕೆಮರಾ ಅಳವಡಿಕೆ ಮಾಡುವುದು ಕಡ್ಡಾಯ. ಇದರಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಪ್ರತೀ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಸಂಕೀರ್ಣಗಳು, ಮಳಿಗೆಗಳು ಸೇರಿದಂತೆ ಸಾರ್ವಜನಿಕ ತಾಣಗಳಲ್ಲಿ ಸಿಸಿ ಕೆಮರಾ ಅಳವಡಿಕೆಯಾಗುವಂತೆ ನೋಡಿಕೊಳ್ಳುವ ಅಭಿಯಾನ ಕೈಗೊಳ್ಳಲಾಗಿತ್ತು.
ಕಾಯ್ದೆಯಂತೆ ಪ್ರತಿಯೊಂದು ಸಾರ್ವಜನಿಕ ತಾಣಗಳಲ್ಲಿ ಸಿಸಿ ಕೆಮರಾಗಳನ್ನು ಅಳವಡಿಕೆ ಮಾಡುವುದು ಕಡ್ಡಾಯವಾಗಿದೆ. ಈ ಸಂಬಂಧ ಎಲ್ಲರಿಗೂ ನೋಟಿಸ್ ನೀಡಲಾಗಿದೆ. ಇದನ್ನು ಪಾಲಿಸದವರ ವಿರುದ್ಧ ಕಾನೂನು ಕ್ರಮಗಳನ್ನು ಜರಗಿಸಲಾಗುವುದು. ನಗರದಲ್ಲಿ ಒಟ್ಟು 6,000 ಸಿಸಿ ಕೆಮರಾಗಳ ಅಳವಡಿಕೆಯಾಗುವ ನಿರೀಕ್ಷೆ ಇದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.