ಮಂಗಳೂರಿನ ಹಿರಿಯ ಟ್ರಾಫಿಕ್ ವಾರ್ಡನ್ ಜೋಸೆಫ್ ಗೊನ್ಸಾಲ್ವಿಸ್ ನಿಧನ
Team Udayavani, Aug 29, 2021, 4:08 PM IST
ಮಂಗಳೂರು: ನಗರದ ಮುಖ್ಯ ಟ್ರಾಫಿಕ್ ವಾರ್ಡನ್ ಜೋಸೆಫ್ (ಜೋ) ಗೊನ್ಸಾಲ್ವಿಸ್ ಭಾನುವಾರ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 99 ವರ್ಷ ವಯಸ್ಸಾಗಿತ್ತು.
ಜನವರಿ 1, 1921 ರಂದು ಜನಿಸಿದ ಜೋ, 2015 ರಲ್ಲಿ ನಗರದ ಟ್ರಾಫಿಕ್ ವಾರ್ಡನ್ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಆಗ ಅವರಿಗೆ 94 ವರ್ಷ ವಯಸ್ಸಾಗಿತ್ತು.
ನಿವೃತ್ತಿಯ ನಂತರ, ಸಮಾಜಕ್ಕೆ ಸೇವೆ ಮಾಡುವ ಉದ್ದೇಶದಿಂದ ಜೋ ಟ್ರಾಫಿಕ್ ವಾರ್ಡನ್ ಆಗಲು ಯೋಚಿಸಿದ್ದರು. ನಗು ಮುಖದೊಂದಿಗೆ ಜೋ ಅವರು ನಗರದ ಹಾಟ್ ಸ್ಪಾಟ್‌ಗಳಲ್ಲಿ ಟ್ರಾಫಿಕ್ ನಿರ್ವಹಿಸುತ್ತಿರುವುದು ಕಂಡುಬರುತ್ತಿತ್ತು.
ಇದನ್ನೂ ಓದಿ:ವಿವಾಹಿತೆಗೆ ಮೆಸೇಜ್ ಕಳಿಸಿದ ಯುವಕ: ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ
ಸುರಕ್ಷಿತ ಚಾಲನೆ ಮತ್ತು ಇತರ ಪ್ರಮುಖ ವಿಷಯಗಳ ಕುರಿತು ಅವರು ಆಗಾಗ್ಗೆ ಯುವಜನರೊಂದಿಗೆ ಸಂವಾದ ನಡೆಸುತ್ತಿದ್ದರು. 2019 ರಲ್ಲಿ, ಟ್ರಾಫಿಕ್ ನಿರ್ವಹಣೆಯಲ್ಲಿ ಶ್ಲಾಘನೀಯ ಕೆಲಸ ಮಾಡಿದ್ದಕ್ಕಾಗಿ ನಗರ ಪೊಲೀಸರು ಅವರನ್ನು ಗೌರವಿಸಿದರು.
ಕೊನೆಯವರೆಗೂ ಜೋ ಸಾಮಾಜಿಕ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.